ಕೋವಿಡ್ ರೋಗಿಗಳು ಇದ್ದ ಹೋಟೆಲ್‌ನಲ್ಲಿ ಬೆಂಕಿ, 7 ಸಾವು
ಅಮರಾವತಿ, ಆಗಸ್ಟ್ 09 : ಆಂಧ್ರ ಪ್ರದೇಶದಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 7 ಜನರು ಮೃತಪಟ್ಟಿದ್ದಾರೆ. 30 ಜನರನ್ನು ರಕ್ಷಣೆ ಮಾಡಲಾಗಿದೆ.
ಭಾನುವಾರ ಮುಂಜಾನೆ ವಿಜಯವಾಡದಲ್ಲಿರುವ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಯೊಂದು ಈ ಹೋಟೆಲ್ ಅನ್ನು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಕೆ ಮಾಡಿಕೊಂಡಿತ್ತು ಎಂದು ತಿಳಿದು ಬಂದಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಎಂಬುದು ಇನ್ನೂ ತಿಳಿದುಬಂದಿಲ್ಲ.
ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿರುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಹೋಟೆಲ್‌ನಲ್ಲಿದ್ದ 30 ಜನರನ್ನು ಇದುವರೆಗೂ ರಕ್ಷಣೆ ಮಾಡಲಾಗಿದೆ ಎಂದು ವಿಜಯವಾಡ ಪೊಲೀಸರು ಹೇಳಿದ್ದಾರೆ.
ಹೋಟೆಲ್‌ನಲ್ಲಿ ಎಷ್ಟು ಜನರಿದ್ದರು?, ಯಾವ ಆಸ್ಪತ್ರೆ ಈ ಹೋಟೆಲ್ ಪಡೆದಿತ್ತು?, ಅಗ್ನ ಅವಘಡಕ್ಕೆ ಕಾರಣವೇನು? ಎಂಬುದು ಇನ್ನೂ ತಿಳಿದು ಬರಬೇಕಿದೆ.












Click it and Unblock the Notifications