ಆಂಧ್ರಪ್ರದೇಶದಲ್ಲಿ 2 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಶೂನ್ಯ ಕೊರೊನಾ ಪ್ರಕರಣ

ಅಮರಾವತಿ, ಏಪ್ರಿಲ್ 26 : ದೇಶದಲ್ಲೆಡೆ ಕೊರೊನಾ ನಾಲ್ಕನೇ ಅಲೆ ಭೀತಿ ಶುರುವಾಗಿದೆ. ಈಗಾಗಲೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಮುಂಜಾಗೃತ ಕ್ರಮವಾಗಿ ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಮಾಡಿದೆ. ಇದರ ನಡುವೆಯೇ ಆಂಧ್ರಪ್ರದೇಶದಲ್ಲಿ ಕಳೆದ ಎರಡು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ನಿನ್ನೆ ಒಂದೇ ದಿನ ಶೂನ್ಯ ಕೊರೊನಾ ಪ್ರಕರಣ ವರದಿಯಾಗಿದೆ.

ಆದರೆ, ರಾಜ್ಯ ಇನ್ನೂ ಕೊರೊನಾದಿಂದ ಮುಕ್ತವಾಗಿಲ್ಲ. ಏಕೆಂದರೆ ರಾಜ್ಯದಲ್ಲಿ ಇನ್ನು 22 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಸೋಮವಾರ ನಡೆಸಿದ 2,163 ಕೊರೊನಾ ಪರೀಕ್ಷೆಗಳೆಲ್ಲವೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ರಾಜ್ಯ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಅಂಕಿ ಅಂಶ ಮಾಹಿತಿ ನೀಡಿದೆ.

ಆಂಧ್ರಪ್ರದೇಶದಲ್ಲಿ ಒಟ್ಟಾರೆ 23,19,662 ಕೊರೊನಾ ಪ್ರಕರಣಗಳಿದ್ದು, ಇದರಲ್ಲಿ 23,04,910 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 14,730 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕಳೆದ ಒಂದು ತಿಂಗಳಿನಿಂದ ಈವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಅಂಕಿ ಅಂಶ ತಿಳಿಸಿದೆ. ಸೋಮವಾರಕ್ಕೂ ಮುನ್ನ ಏಪ್ರಿಲ್ 23 ರಂದು ಆರೋಗ್ಯ ಇಲಾಖೆ ಸೋಂಕಿನ ಅಂಕಿ ಅಂಶ ಬಿಡುಗಡೆ ಮಾಡಿದ್ದು, ಅದರಲ್ಲಿ ಎರಡು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು ಕೃಷ್ಣ ಮತ್ತು ವಿಶಾಖಪಟ್ಟಣಂನಲ್ಲಿ ತಲಾ ಒಂದು ಪ್ರಕರಣ ದಾಖಲಾಗಿತ್ತು.

First Time in over 2 years, Andhra pradesh reports zero covid-19 cases in a day

ರಾಜ್ಯದಲ್ಲಿ ಈವರೆಗೆ 9,31,99,360 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದರಲ್ಲಿ 4,45,60,690 ಮಂದಿ ಮೊದಲ ಡೋಸ್‌ ಪಡೆದುಕೊಂಡಿದ್ದರೆ, 4,66,04,615 ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಉಳಿದಂತೆ 20,34,055 ಮಂದಿಗೆ ಮುನ್ನೆಚ್ಚರಿಕಾ ಡೋಸ್ ಸಹ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

First Time in over 2 years, Andhra pradesh reports zero covid-19 cases in a day

ಆಂಧ್ರಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿರುವುದು ಸಮಾಧಾನ ತರಿಸಿದರೂ. ಸಹ ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಾಗುವ ಎಲ್ಲಾ ಸಾಧ್ಯತೆ ಇದೆ, ಈಗಾಗಲೇ ಹಲವು ರಾಜ್ಯಗಳಲ್ಲಿ ಕೊರೊನಾ ನಾಲ್ಕನೇ ಅಲೆಯ ಭೀತಿ ಶುರುವಾಗಿದೆ. ಹೀಗಾಗಿ ಆಂಧ್ರಪ್ರದೇಶದ ನೆರೆ ಹೊರೆ ರಾಜ್ಯಗಳಲ್ಲೂ ಸಹ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಮೈ ಮರೆಯದೇ ಸೋಂಕು ಹೆಚ್ಚಾಗುವ ಮುನ್ನವೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಸೋಂಕಿನಿಂದ ರಾಜ್ಯ ಆದಷ್ಟು ಬೇಗ ಮುಕ್ತವಾಗಬಹುದಾಗಿದೆ. ಸದ್ಯಕ್ಕೆ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲೇ ಮೊದಲ ಬಾರಿಗೆ ಶೂನ್ಯ ಪ್ರಕರಣ ದಾಖಲಿಸಿರುವುದು ಆಶ್ಚರ್ಯದ ಜೊತೆಗೆ ಹೆಚ್ಚಿನ ಜವಾಬ್ದಾರಿಯನ್ನು ಸಹ ಹೊರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+