ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಭೀತಿ: 10ನೇ ತರಗತಿ ಪರೀಕ್ಷೆ ರದ್ದು ಮಾಡಿದ ಮತ್ತೊಂದು ರಾಜ್ಯ

|
Google Oneindia Kannada News

ಅಮರಾವತಿ, ಜೂನ್ 20: ಕೊರೊನಾ ವೈರಸ್ ಭೀತಿಯಲ್ಲಿ ಆಂಧ್ರ ಪ್ರದೇಶ ಸರ್ಕಾರ 10ನೇ ತರಗತಿ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿದೆ. ಶಿಕ್ಷಣ ಸಚಿವ ಆದಿಮುಲಪು ಸುರೇಶ್ ಈ ಕುರಿತು ಶನಿವಾರ ಪ್ರಕಟಣೆ ಮಾಡಿದ್ದಾರೆ.

Recommended Video

ಗಂಗೂಲಿ ಕುಟುಂಬದ ಮೂವರಿಗೆ ಕೊರೊನ ಸೋಂಕು | Oneindia Kannada

ರಾಜ್ಯದಲ್ಲಿ ಹಾಗು ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ವಿದ್ಯಾರ್ಥಿಗಳ ಹಿತಾದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ತಿಳಿಸಿದ್ದಾರೆ.

Breaking: ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆಗಳು ರದ್ದುBreaking: ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆಗಳು ರದ್ದು

2020ನೇ ಸಾಲಿನಲ್ಲಿ 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ಈಗಾಗಲೇ ನಿಗದಿಯಾಗಿರುವಂತೆ ಜುಲೈ 10 ರಿಂದ 15ರ ವರೆಗೂ ಪರೀಕ್ಷೆ ನಡೆಯಬೇಕಿತ್ತು. ಆದ್ರೀಗ, ಗ್ರೇಡ್ ಆಧರಿಸಿ ಮುಂದಿನ ತರಗತಿಗೆ ತೇರ್ಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.

ಜೂನ್ 10 ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವರು, ವೇಳಾಪಟ್ಟಿಯಂತೆ ಪರೀಕ್ಷೆ ನಡೆಸುತ್ತೇವೆ ಎಂದಿದ್ದರು. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಪರೀಕ್ಷೆ ರದ್ದುಗೊಳಿಸಿರುವ ಬಗ್ಗೆ ಸ್ಪಷ್ಟನೆ ನೀಡಿದರು.

Andhra Pradesh SSC Exams 2020 Cancelled, Confirms Education Minister Adimulapu Suresh

ಈಗಾಗಲೇ ತಮಿಳುನಾಡು, ತೆಲಂಗಾಣ ರಾಜ್ಯಗಳು ಹತ್ತನೇ ತರಗತಿ ಪರೀಕ್ಷೆ ರದ್ದು ಮಾಡಿದೆ. ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಎಲ್ಲಾ ತಯಾರಿ ನಡೆಸಿಕೊಳ್ಳಲಾಗಿದೆ. ರಾಜ್ಯದಲ್ಲೂ ಪರೀಕ್ಷೆ ರದ್ದು ಮಾಡಲು ಒತ್ತಾಯ ಇದೆ. ಆದರೆ, ಶಿಕ್ಷಣ ಇಲಾಖೆ ಪರೀಕ್ಷೆ ರದ್ದು ಗೊಳಿಸುವ ಬಗ್ಗೆ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

English summary
Andhra Pradesh govt has decided not to conduct 10th class exams in the wake of COVID19: State Education Minister Adimulapu Suresh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X