ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾಲಿ ಜನಾರ್ದನ ರೆಡ್ಡಿ ರೀ ಎಂಟ್ರಿ! ಮತ್ತೆ ಗಣಿಗಾರಿಕೆ ಗ್ಯಾರಂಟಿ!

|
Google Oneindia Kannada News

ಅನಂತಪುರ, ಆಗಸ್ಟ್ 11: ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ಎದುರಿಸಿರುವ ಕರ್ನಾಟಕದ ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮತ್ತೆ ಸಕ್ರಿಯ ಉದ್ಯಮಕ್ಕೆ ಎಂಟ್ರಿ ಕೊಡಲು ಮುಂದಾಗಿದ್ದಾರೆ. ಕಬ್ಬಿಣ ಅದಿರು ಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿರುವ ರೆಡ್ಡಿಗೆ ಆಂಧ್ರಪ್ರದೇಶ ಸರ್ಕಾರ ಮುಕ್ತ ಆಹ್ವಾನ ನೀಡಿರುವ ಸುದ್ದಿ ಬಂದಿದೆ.

ಕರ್ನಾಟಕ - ಆಂಧ್ರಪ್ರದೇಶದ ಗಡಿಯಲ್ಲಿರುವ ಓಬಳಾಪುರಂ ಗಣಿಯಲ್ಲಿ ಎಂದಿನಂತೆ ಚಟುವಟಿಕೆ ನಡೆಸಲು ಇದ್ದ ಅಡ್ಡಿ ಆತಂಕ ದೂರಾಗಿದೆ. ಓಬಳಾಪುರಂ ಕಬ್ಬಿಣ ಅದಿರು ಗಣಿಗಾರಿಕೆಗೆ ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಸುಪ್ರೀಂಕೋರ್ಟ್ ಪಕ್ಕಕ್ಕೆ ಸರಿಸಿದೆ. ಸಂರಕ್ಷಿತ ಅರಣ್ಯ ಪ್ರದೇಶದ ಪಕ್ಕದಲ್ಲೇ ಇರು OMCಯ ಗಣಿಗಾರಿಕೆಗೆ NOC ಸಿಕ್ಕಿದೆ.

ನಾನು ಮನಸ್ಸು ಮಾಡಿದರೆ ಸಿಎಂ ಆಗಬಲ್ಲೇ: ಜನಾರ್ದನ ರೆಡ್ಡಿನಾನು ಮನಸ್ಸು ಮಾಡಿದರೆ ಸಿಎಂ ಆಗಬಲ್ಲೇ: ಜನಾರ್ದನ ರೆಡ್ಡಿ

ಇದಾದ ಬಳಿಕ ಜಗನ್ ಮೋಹನ್ ರೆಡ್ಡಿ ಸರ್ಕಾರವು ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿ, ಆಂಧ್ರ-ಕರ್ನಾಟಕ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದ ಬಗೆಹರಿದಿರುವುದರಿಂದ ಗಣಿಗಾರಿಕೆಗೆ ನಿರ್ಬಂಧ ಹೇರುವುದಕ್ಕೆ ಯಾವುದೇ ಆಕ್ಷೇಪಣೆ ಸಲ್ಲಿಸುವುದಿಲ್ಲ ಎಂದು ತಿಳಿಸಿದೆ.

ಸುಪ್ರೀಂಕೋರ್ಟ್ ಪರಿಗಣಿಸಿದರೆ

ಸುಪ್ರೀಂಕೋರ್ಟ್ ಪರಿಗಣಿಸಿದರೆ

ಒಂದು ವೇಳೆ ಜಗನ್ ರೆಡ್ಡಿ ಸರ್ಕಾರದ ಅಫಿಡವಿಟ್ ಪರಿಗಣಿಸಿ ಗಡಿ ರೇಖೆ ವಿವಾದ ಬಗೆಹರಿಸುವುದನ್ನು ಸುಪ್ರೀಂಕೋರ್ಟ್ ಪರಿಗಣಿಸಿದರೆ, ಗಾಲಿ ಜನಾರ್ದನ ರೆಡ್ಡಿ ಪೂರ್ಣ ಪ್ರಮಾಣದಲ್ಲಿ ಕಬ್ಬಿಣ ಅದಿರು ಗಣಿಗಾರಿಕೆಯಲ್ಲಿ ತೊಡಗಿಕೊಳ್ಳಬಹುದಾಗಿದೆ. ಗಾಲಿ ರೆಡ್ಡಿಗೆ ಮಣೆಹಾಕುವ ಮೂಲಕ ತಮ್ಮ ನಡುವಿನ ಮೈತ್ರಿಯನ್ನು ಇನ್ನಷ್ಟು ಬಲಪಡಿಸಿಕೊಳ್ಳಲು ಜಗನ್ ಮುಂದಾಗಿರುವುದು ಸ್ಪಷ್ಟವಾಗಿದೆ. ಅಮರಾವತಿ ನಿರ್ಮಾಣ, ಅಧಿಕಾರ ವಿಕೇಂದ್ರಿಕರಣ ಮುಂತಾದ ಯೋಜನೆಗಳಿಂದ ಸಾಕಷ್ಟು ಆರ್ಥಿಕ ಹಿನ್ನಡೆ ಅನುಭವಿಸಿರುವ ಜಗನ್ ರೆಡ್ಡಿಗೆ ಗಣಿಗಾರಿಕೆ ಮೂಲಕ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳುವ ಇರಾದೆ ಇದೆ. ಆಂಧ್ರ ಆಗಲಿ, ಕರ್ನಾಟಕದಲ್ಲಾಗಲಿ ಗಾಲಿ ರೆಡ್ಡಿಗೆ ಬಿಜೆಪಿ ಮೂಲಕ ರಾಜಕೀಯ ರೀ ಎಂಟ್ರಿ ಸದ್ಯಕ್ಕಂತೂ ಬಂದ್ ಆಗಿರುವುದು ಜಗನ್ ರೆಡ್ಡಿಗೆ ಗೊತ್ತಿಲ್ಲದ ವಿಚಾರವೇನಲ್ಲ.

ಗಣಿಗಾರಿಕೆಯ ಗುತ್ತಿಗೆ

ಗಣಿಗಾರಿಕೆಯ ಗುತ್ತಿಗೆ

ಜನವರಿ 2010 ರಲ್ಲಿ, ವೈಎಸ್ ರಾಜಶೇಖರ ರೆಡ್ಡಿ ಅವರ ನಂತರ ಕೆ ರೋಸಯ್ಯ ಅವರು ಮುಖ್ಯಮಂತ್ರಿಯಾದ ನಂತರ, ರೆಡ್ಡಿಗಳಿಗೆ ಅಡ್ಡಿ ಆತಂಕ ಎದುರಾಗಿತ್ತು. ರೆಡ್ಡಿ ಸಹೋದರರು ಬಳ್ಳಾರಿ ಅರಣ್ಯದಲ್ಲಿ ಸುಮಾರು 1.95 ಲಕ್ಷ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ಗಣಿಗಾರಿಕೆ ಮಾಡಿದ್ದಾರೆ ಮತ್ತು ಗಣಿಗಾರಿಕೆ ಮುಂದುವರಿಸಲು ಅವಕಾಶ ನೀಡಬಾರದು ಎಂದು ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದರು.

ಮಾರ್ಚ್ 2010 ರಲ್ಲಿ, ಗಣಿಗಾರಿಕೆಯ ಗುತ್ತಿಗೆಗಳನ್ನು ನಿಲ್ಲಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರೆ, ಕೇಂದ್ರೀಯ ಸಬಲೀಕರಣ ಸಮಿತಿ (CEC) ಅತಿಕ್ರಮಣವನ್ನು ವರದಿಯಂತೆ, ಗುತ್ತಿಗೆ ಪ್ರದೇಶಗಳ ಹೊರಗಿನ ಗಣಿಗಾರಿಕೆಯಲ್ಲಿ ತಪ್ಪಿತಸ್ಥ ಕಂಪನಿಗಳಿಗೆ ಗಣಿಗಾರಿಕೆಯನ್ನು ಪುನರಾರಂಭಿಸಲು ಮತ್ತು ಪಾವತಿಸಲು ಅನುಮತಿ ನೀಡುವಂತೆ ಶಿಫಾರಸು ಮಾಡಿತ್ತು.

ಸಿಬಿಐ ತನಿಖೆ ಎದುರಿಸುತ್ತಿದ್ದಾರೆ

ಸಿಬಿಐ ತನಿಖೆ ಎದುರಿಸುತ್ತಿದ್ದಾರೆ

ಗಾಲಿ ಜನಾರ್ದನ ರೆಡ್ಡಿ ಅವರು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಮತ್ತು ಒಎಂಸಿಯಿಂದ ಅನುಮತಿ ನೀಡಿದ್ದಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಕಬ್ಬಿಣದ ಅದಿರನ್ನು ವಿವೇಚನಾರಹಿತವಾಗಿ ಗಣಿಗಾರಿಕೆ ನಡೆಸಿದೆ ಎಂಬ ಆರೋಪಗಳಿವೆ. ಅಕ್ರಮ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಆಂಧ್ರದಲ್ಲಿ ಆರೋಪ ಹೊತ್ತುಕೊಂಡಿದ್ದು, ಇನ್ನೂ ಸಿಬಿಐ ತನಿಖೆ ಎದುರಿಸುತ್ತಿದ್ದಾರೆ.

ಈ ಸಂಸ್ಥೆಗಳು ಸುದ್ದಿಯಲ್ಲಿದ್ದವು

ಈ ಸಂಸ್ಥೆಗಳು ಸುದ್ದಿಯಲ್ಲಿದ್ದವು

ಈ ಪ್ರದೇಶದಲ್ಲಿ ಜಿ. ಜನಾರ್ದನರೆಡ್ಡಿ ಅವರ ವ್ಯವಸ್ಥಾಪಕ ನಿರ್ದೇಶಕತ್ವ, ಪಾಲುದಾರತ್ವ ಮತ್ತು ಗಣಿ ಕಂಪನಿಯಲ್ಲದೆ ಗಣಿ ಗುತ್ತಿಗೆ, ಗಡಿ ರೇಖೆ ತಿದ್ದಿರುವುದು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್, ಅನಂತಪುರಂ ಮೈನಿಂಗ್ ಕಾರ್ಪೊರೇಷನ್, ಓಬಳಾಪುರಂ ಮೈನಿಂಗ್ ಕಂಪನಿ, ಅಂತರಗಂಗಮ್ಮ ಮೈನಿಂಗ್ ಕಂಪನಿ, ವೈ. ಮಹಾಬಲೇಶ್ವರಪ್ಪ ಅಂಡ್ ಸನ್ಸ್ ಹಾಗೂ ಬಳ್ಳಾರಿ ಐರನ್ ಓರ್ಸ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥೆಗಳು ಸುದ್ದಿಯಲ್ಲಿದ್ದವು.

ಗಡಿ ಗುರುತು ನಾಶ ಪ್ರಕರಣ

ಗಡಿ ಗುರುತು ನಾಶ ಪ್ರಕರಣ

ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ ಅನ್ವಯ ಗಾಲಿ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಬಂಧನವಾಗಿತ್ತು. ಐಪಿಸಿ ಸೆಕ್ಷನ್ 120ಬಿ, 379, 411, 420, 422 ಮತ್ತು 447ರ ಅಡಿಯಲ್ಲಿ ಹಾಗೂ ಗಣಿಗಾರಿಕೆ ಮತ್ತು ಅರಣ್ಯ, ಖನೀಜ ಕಾಯ್ದೆಗಳ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇವರ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿತ್ತು.

2010ರಲ್ಲಿ ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಾ ಕೆ ಜಿ ಬಾಲಕೃಷ್ಣನ್ ಹಾಗೂ ನ್ಯಾಯಮೂರ್ತಿ ದೀಪಕ್ ವರ್ಮಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿ, ಓಬಳಾಪುರಂ ಮೈನಿಂಗ್ ಕಂಪನಿಯ ಗಣಿಗಾರಿಕೆಗೆ ಸಂಬಂಧಿಸಿದಂತೆ ಭಾರತೀಯ ಸರ್ವೆ ಇಲಾಖೆ ನೇತೃತ್ವದ ಸಮಿತಿ ರಚಿಸಿದ್ದು, ಸಮಗ್ರ ವರದಿ ನೀಡುವಂತೆ ಸೂಚಿಸಿತ್ತು.

English summary
Y S Jagan Mohan Reddy government has given green signal for the resumption of iron ore mining activity former Karnataka minister Gali Janardhan Reddy
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X