ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿರುಪತಿ: ವಿಐಪಿ ದರ್ಶನ ರದ್ದು ನಿರ್ಧಾರಕ್ಕೆ ಹೈಕೋರ್ಟ್ ತಡೆ

|
Google Oneindia Kannada News

ಅಮರಾವತಿ, ಜುಲೈ 15: ತಿರುಮಲ ತಿರುಪತಿ ದೇವಸ್ಥಾನದಲ್ಲಿ ವಿಐಪಿ ದರ್ಶನ ವ್ಯವಸ್ಥೆಯನ್ನು ರದ್ದುಗೊಳಿಸುವ ಘೋಷಣೆಗೆ ಆಂಧ್ರಪ್ರದೇಶ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಟಿಟಿಡಿಯಲ್ಲಿ ಮೂರು ವರ್ಗದ ವಿಐಪಿ ದರ್ಶನ ವ್ಯವಸ್ಥೆಯನ್ನು ಅಂತ್ಯಗೊಳಿಸುವುದಾಗಿ ಟಿಟಿಡಿ ಮಂಡಳಿ ಅಧ್ಯಕ್ಷ ವೈಎಸ್ ಸುಬ್ಬಾರೆಡ್ಡಿ ಅವರು ಪ್ರಕಟಿಸಿದ್ದರು. ಆದರೆ, ಅದನ್ನು ಎತ್ತಿಹಿಡಿಯಲು ಹೈಕೋರ್ಟ್ ನಿರಾಕರಿಸಿದೆ.

ಟಿಟಿಡಿಗೆ ನೂತನ ಅಧ್ಯಕ್ಷ: ನಾನು ಹಿಂದೂ, ಕ್ರಿಶ್ಚಿಯನ್ ಅಲ್ಲ, ಸ್ಪಷ್ಟನೆಟಿಟಿಡಿಗೆ ನೂತನ ಅಧ್ಯಕ್ಷ: ನಾನು ಹಿಂದೂ, ಕ್ರಿಶ್ಚಿಯನ್ ಅಲ್ಲ, ಸ್ಪಷ್ಟನೆ

ಈ ಪ್ರಕಟಣೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಟಿಟಿಡಿ ಮಂಡಳಿಗೆ ಸೂಚನೆ ನೀಡಿದೆ. ಅಲ್ಲದೆ, ಈ ಘೋಷಣೆ ವಿಚಾರದಲ್ಲಿ ವಿಚಾರಣೆ ಮುಂದುವರಿಸುವುದರ ಅಗತ್ಯವೇನಿದೆ ಎಂಬುದಕ್ಕೆ ಸೂಕ್ತ ಕಾರಣ ಒದಗಿಸುವಂತೆಯೂ ನಿರ್ದೇಶಿಸಿದೆ.

Andhra pradesh high court stayed ttd vip cancel decission

ಆಂಧ್ರಪ್ರದೇಶದಲ್ಲಿ ಕಳೆದ ವಿಧಾನಸಭೆ ಚುನಾವಣೆ ಬಳಿಕ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್ ಸರ್ಕಾರವು ಅಸ್ತಿತ್ವಕ್ಕೆ ಬಂದಿತ್ತು. ಆಗ ಟಿಟಿಡಿ ಮುಖ್ಯಸ್ಥರನ್ನು ತೆಗೆದುಹಾಕಿ ಜಗನ್ ಮೋಹನ್ ರೆಡ್ಡಿ ಅವರ ಸಂಬಂಧಿ ವೈಎಸ್ ಸುಬ್ಬಾರೆಡ್ಡಿ ಅವರನ್ನು ಸರ್ಕಾರ ನೇಮಿಸಿತ್ತು. ಈ ಬೆಳವಣಿಗೆ ಬಳಿಕ ಟಿಟಿಡಿ ಮಂಡಳಿಯ ಉಳಿದ ಎಲ್ಲ ಸದಸ್ಯರೂ ರಾಜೀನಾಮೆ ಸಲ್ಲಿಸಿದ್ದರು.

ಟಿಟಿಡಿಗೆ ಸುಧಾಮೂರ್ತಿ ರಾಜೀನಾಮೆ ನೀಡಿದ್ದು ಸತ್ಯ: ಕಾರಣವೇನು?ಟಿಟಿಡಿಗೆ ಸುಧಾಮೂರ್ತಿ ರಾಜೀನಾಮೆ ನೀಡಿದ್ದು ಸತ್ಯ: ಕಾರಣವೇನು?

ಈ ತೆರವಾದ ಸ್ಥಾನಗಳು ಇನ್ನೂ ಖಾಲಿ ಉಳಿದಿದ್ದು, ಹೊಸ ಸದಸ್ಯರ ನೇಮಕ ನಡೆಯಬೇಕಿದೆ. ತಾವು ಅಧ್ಯಕ್ಷರಾಗಿ ನೇಮಕವಾದ ಬಳಿಕ ಸುಬ್ಬಾರೆಡ್ಡಿ ಅವರು ಟಿಟಿಡಿಯಲ್ಲಿ ಅಸ್ತಿತ್ವದಲ್ಲಿದ್ದ ಎಲ್-1, ಎಲ್-2 ಮತ್ತು ಎಲ್-3 ಎಂಬ ಮೂರು ವರ್ಗಗಳ ವಿಐಪಿ ದರ್ಶನ ವ್ಯವಸ್ಥೆಯನ್ನು ರದ್ದುಪಡಿಸಿ ಘೋಷಣೆ ಹೊರಡಿಸಿದ್ದರು. ಇದರ ವಿರುದ್ಧ ಅನೇಕರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ರಾಜ್ಯದಲ್ಲಿಯೂ ನಿರ್ಮಾಣವಾಗಲಿದೆ ತಿರುಪತಿ ತಿಮ್ಮಪ್ಪನ ದೇವಸ್ಥಾನ ರಾಜ್ಯದಲ್ಲಿಯೂ ನಿರ್ಮಾಣವಾಗಲಿದೆ ತಿರುಪತಿ ತಿಮ್ಮಪ್ಪನ ದೇವಸ್ಥಾನ

ಟಿಟಿಡಿ ಮಂಡಳಿಯಲ್ಲಿ ಸದಸ್ಯರೇ ಇಲ್ಲ. ಹೀಗಿರುವಾಗ ಮಂಡಳಿ ಅಧ್ಯಕ್ಷರು ಏಕಪಕ್ಷೀಯವಾಗಿ ಮಾಡಿರುವ ಘೋಷಣೆಯನ್ನು ಆದೇಶ ಎಂದು ಪರಿಗಣಿಸಲಾಗದು. ಈಗಿರುವ ವಿಐಪಿ ವ್ಯವಸ್ಥೆಯನ್ನು ರದ್ದುಪಡಿಸಿ ಸರ್ಕಾರವು ಹೊಸ ರೀತಿಯ ವ್ಯವಸ್ಥೆ ಜಾರಿ ಮಾಡಲು ಹುನ್ನಾರ ನಡೆಸಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

English summary
Andhra Pradesh High Court on Monday gave stay to TTD decission of cancelling VIP system in Tirupati Tirumala temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X