ಆಂಧ್ರದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ: 4 ಮಂದಿ ದುರ್ಮರಣ
ಆಂಧ್ರಪ್ರದೇಶ, ಮೇ 08: ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಕಡಪದಲ್ಲಿ ಶನಿವಾರ ನಡೆದಿದೆ.
ಸ್ಪೋಟದಿಂದ ಬಲಿಯಾದವರಲ್ಲಿ ಹೆಚ್ಚಿನವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸ್ಥಳೀಯ ಗ್ರಾಮವಾದ ಪುಲಿವೆಂಡುಲ ಮೂಲದವರು ಎಂದು ಹೇಳಲಾಗುತ್ತಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯವರು ಕಡಪ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸಿದ್ದಾರೆ.

ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಅನುಮತಿ ಪಡೆದೇ ಸ್ಥಳದಲ್ಲಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ಜಿಲೆಟಿನ್ ಕಡ್ಡಿಗಳನ್ನು ಬುದ್ವೆಲ್ ನಿಂದ ತರಲಾಗಿದ್ದು, ಈ ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಕಡಪ ಜಿಲ್ಲೆಯ ಪೊಲೀಸ್ ಅಧಿಕಾರಿ ಕೆ.ಎ.ಅನ್ಬುರಾಜನ್ ಅವರು ಹೇಳಿದ್ದಾರೆ.












Click it and Unblock the Notifications