ಆಂಧ್ರ: ಅಭ್ಯರ್ಥಿ ಪಟ್ಟಿ ಬಿಡುಗಡೆ, ಸಿಎಂ ನಾಯ್ಡು ಮತ್ತು ಮಗ ಸ್ಪರ್ಧೆ
ಅಮರಾವತಿ, ಮಾರ್ಚ್ 15: ಟಿಡಿಪಿ ಪಕ್ಷವು ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಗೆ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿಎಂ ಚಂದ್ರಬಾಬು ನಾಯ್ಡು ಮತ್ತು ಮಗ ನಾರಾ ಲೋಕೆಶ್ ಹೆಸರು ಪಟ್ಟಿಯಲ್ಲಿದೆ.
ಆಂಧ್ರ ಪ್ರದೇಶದಲ್ಲಿ ಒಟ್ಟು 175 ಕ್ಷೇತ್ರಗಳಿದ್ದು ಪ್ರಸ್ತುತ 126 ಕ್ಷೇತ್ರಗಳಿಗಷ್ಟೆ ಅಭ್ಯರ್ಥಿ ಪ್ರಕಟಿಸಲಾಗಿದೆ. ಉಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ನಿನ್ನೆ ತಡರಾತ್ರಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದು, ಟಿಡಿಪಿಯು 150 ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದೆ ಎಂದು ನಾಯ್ಡು ಹೇಳಿದ್ದಾರೆ. ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಒಟ್ಟಿಗೆ ನಡೆಯಲಿದೆ.

ನಿನ್ನೆ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಸಿಎಂ ಚಂದ್ರಬಾಬು ನಾಯ್ಡು ಅವರು ಏಳನೇ ಬಾರಿಗೆ ಕುಪ್ಪಂ ನಿಂದ ಸ್ಪರ್ಧಿಸಲಿದ್ದಾರೆ. ಅವರ ಪುತ್ರ ನಾರಾ ಲೋಕೇಶ್ ಅವರು ಮಂಗಳಗಿರಿಯಿಂದ ಸ್ಪರ್ಧಿಸಲಿದ್ದಾರೆ. ನಟ ಬಾಲಕೃಷ್ಣ ಅವರು ಹಿಂದೂಪುರದಿಂದ ಸ್ಪರ್ಧಿಸಲಿದ್ದಾರೆ.
ನಿಮ್ಮ ಭವಿಷ್ಯ, ನಮ್ಮ ಜವಾಬ್ದಾರಿ' ಘೋಷಣೆಯೊಂದಿಗೆ ಈ ಬಾರಿ ಚುನಾವಣೆ ನಡೆಯಲಿದ್ದು, ಚಂದ್ರಬಾಬು ನಾಯ್ಡ ಅವರು ಇಂದು ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಪ್ರಚಾರ ಕಾರ್ಯ ಪ್ರಾರಂಭಿಸಲಿದ್ದಾರೆ.












Click it and Unblock the Notifications