ವಿಶಾಖಪಟ್ಟಣಂ ಅನಿಲ ಸೋರಿಕೆ: ಎಫ್‌ಐಆರ್ ದಾಖಲು
ವಿಶಾಖಪಟ್ಟಣಂ, ಮೇ 7: ದೇಶವನ್ನು ಬೆಚ್ಚಿ ಬೀಳಿಸಿರುವ ವಿಶಾಖಪಟ್ಟಣಂ ಅನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್‌ಜಿ ಪಾಲಿಮರ್ ಕಂಪೆನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಗ್ಯಾಸ್ ಸೋರಿಕೆಯನ್ನು ನಿಲ್ಲಿಸಲಾಗಿದೆ ಎಂದ ಅಧಿಕಾರಿ | Vizag | Oneindia Kannada
ವಿಶಾಖಪಟ್ಟಣಂ ಪೊಲೀಸ್‌ರು ನರಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: 8 ಬಲಿ, 5000ಕ್ಕೂ ಅಧಿಕ ಮಂದಿ ಅಸ್ವಸ್ಥ
ವಿಶಾಖಪಟ್ಟಣಂ ಹೊರವಲಯದ ಆರ್ ಆರ್ ವೆಂಕಟಾಪುರಂ ಬಳಿಯ ಎಲ್ ಜಿ ಪಾಲಿಮರ್ಸ್ ಎಂಬ ಎಂಎನ್‌ಸಿ ಕಂಪೆನಿಯ ಕಾರ್ಖಾನೆಯಲ್ಲಿ ಮಹಾ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇದುವರೆಗೆ 11 ಜನ ಮೃತಪಟ್ಟಿದ್ದು, 800 ಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 5000 ಜನಕ್ಕೆ ನೇರವಾಗಿ ವಿಷಾನಿಲ ತಟ್ಟಿದೆ.
ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಆಗಮಿಸಿದ್ದು, ಬಿರುಸಿನ ಕಾರ್ಯಾಚರಣೆ ನಡೆಸಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಆಂಧ್ರಪ್ರದೇಶ ಸರ್ಕಾರ ತಿಳಿಸಿದೆ.