ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರ ಪ್ರದೇಶದಲ್ಲಿ ಮಳೆಗೆ 17 ಮಂದಿ ಬಲಿ, 100ಕ್ಕೂ ಹೆಚ್ಚು ಮಂದಿ ನಾಪತ್ತೆ

|
Google Oneindia Kannada News

ಅಮರಾವತಿ, ನವೆಂಬರ್ 20: ತಮಿಳುನಾಡಿನ ಚೆನ್ನೈನಲ್ಲಿ ಪ್ರವಾಹ ಪರಿಸ್ಥಿತಿಗೆ ಜನರು ತತ್ತರಿಸಿ ಹೋದ ಘಟನೆ ಮಾಸುವ ಮೊದಲೇ ಅಂಥದ್ದೇ ಸನ್ನಿವೇಶ ಆಂಧ್ರ ಪ್ರದೇಶದಲ್ಲಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ 17 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ.

ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ 3 ಅಂತಸ್ತಿನ ಹಳೆಯ ಕಟ್ಟಡ ಕುಸಿದು ಮೂವರು ಮಕ್ಕಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಟ್ಟಡದ ಅವಶೇಷಗಳೊಳಗೆ ಇನ್ನೂ 4 ಮಂದಿ ಸಿಲುಕಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಸತ್ಯಬಾಬು ತಿಳಿಸಿದ್ದಾರೆ.

ದೇವಾಲಯದ ಪಟ್ಟಣವಾದ ತಿರುಪತಿಯಲ್ಲಿ ನೂರಾರು ಯಾತ್ರಾರ್ಥಿಗಳು ಬೃಹತ್ ಪ್ರವಾಹದಲ್ಲಿ ಸಿಲುಕಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ದೇವಸ್ಥಾನವಿರುವ ತಿರುಮಲ ಬೆಟ್ಟಗಳಿಗೆ ಘಾಟ್ ರಸ್ತೆ ಮತ್ತು ನಡಿಗೆ ಮಾರ್ಗಗಳನ್ನು ಮುಚ್ಚಲಾಗಿದೆ. ಆಂಧ್ರ ಪ್ರದೇಶದಲ್ಲಿ ಮಳೆರಾಯ ಸೃಷ್ಟಿಸಿದ ಅವಾಂತರಗಳ ಕುರಿತು ಪ್ರಮುಖ ಅಂಶಗಳನ್ನು ಮುಂದೆ ಓದಿ.

Andhra Pradesh Heavy Rain: 17 Dead, Over 100 Missing in State

ಆಂಧ್ರ ಪ್ರದೇಶದಲ್ಲಿ ಮಳೆ ಸೃಷ್ಟಿಸಿದ ಅವಾಂತರ:

* ತಿರುಪತಿ ಹೊರವಲಯದ ಸ್ವರ್ಣಮುಖಿ ನದಿಗೆ ನೀರು ಹರಿದಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

* ಮೂರು ರಾಜ್ಯ ಸಾರಿಗೆ ಬಸ್‌ಗಳು ಜಖಂಗೊಂಡಿದ್ದು, 12 ಮಂದಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.

* ರಾಜ್ಯದಲ್ಲಿ ಮಳೆಯಿಂದ ನಿರ್ಮಾಣವಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

* ಆಂಧ್ರ ಪ್ರದೇಶದ ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ರಸ್ತೆಗಳು ಹಾಳಾಗಿದ್ದು, ರೈಲು, ರಸ್ತೆ ಮತ್ತು ವಿಮಾನ ಸಂಚಾರಕ್ಕೆ ತೊಂದರೆಯಾಗಿದೆ.

* ಗುರುವಾರದಿಂದ ಶುರುವಾಗಿದ್ದ ಮಳೆಯ ಅಬ್ಬರ ಶನಿವಾರದವರೆಗೂ ಮುಂದುವರಿದಿದೆ. ಧಾರಾಕಾರ ಮಳೆಯಿಂದಾಗಿ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಅನ್ನಮಯ್ಯ ನೀರಾವರಿ ಯೋಜನೆಗೂ ಪೆಟ್ಟು ಬಿದ್ದಿದೆ.

* ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದಾಗಿ ಕಡಪ ವಿಮಾನ ನಿಲ್ದಾಣ ನವೆಂಬರ್ 25 ರವರೆಗೆ ಮುಚ್ಚಿಲಾಗಿದೆ.

* ತಮಿಳುನಾಡು ಮತ್ತು ಕೇರಳದಲ್ಲೂ ಮಳೆ ಅಸ್ತವ್ಯಸ್ತವಾಗಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಪಂಬಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿರುವ ಕಾರಣ ಭಾನುವಾರ ಪಂಬಾ ಮತ್ತು ಶಬರಿಮಲೆ ಯಾತ್ರೆಯನ್ನು ನಿಷೇಧಿಸಲಾಗಿದೆ.

English summary
Andhra Pradesh Heavy Rain: 17 Dead, Over 100 Missing in State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X