ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ತಪಾಸಣೆಗೆ ಬ್ರಹ್ಮಾಸ್ತ್ರ!

|
Google Oneindia Kannada News

ಅಮರಾವತಿ, ಏಪ್ರಿಲ್.23: ಕೊರೊನಾ ವೈರಸ್ ವಿರುದ್ಧ ಹೋರಾಟವೆಷ್ಟು ಮುಖ್ಯವೋ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಯೂ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವುದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯು ಅನುಮತಿ ನೀಡಿದೆ.

ದಕ್ಷಿಣ ಕೊರಿಯಾದಿಂದ ರಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನು ವೈದ್ಯರ ಸುರಕ್ಷತೆಗಾಗಿ ಆಮದು ಮಾಡಿಕೊಳ್ಳಲು ಇದೀಗ ಅನುಮತಿ ಸಿಕ್ಕಿದೆ. ಆಂಧ್ರ ಪ್ರದೇಶದಲ್ಲಿ ಈ ರಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನು ಬಳಸಿಕೊಂಡು ವೈದ್ಯಕೀಯ ಸಿಬ್ಬಂದಿಯು ಕೊರೊನಾ ವೈರಸ್ ತಪಾಸಣೆ ನಡೆಸುತ್ತಿದ್ದಾರೆ.

ಪೊಲೀಸರಿಗೂ ಕೊರೊನಾ ವೈರಸ್ ತಪಾಸಣೆ ನಡೆಸಲು ಪ್ರತ್ಯೇಕ ವ್ಯವಸ್ಥೆ ಪೊಲೀಸರಿಗೂ ಕೊರೊನಾ ವೈರಸ್ ತಪಾಸಣೆ ನಡೆಸಲು ಪ್ರತ್ಯೇಕ ವ್ಯವಸ್ಥೆ

ಆಂಧ್ರ ಪ್ರದೇಶದಲ್ಲಿ ರಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನು ಬಳಸಿಕೊಂಡು ಈವರೆಗೂ 14,423 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ ಕೆಂಪು ವಲಯ ಎಂದು ಗುರುತಿಸಲಾಗಿರುವ ಪ್ರದೇಶದಲ್ಲಿ 11,543 ಜನರ ವೈದ್ಯಕೀಯ ತಪಾಸಣೆ ನಡೆಸಲಾಯಿತು ಎಂದು ವೈದ್ಯಕೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Andhra Pradesh Government Get ICMR Approval To Use Rapid Test Kits

ಆಂಧ್ರ ಪ್ರದೇಶದಲ್ಲಿ ಗುರುವಾರ 30 ಮಂದಿಗೆ ಸೋಂಕು?:

ಗುರವಾರ ಒಂದೇ ದಿನ ಆಂಧ್ರ ಪ್ರದೇಶದ ವಿವಿಧ ಪ್ರದೇಶಗಳಲ್ಲಿ ನಡೆಸಿದ ವೈದ್ಯಕೀಯ ತಪಾಸಣೆ ವೇಳೆ 30 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕಿತ ಲಕ್ಷಣಗಳು ಪತ್ತೆಯಾಗಿವೆ. ಕೊರೊನಾ ಸೋಂಕು ತಗಲಿರುವುದನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ಎರಡನೇ ಹಂತದ ತಪಾಸಣೆಗೆ ಕಳುಹಿಸಿ ಕೊಡಲಾಗಿದೆ. ರಾಜ್ಯಾದ್ಯಂತ ಇದುವರೆಗೂ 48,034 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 813 ಜನರಿಗೆ ಸೋಂಕು ಇರುವುದು ಪತ್ತೆಯಾಗಿದೆ. 24 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 120 ಮಂದಿ ಗುಣಮುಖರಾಗಿದ್ದಾರೆ.

English summary
Coronavirus News: Andhra Pradesh Government Get ICMR Approval To Use Rapid Test Kits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X