ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶದಲ್ಲಿ ಗುಲಾಬ್ ಚಂಡಮಾರುತ ಅಬ್ಬರ ಹೇಗಿದೆ?

|
Google Oneindia Kannada News

ಆಂಧ್ರದ ಕರಾವಳಿಗೆ ಗುಲಾಬ್ ಚಂಡಮಾರುತ ಬಂದು ಅಪ್ಪಳಿಸಿದ್ದು ಮುಂದಿನ 10 ಗಂಟೆಗಳ ಕಾಲ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭೀತಿ ಹುಟ್ಟುಹಾಕಿದ್ದ ಗುಲಾಬ್ ಚಂಡಮಾರುತ ಕೊಂಚ ದುರ್ಬಲಗೊಂಡಿದ್ದು, ವಾಯುಭಾರ ಕುಸಿತವಾಗಿ ಪರಿವರ್ತನೆಯಾಗಿದೆ. ಹೀಗಾಗಿ ಕರಾವಳಿ ರಾಜ್ಯಗಳು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

 ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ

ಆದರೆ ಚಂಡಮಾರುತದ ಪರಿಣಾಮ ಭಾನುವಾರದಿಂದೀಚಿಗೆ ಒಡಿಶಾ, ಆಂಧ್ರ, ತೆಲಂಗಾಣ, ಚತ್ತೀಸ್‌ಗಢದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Cyclone Gulab: Parts of AP, Telangana May Continue To Witness Heavy Rain

ಚಂಡಮಾರುತದಿಂದ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಒಡಿಶಾದಲ್ಲಿ ಚಂಡಮಾರುತವನ್ನು ಎದುರಿಸಲು ಪೂರ್ವ ಸಿದ್ಧತೆ ಮಾಡಿಕೊಂಡಿದ್ದರಿಂದಾಗಿ ಈ ಚಂಡಮಾರುತದಿಂದ ಅಷ್ಟೇನೂ ಪರಿಣಾಮವಾಗಿಲ್ಲ ಎಂದು ಒಡಿಶಾ ಸರ್ಕಾರ ಹೇಳಿದೆ.

ಗುಲಾಬ್ ಚಂಡಮಾರುತ ದುರ್ಬಲವಾದ ಬೆನ್ನಲ್ಲೇ ಸೆ.30ರಂದು ದೇಶದ ಕರಾವಳಿಗೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಗುಲಾಬ್ ಚಂಡಮಾರುತ ಸೋಮವಾರ ಬೆಳಗ್ಗೆ ಚತ್ತೀಸ್‌ಗಢದ ಜಗದಾಲ್ಪುರದ ದಕ್ಷಿಣ ಭಾಗದಲ್ಲಿ ಗಂಟೆಗೆ 65 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ತೆಲಂಗಾಣದ ಭದ್ರಾಚಲಂನ ಈಶಾನ್ಯ ಭಾಗದಲ್ಲಿ ಗಂಟೆಗೆ 150 ಕಿ.ಮೀ ವೇಗವಾಗಿ ಹಾದು ಹೋಗಿದೆ.

ಆ ಬಳಿಕ ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿ ತೀರಕ್ಕೆ ಹೋಗುತ್ತಿದ್ದಂತೆ ಗುಲಾಬ್ ತೀವ್ರತೆ ಮತ್ತಷ್ಟು ಕುಸಿಯಲಿದೆ. ಆದರೆ ಸೆ.30ರಂದು ಅದು ಮತ್ತೆ ಪ್ರಬಲ ಚಂಡಮಾರುತವಾಗಿ ಮರುಹುಟ್ಟು ಪಡೆಯಲಿದೆ. ಇದು ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಸಲಿದೆ ಎಂದು ಹೇಳಲಾಗಿದೆ.

ಅಲ್ಲದೆ ಮುಂದಿನ 12 ಗಂಟೆಗಳ ಕಾಲ ಬಂಗಾಳ ಕೊಲ್ಲಿಯ ಪಶ್ಚಿಮ ಕೇಂದ್ರ ಮತ್ತು ವಾಯುವ್ಯ ಭಾಗಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಆಂಧ್ರಪ್ರದೇಶ ಮತ್ತು ಒಡಿಶಾದ
ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಚಂಡಮಾರುತದ ಘಟನೆಗಳಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಒಡಿಶಾದಲ್ಲಿ ಚಂಡಮಾರುತವನ್ನು ಎದುರಿಸಲು ಪೂರ್ವ ಸಿದ್ಧತೆ ಮಾಡಿಕೊಂಡಿದ್ದರಿಂದಾಗಿ ಈ ಚಂಡಮಾರುತದಿಂದ ಅಷ್ಟೇನೂ ಪರಿಣಾಮವಾಗಿಲ್ಲ ಎಂದು ಒಡಿಶಾ ಸರ್ಕಾರ ಹೇಳಿದೆ. ಚಂಡಮಾರುತದ ಅವಘಡಗಳಲ್ಲಿ ಸಿಲುಕಬಹುದಾದ 1533 ಗರ್ಭಿಣಿ ಮಹಿಳೆಯರು ಸೇರಿದಂತೆ ಒಟ್ಟಾರೆ 46 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸರ್ಕಾರ ಸುರಕ್ಷಿತ ಸ್ಥಳಕ್ಕೆ ರವಾನಿಸಿತ್ತು.

ಗುಲಾಬ್‌ ಅಪ್ಪಳಿಸುವ ಮುನ್ನ ಮಾತನಾಡಿದ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌, 'ನಾವು ಸಾವು-ನೋವಿನ ಗುರಿ ಹೊಂದಿದ್ದೇವೆ. ಗುಲಾಬ್‌ ಪ್ರಭಾವಕ್ಕೆ ಸಿಲುಕಿರುವ 7 ಜಿಲ್ಲೆಗಳಲ್ಲಿ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ಸಣ್ಣ-ಪುಟ್ಟಅನಾಹುತವಾಗದಂತೆ ತಡೆಯುವುದು ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಜನರು ತಮ್ಮ ಮನೆಗಳಲ್ಲೇ ಸುರಕ್ಷಿತವಾಗಿ ಇರ​ಬೇ​ಕು' ಎಂದು ತಿಳಿಸಿದ್ದಾರೆ.

ಚಂಡಮಾರುತವು ಪ್ರಸ್ತುತ ಪಶ್ಚಿಮ-ವಾಯುವ್ಯ ಭಾಗದತ್ತ ಮುಖ ಮಾಡಿದ್ದು, ಬಳಿಕ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಚಂಡಮಾರುತದ ಅಬ್ಬರ ಕಡಿಮೆಯಾಗಲಿದೆ. ಅಂತೆಯೇ ಮುಂದಿನ 8ರಿಂದ 10 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ಪ್ರಭಾವವು ಕಡಿಮೆ ಇರಲಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ 20,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

English summary
Heavy rains battered Srikakulam, Vizianagaram and Visakhapatnam districts in Andhra Pradesh on Monday, after cyclonic storm ‘Gulab’ made landfall between and north coastal parts of the state and south Odisha around midnight on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X