ಭಾರೀ ಬೆಲೆ ತೆರಬೇಕಾಗುತ್ತೆ! ಮೋದಿಗೆ ನಾಯ್ಡು ಖಡಕ್ ಎಚ್ಚರಿಕೆ

ಅಮರಾವತಿ, ಏಪ್ರಿಲ್ 05: 'ನೀವು ಇದೇ ರೀತಿ ಸುಖಾಸುಮ್ಮನೆ ಐಟಿ ರೇಡ್ ಮಾಡಿಸುತ್ತಿದ್ದರೆ ಮುಂದೊಮ್ಮೆ ಭಾರೀ ಬೆಲೆ ತೆರಬೇಕಾಗುತ್ತದೆ' ಎಂದು ಪ್ರಧಾನಿ ನರೇಂದ್ರ ಮೊದಿ ಅವರಿಗೆ ಟಿಡಿಪಿ ನಾಯಕ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ತೆಲುಗು ದೇಶಂ ಪಕ್ಷದ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಈ ಕ್ರಮವನ್ನು ನಾಯ್ಡು ಅವರು ಖಂಡಿಸಿ, ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, "ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಚರಿಕೆ ನೀಡುತ್ತೇನೆ. ಅವರು ಇದೇ ರೀತಿ ಕೆಲಸವನ್ನು ಮುಂದುವರಿಸಿಸದರೆ ಭಾರೀ ಬೆಲೆ ತೆರಬೇಕಾಗುತ್ತದೆ. ನಾವು ಭಾರತವನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಡುತ್ತಿದ್ದೇವೆ. ನೀವು ಯಾರು? ಹುದ್ದೆಯಿಂದ ಕೆಳಗಿಳಿಯುತ್ತಿರುವ ಪ್ರಧಾನಿ ನೀವು. ನಾನು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇನೆ. ನೀವು ಮೋದಿಯವರ ಮಾತನ್ನು ಕೇಳಬೇಡಿ, ಅಕಸ್ಮಾತ್ ಕೇಳಿದರೆ ನೀವೂ ತೊಂದರೆ ಅನುಭವಿಸಬೇಕಾಗುತ್ತದೆ" ಎಂದು ನಾಯ್ಡು ಹೇಳಿದ್ದಾರೆ.

Chandrababu naidu warns PM Narendra modi

ಆಂಧ್ರಪ್ರದೇಶದಲ್ಲಿ ಏಪ್ರಿಲ್ 11ರಂದು 175 ಸದಸ್ಯರ ವಿಧಾನಸಭೆ ಹಾಗೂ 25 ಸದಸ್ಯರ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಹೊರ ಬರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+