• search
  • Live TV
ಅಮರಾವತಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೆಪ್ಟೆಂಬರ್ 5ರಿಂದ ಶಾಲೆಗಳು ಆರಂಭ; ಎಲ್‌ಕೆಜಿ, ಯುಕೆಜಿ ಇಲ್ಲ

|

ಅಮರಾವತಿ, ಜುಲೈ 22 : ಸೆಪ್ಟೆಂಬರ್ 5ರಿಂದ ರಾಜ್ಯದಲ್ಲಿ ಶಾಲೆಗಳನ್ನು ಪುನಃ ಆರಂಭಿಸಲು ಆಂಧ್ರ ಪ್ರದೇಶ ಸರ್ಕಾರ ತೀರ್ಮಾನಿಸಿದೆ. ಆ ಸಂದರ್ಭದ ಪರಿಸ್ಥಿತಿಯನ್ನು ಅವಲೋಕಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯ ಬಳಿಕ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಮಾಧ್ಯಮಗಳ ಜೊತೆ ಮಾತನಾಡಿದರು.

ಕರ್ನಾಟಕದಲ್ಲಿ ಶಾಲೆ ಪುನಾರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

"ಸೆಪ್ಟೆಂಬರ್ 5ರಿಂದ ಶಾಲೆಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಆದರೆ, ಅಂತಿಮ ತೀರ್ಮಾನವನ್ನು ಆ ಹೊತ್ತಿನ ಪರಿಸ್ಥಿತಿ ನೋಡಿಕೊಂಡು ಕೈಗೊಳ್ಳಲಾಗುತ್ತದೆ" ಎಂದು ಆದಿಮುಲಾಪು ಸುರೇಶ್ ಹೇಳಿದರು.

ಚಂದನ ವಾಹಿನಿಯಲ್ಲಿ ಶಾಲಾ ಮಕ್ಕಳಿಗೆ ಪಾಠ; ವೇಳಾಪಟ್ಟಿ

"ಶಾಲೆಗಳು ಆರಂಭವಾಗುವ ತನಕ ಮಧ್ಯಾಹ್ನದ ಬಿಸಿಯೂಟ ಯೋಜನೆ ದಿನಸಿ ಪದಾರ್ಥಗಳನ್ನು ಮಕ್ಕಳ ಮನೆಗೆ ತಲುಪಿಸಲಾಗುತ್ತದೆ. ಎಲ್‌ಕೆಜಿ ಮತ್ತು ಯುಕೆಜಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗುತ್ತದೆ" ಎಂದರು.

ಸೆ. 15ರಿಂದ ಶಾಲೆ, ಕಾಲೇಜು ಆರಂಭಿಸಲು ಮುಂದಾದ ಸರ್ಕಾರ

"ರಾಜ್ಯದಲ್ಲಿ ನೀಡಲಾಗುತ್ತಿರುವ ಶಿಕ್ಷಣದ ಮಾದರಿಯನ್ನು ಅಭಿವೃದ್ಧಿಗೊಳಿಸಲು ಚರ್ಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಇದಕ್ಕಾಗಿ ಜಂಟಿ ನಿರ್ದೇಶಕರ ಹುದ್ದೆಯನ್ನು ಸೃಷ್ಟಿ ಮಾಡಲಾಗುತ್ತದೆ" ಎಂದು ಆದಿಮುಲಾಪು ಸುರೇಶ್ ತಿಳಿಸಿದರು.

ಆಂಧ್ರಪ್ರದೇಶದಲ್ಲಿನ ಇಂಗ್ಲಿಶ್ ಮಾಧ್ಯಮ ಶಾಲೆಗಳ ಸ್ಥಿತಿಗತಿ ಸುಧಾರಣೆ, ಶಿಕ್ಷಣದ ಮಟ್ಟದ ಕುರಿತು ಪರಿಶೀಲನೆ ನಡೆಸಲು ಎರಡು ನಿರ್ದೇಶಕರ ಹುದ್ದೆಗಳನ್ನು ರಾಜ್ಯಮಟ್ಟದಲ್ಲಿ ಸೃಷ್ಟಿಸಲು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೂಚನೆ ನೀಡಿದ್ದಾರೆ.

ರಾಜ್ಯದ ಪ್ರತಿ ಮಂಡಲದಲ್ಲಿ ಸರ್ಕಾರಿ ಜ್ಯೂನಿಯರ್ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.

English summary
Andhra Pradesh government decided to reopen school from September 5. The final decision will taken on the real time situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X