• search
  • Live TV
ಅಮರಾವತಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ ಬರೆದ ಆಂಧ್ರ ಪ್ರದೇಶ

|
Google Oneindia Kannada News

ಅಮರಾವತಿ, ಜೂನ್ 20: ಆಂಧ್ರ ಪ್ರದೇಶದಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ ಬರೆದಿದೆ. ಒಂದೇ ದಿನದಲ್ಲಿ 13 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.
ಭಾನುವಾರ ರಾತ್ರಿ 8 ಗಂಟೆ ವೇಳೆಗೆ 13 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ ನೀಡುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ. ರಾಾಜ್ಯದಲ್ಲಿ ಈವರೆಗೂ ಒಂದು ಕೋಟಿಗೂ ಅಧಿಕ ಮಂದಿ ಫಲಾನುಭವಿಗಳಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ.

ಚೀನಾದಲ್ಲಿ 100 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ ವಿತರಣೆಚೀನಾದಲ್ಲಿ 100 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ ವಿತರಣೆ

"ರಾಜ್ಯದಾದ್ಯಂತ ರಾತ್ರಿ 8 ಗಂಟೆ ಹೊತ್ತಿಗೆ 13 ಲಕ್ಷ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಇಡೀ ದೇಶದ ಒಟ್ಟು ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣದಲ್ಲಿ ಶೇ.50ರಷ್ಟು ಲಸಿಕೆಯು ಆಂಧ್ರ ಪ್ರದೇಶದಲ್ಲೇ ವಿತರಣೆಯಾಗಿದೆ. ನಮ್ಮ ವೈದ್ಯಕೀಯ ಸಿಬ್ಬಂದಿ ಮಾಡಿರುವ ಗುರುತರ ಸಾಧನೆ ಇದಾಗಿದೆ. ಕೇಂದ್ರ ಸರ್ಕಾರವು ಸರಿಯಾದ ರೀತಿಯಲ್ಲಿ ಲಸಿಕೆಯನ್ನು ವಿತರಿಸಿದ್ದೇ ಆದಲ್ಲಿ, ಪ್ರತಿನಿತ್ಯ 10 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆಯನ್ನು ನೀಡುವ ಸಾಮರ್ಥ್ಯವನ್ನು ಹೊಂದಿದ್ದೀವಿ ಎಂಬುದನ್ನು ನಮ್ಮ ವೈದ್ಯಕೀಯ ಸಿಬ್ಬಂದಿಯು ಸಾಬೀತು ಮಾಡಿದ್ದಾರೆ,"ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ಹೇಳಲಾಗಿದೆ.

ಈ ಜಿಲ್ಲೆಗಳಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ:
ಆಂಧ್ರ ಪ್ರದೇಶದ ವಿಶಾಖಪಟ್ಟಣಂ, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ ಕೃಷ್ಣ ಮತ್ತು ಗುಂಟೂರು ಜಿಲ್ಲೆಗಳಲ್ಲಿ ವಿಶೇಷವಾಗಿ ಭಾನುವಾರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ರಾಜ್ಯದಲ್ಲಿ ಸಂಜೆ 5 ಗಂಟೆ ವೇಳೆಗಾಗಲೇ 11.85 ಲಕ್ಷ ಫಲಾನುಭವಿಗಳಿಗೆ ಲಸಿಕೆ ನೀಡಿರುವ ಬಗ್ಗೆ ಆರೋಗ್ಯ ಸೇತು ಟ್ವೀಟ್ ಮೂಲಕ ಮಾಹಿತಿ ನೀಡಿತ್ತು. ಪೂರ್ವ ಗೋದಾವರಿಯಲ್ಲಿ 1.11 ಲಕ್ಷ ಹಾಗೂ ಪಶ್ಚಿಮ ಗೋದಾವರಿಯಲ್ಲಿ 1.08 ಲಕ್ಷ ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.
ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಪ್ರಕರಣ:
ರಾಜ್ಯದಲ್ಲಿ ಒಂದೇ ದಿನ 5646 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, 7722 ಸೋಂಕಿತರು ಗುಣಮುಖರಾಗಿದ್ದಾರೆ. ಇದೇ ಅವಧಿಯಲ್ಲಿ 50 ಮಂದಿ ಮಹಾಮಾರಿಗೆ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 63,068 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
Andhra Pradesh Record: 13 Lakh People Taken Covid-19 Vaccine In Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X