ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರ: ಅಭ್ಯರ್ಥಿ ಪಟ್ಟಿ ಬಿಡುಗಡೆ, ಸಿಎಂ ನಾಯ್ಡು ಮತ್ತು ಮಗ ಸ್ಪರ್ಧೆ

|
Google Oneindia Kannada News

ಅಮರಾವತಿ, ಮಾರ್ಚ್‌ 15: ಟಿಡಿಪಿ ಪಕ್ಷವು ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಗೆ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿಎಂ ಚಂದ್ರಬಾಬು ನಾಯ್ಡು ಮತ್ತು ಮಗ ನಾರಾ ಲೋಕೆಶ್‌ ಹೆಸರು ಪಟ್ಟಿಯಲ್ಲಿದೆ.

ಆಂಧ್ರ ಪ್ರದೇಶದಲ್ಲಿ ಒಟ್ಟು 175 ಕ್ಷೇತ್ರಗಳಿದ್ದು ಪ್ರಸ್ತುತ 126 ಕ್ಷೇತ್ರಗಳಿಗಷ್ಟೆ ಅಭ್ಯರ್ಥಿ ಪ್ರಕಟಿಸಲಾಗಿದೆ. ಉಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಈ ಬಾರಿ ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡುಗೆ ಭಾರೀ ಮುಖಭಂಗ?ಈ ಬಾರಿ ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡುಗೆ ಭಾರೀ ಮುಖಭಂಗ?

ನಿನ್ನೆ ತಡರಾತ್ರಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದು, ಟಿಡಿಪಿಯು 150 ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದೆ ಎಂದು ನಾಯ್ಡು ಹೇಳಿದ್ದಾರೆ. ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಒಟ್ಟಿಗೆ ನಡೆಯಲಿದೆ.

Andhra Pradesh: TDP announce 126 candidates for assembly elections

ನಿನ್ನೆ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಸಿಎಂ ಚಂದ್ರಬಾಬು ನಾಯ್ಡು ಅವರು ಏಳನೇ ಬಾರಿಗೆ ಕುಪ್ಪಂ ನಿಂದ ಸ್ಪರ್ಧಿಸಲಿದ್ದಾರೆ. ಅವರ ಪುತ್ರ ನಾರಾ ಲೋಕೇಶ್ ಅವರು ಮಂಗಳಗಿರಿಯಿಂದ ಸ್ಪರ್ಧಿಸಲಿದ್ದಾರೆ. ನಟ ಬಾಲಕೃಷ್ಣ ಅವರು ಹಿಂದೂಪುರದಿಂದ ಸ್ಪರ್ಧಿಸಲಿದ್ದಾರೆ.

ಜಗನ್ ರೆಡ್ಡಿಯನ್ನು ದಾವೂದ್ ಇಬ್ರಾಹಿಂಗೆ ಹೋಲಿಸಿದ ಚಂದ್ರಬಾಬು ನಾಯ್ಡುಜಗನ್ ರೆಡ್ಡಿಯನ್ನು ದಾವೂದ್ ಇಬ್ರಾಹಿಂಗೆ ಹೋಲಿಸಿದ ಚಂದ್ರಬಾಬು ನಾಯ್ಡು

ನಿಮ್ಮ ಭವಿಷ್ಯ, ನಮ್ಮ ಜವಾಬ್ದಾರಿ' ಘೋಷಣೆಯೊಂದಿಗೆ ಈ ಬಾರಿ ಚುನಾವಣೆ ನಡೆಯಲಿದ್ದು, ಚಂದ್ರಬಾಬು ನಾಯ್ಡ ಅವರು ಇಂದು ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಪ್ರಚಾರ ಕಾರ್ಯ ಪ್ರಾರಂಭಿಸಲಿದ್ದಾರೆ.

English summary
Andhra Pradesh TDP announces 126 candidates for assembly elections. Chandra Babu Naidu contesting from Kuppam and his son Nara Lokesh contesting from Mangalagiri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X