ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಗನ್ ರೆಡ್ಡಿ ಪ್ರಮಾಣವಚನಕ್ಕೆ ಗೈರಾಗಲಿದ್ದಾರೆ ಚಂದ್ರಬಾಬು ನಾಯ್ಡು

|
Google Oneindia Kannada News

ಅಮರಾವತಿ, ಮೇ 29: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಮೇ 30 ರಂದು ಜಗನ್ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಟಿಡಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಭಾಗವಹಿಸುವುದಿಲ್ಲ ಎಂದು ಟಿಡಿಪಿ ಮೂಲಗಳು ತಿಳಿಸಿವೆ.

ಆದರೆ ಪ್ರಮಾಣವಚನ ಕಾರ್ಯಕ್ರಮಕ್ಕೂ ಮುನ್ನ ಅಮರಾವತಿಯ ಜಗನ್ ನಿವಾಸಕ್ಕೆ ಟಿಡಿಪಿ ನಿಯೋಗವೊಂದು ಭೇಟಿ ನೀಡಲಿದ್ದು, ಅವರಿಗೆ ಶುಭ ಕೋರಲಿದೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯ ಬದ್ಧ ವೈರಿ ಚಂದ್ರಬಾಬುರನ್ನು ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ ಜಗನ್ರಾಜಕೀಯ ಬದ್ಧ ವೈರಿ ಚಂದ್ರಬಾಬುರನ್ನು ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ ಜಗನ್

ಜಗನ್ ರೆಡ್ಡಿ ಅವರು ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಆದರೆ ನಾಯ್ಡು ಅವರು ಕಾರ್ಯಕ್ರಮಕ್ಕೆ ಗೈರಾಗಲಿದ್ದು, ಕೆಸಿಆರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Chandrababu Naidu to not attend swearing-in ceremony of YS Jaganmohan Reddy

ನಾಯ್ಡು ಕೋಟೆ ಭೇದಿಸಿದ ಜಗನ್! ಹೀಗೊಂದು ರೋಚಕ ರಾಜಕಾರಣನಾಯ್ಡು ಕೋಟೆ ಭೇದಿಸಿದ ಜಗನ್! ಹೀಗೊಂದು ರೋಚಕ ರಾಜಕಾರಣ

ಆಂಧ್ರಪ್ರದೇಶದ ಒಟ್ಟು 175 ವಿಧಾನಸಭಾ ಕ್ಷೇತ್ರಗಳಲ್ಲಿ 152 ವೈಎಸ್ ಆರ್ ಕಾಂಗ್ರೆಸ್, 22 ಟಿಡಿಪಿ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ 22 ವೈಎಸ್ ಆರ್ ಕಾಂಗ್ರೆಸ್ ಮತ್ತು ಕೇವಲ 2 ಕ್ಷೇತ್ರಗಳಲ್ಲಿ ಟಿಡಿಪಿ ಜಯಗಳಿಸಿತ್ತು. ಇಲ್ಲಿ ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬಿದ್ದಿತ್ತು.

English summary
TDP National President N Chandrababu Naidu to not attend swearing-in ceremony of YS Jaganmohan Reddy tomorrow. A TDP delegation will meet YS Jaganmohan Reddy at his Amaravati residence before the swearing-in ceremony.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X