ಜಗನ್ ಚಿಕ್ಕಪ್ಪ ಸಾವು: ಅಸಹಜ ಸಾವಿನ ಬಗ್ಗೆ ದೂರು ದಾಖಲು
ಅಮರಾವತಿ, ಮಾರ್ಚ್ 15: ಆಂಧ್ರಪ್ರದೇಶದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ವೈ.ಎಸ್.ರಾಜಶೇಖರ್ ರೆಡ್ಡಿ ಅವರ ತಮ್ಮ ವೈ.ಎಸ್. ವಿವೇಕಾನಂದ ರೆಡ್ಡಿ (68) ಶುಕ್ರವಾರ ನಿಧನರಾದರು.
ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಕಡಪ ಜಿಲ್ಲೆಯಲ್ಲಿ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ವೈ.ಎಸ್. ವಿವೇಕಾನಂದ ರೆಡ್ಡಿ ಅವರ ಸಾವಿನ ಬಗ್ಗೆ ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಅವರ ಆಪ್ತ ಸಹಾಯಕ ಕೃಷ್ಣಾ ರೆಡ್ಡಿ, ವಿವೇಕಾನಂದ ಅವರ ಬೆಡ್‌ರೂಂ ಮತ್ತು ಬಾತ್‌ರೂಂಗಳಲ್ಲಿ ರಕ್ತದ ಕಲೆಗಳು ಕಂಡುಬಂದಿರುವುದು ಶಂಕಾಸ್ಪದವಾಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಅವರು ಪ್ರಕರಣದ ತನಿಖೆ ನಡೆಸುವಂತೆ ಪುಲಿವೆಂಡುಲಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಗುರುವಾರ ರಾತ್ರಿ 10.30ರವರೆಗೂ ಜಮ್ಮಲಮಡುಗು, ಚಪಡು, ದುವ್ವುರು ಮುಂತಾದೆಡೆ ಚುನಾವಣಾ ಪ್ರಚಾರ ನಡೆಸಿದ್ದ ವಿವೇಕಾನಂದ ರೆಡ್ಡಿ, 11.30ರವರೆಗೆ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಬಳಿಕ ಮನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಬೆಳಿಗ್ಗೆ ಮನೆಗೆಲಸದವರು ಬಂದಾಗ ಅವರು ಮೃತಪಟ್ಟಿರುವುದು ಕಂಡುಬಂದಿದೆ. ವಿವೇಕಾನಂದ ರೆಡ್ಡಿ ಅವರ ಹಣೆ ಮತ್ತು ಬಲಗೈಗೆ ಗಾಯಗಳಾಗಿವೆ.
1950ರ ಆಗಸ್ಟ್ 8ರಂದು ಜನಿಸಿದ್ದ ವಿವೇಕಾನಂದ ರೆಡ್ಡಿ, ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.
ಪುಲಿವೆಂಡುಲಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 1999ರಲ್ಲಿ ಕಡಪ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಪ್ರವೇಶಿಸಿದ್ದರು. 2004ರ ಚುನಾವಣೆಯಲ್ಲಿಯೂ ಭರ್ಜರಿ ಗೆಲುವು ಕಂಡಿದ್ದರು.
ಸಹೋದರ ರಾಜಶೇಖರ್ ರೆಡ್ಡಿ ನಿಧನದ ಬಳಿಕ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ತೊರೆದು ವೈಎಸ್‌ಆರ್ ಕಾಂಗ್ರೆಸ್ ಸ್ಥಾಪಿಸಿದ್ದ ಜಗನ್ ಮೋಹನ್ ರೆಡ್ಡಿ ಮತ್ತು ವಿವೇಕಾನಂದ ರೆಡ್ಡಿ ನಡುವೆ ಮನಸ್ತಾಪವಿತ್ತು. ಆದರೆ, 2011ರ ವಿಧಾನಸಭೆ ಉಪ ಚುನಾವಣೆಯಲ್ಲಿ ಅತ್ತಿಗೆ ವೈ.ಎಸ್. ವಿಜಯಮ್ಮ ಅವರ ಎದುರು ಸೋಲು ಅನುಭವಿಸಿದ ನಂತರ ಜಗನ್ ಮೋಹನ್ ರೆಡ್ಡಿ ಅವರ ಪಕ್ಷವನ್ನು ಸೇರಿಕೊಂಡಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications