ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ.9ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಉಚಿತ

|
Google Oneindia Kannada News

ಕೊರೊನಾ ಸೋಂಕಿನ ಅಬ್ಬರ ಕೊಂಚ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ತಿರುಪತಿ ತಿಮ್ಮಪ್ಪನ ಭಕ್ತರಿಗೆ ತಿರುಪತಿ ದೇಗುಲದ ಆಡಳಿತ ಮಂಡಳಿ (ಟಿಟಿಡಿ) ಸಿಹಿಸುದ್ದಿ ನೀಡಿದೆ.

ಸೆಪ್ಟೆಂಬರ್ 9 ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಉಚಿತ ಎಂದು ಹೇಳಲಾಗಿದೆ. ಇಂದಿನಿಂದ ಪ್ರಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಸರ್ವದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯಲಿದೆ.

ಟಿಟಿಡಿ ಮುಖ್ಯಸ್ಥರಾಗಿ ಸುಬ್ಬಾರೆಡ್ಡಿ ಮರು ನೇಮಕ, ಸುಧಾ ಮೂರ್ತಿಯೂ ಆಯ್ಕೆ?ಟಿಟಿಡಿ ಮುಖ್ಯಸ್ಥರಾಗಿ ಸುಬ್ಬಾರೆಡ್ಡಿ ಮರು ನೇಮಕ, ಸುಧಾ ಮೂರ್ತಿಯೂ ಆಯ್ಕೆ?

ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಲಾಗುತ್ತದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು.

 Andhra Pradesh: Free Darshan To Resume At Tirupati From September 09

ಸಾಂಪ್ರದಾಯಿಕವಾಗಿ ಬಳಸಲಾಗುವ ಪ್ಲಾಸ್ಟಿಕ್ ಬ್ಯಾಗ್‍ಗಳು, ಪೆಟ್ರೋಕೆಮಿಕಲ್ಸ್‍ನಿಂದ ತಯಾರಿಸಲ್ಪಟ್ಟಿರುತ್ತವೆ. ಅವು ಆರೋಗ್ಯಕ್ಕೆ ಹಾನಿಕಾರಕ. ಅಂಥ ಬ್ಯಾಗ್‌ಗಳು ಮಣ್ಣಿನಲ್ಲಿ ಕೊಳೆಯಲು 200ಕ್ಕೂ ಹೆಚ್ಚು ವರ್ಷಗಳನ್ನು ತೆಗೆದುಕೊಳ್ಳುತ್ತವೆ.

ಆದರೆ ಡಿಆರ್‍ಡಿಒ ತಯಾರಿಸಿರುವ ಬ್ಯಾಗ್‍ಗಳು, ಆರೋಗ್ಯಕ್ಕೆ ಹಾನಿಕಾರವಲ್ಲ. ಮಣ್ಣಿನಲ್ಲಿ ಬೇಗನೇ ಕೊಳೆಯುತ್ತವೆ. ಅಲ್ಲದೆ ಇವುಗಳ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದರು.

ಈ ಹಿಂದೆ ತಿರುಪತಿಯಲ್ಲಿ ನೀಡಲಾಗುವ ಲಡ್ಡು ಪ್ರಸಾದದ ವಿಲೇವಾರಿಗಾಗಿ ಪರಿಸರ ಸ್ನೇಹಿ ಬ್ಯಾಗ್‍ಗಳನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ತಯಾರಿಸಿತ್ತು. ಹೊಸ ಬ್ಯಾಗ್‍ಗಳಲ್ಲಿ ಲಡ್ಡು ವಿತರಿಸುವ ಕೌಂಟರ್ ಅನ್ನು ಡಿಆರ್‍ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎಸ್ ಜವಾಹರ್ ರೆಡ್ಡಿ ಉದ್ಘಾಟಿಸಿದ್ದರು.

ಕೊರೊನಾ ಎರಡನೇ ಅಲೆ ಬಂದ ಬಳಿಕ ಏಪ್ರಿಲ್‌ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಇತ್ತೀಚೆಗಷ್ಟೇ ವೈವಿ ಸುಬ್ಬಾರೆಡ್ಡಿಯವರು ಶೀಘ್ರವೇ ಭಕ್ತರಿಗೆ ಉಚಿತ ದರ್ಶನ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದರು.

ಇದೀಗ ಸೆಪ್ಟೆಂಬರ್ 9 ರಿಂದಲೇ ಭಕ್ತರಿಗೆ ಉಚಿತ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ದಿನ ಕೇವಲ 2 ಸಾವಿರ ಭಕ್ತರಿಗೆ ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು.

ಇದೀಗ ಕೇವಲ ಚಿತ್ತೂರಿನ ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ, ದೇವಸ್ಥಾನವು ಬುಧವಾರ ಬೆಳಗ್ಗೆ 6 ಗಂಟೆಯಿಂದ ಪೂಜೆಗಳು ಆರಂಭವಾಗಿವೆ.ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು, ಮಧ್ಯೆ ಮಧ್ಯೆ ಕೆಲವು ಬಾರಿ ತೆರೆಯಲಾಗಿತ್ತು. ಈ ಮೊದಲು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ವಿಶ್ವವಿಖ್ಯಾತ ತಿರುಪತಿ ತಿರುಮಲ ದೇವಾಲಯವು ತಿಮ್ಮಪ್ಪನ ದರ್ಶನ ಪಡೆಯಲು ಭಕ್ತರಿಗಾಗಿ ವಿಶೇಷ ಟಿಕೆಟ್​ ಬಿಡುಗಡೆ ಮಾಡಿತ್ತು.

ವಿಶೇಷ ದರ್ಶನ ಪಡೆಯ ಬಯಸುವವರು 300 ರೂಪಾಯಿ ನೀಡಿ ಈ ಟಿಕೆಟ್​ ಪಡೆದುಕೊಳ್ಳಬೇಕು. ಪ್ರತಿ ದಿನ 3 ಸಾವಿರ ಟಿಕೆಟ್​ಗಳನ್ನು ತಿರುಪತಿ ತಿರುಮಲ ದೇವಾಲಯದ ಆಡಳಿತ ಮಂಡಳಿ ಬಿಡುಗಡೆ ಮಾಡುತ್ತಿದೆ.

ಕೊರೊನಾ ಎರಡನೇ ಅಲೆಯ ಬಳಿಕ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ದೇವಸ್ಥಾನ ಆಡಳಿತ ಮಂಡಳಿ 4 ತಿಂಗಳಿಗೆ ಕೇವಲ 5 ಸಾವಿರ ಟಿಕೆಟ್‌ಗಳನ್ನು ಮಾತ್ರ ಹಂಚಿಕೆ ಮಾಡಿದ್ದಾರೆ. ಇದರಿಂದಾಗಿ ಉಚಿತ ದರ್ಶನ ಸಂಪೂರ್ಣವಾಗಿ ನಿಂತು ಹೋಗಿದೆ.

Recommended Video

ಹಬ್ಬ ಹೇಗೆ ಮಾಡಬೇಕು ಅಂತ ತಿಳಿ ಹೇಳಿದ ಬಿಬಿಎಂಪಿ ಕಮಿಷನರ್!! | Oneindia Kannada

ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಟಿಟಿಡಿ ಜುಲೈ 28ರಿಂದ ದಿನಕ್ಕೆ 3 ಸಾವಿರ ವಿಶೇಷ ಪ್ರವೇಶ ಟಿಕೆಟ್ ನೀಡಿದೆ. ಈ ತಿಂಗಳ 28 ರಿಂದ ಆಗಸ್ಟ್ 30ರವರೆಗೆ ದಿನಕ್ಕೆ 3 ಸಾವಿರ ಟಿಕೆಟ್‌ಗಳ ಹೆಚ್ಚಳದಿಂದ ಸುಮಾರು ಹತ್ತು ಲಕ್ಷ ಟಿಕೆಟ್‌ಗಳು ಭಕ್ತರಿಗೆ ಲಭ್ಯವಾಗಲಿದೆ.

English summary
Tirumala Tirupati Devastanam has decided to resume free Darshan at Thirumala temple from September 09.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X