ಕೋವಿಡ್ ಪರೀಕ್ಷೆಗೆ ಹೊಸ ಪ್ರಯತ್ನ; ಬಸ್‌ನಲ್ಲಿಯೇ ಮಾದರಿ ಸಂಗ್ರಹ

ಅಮರಾವತಿ, ಜುಲೈ 17 : ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ - 19 ಪರೀಕ್ಷೆಗಳನ್ನು ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ ಬಸ್ ವ್ಯವಸ್ಥೆಯನ್ನು ಮಾಡಿದೆ.

Recommended Video

      ಗೋವಾ ಹೋಗೋ ಪ್ಲಾನ್ ಇದ್ರೆ ಮೊದಲು ಕ್ಯಾನ್ಸಲ್ ಮಾಡಿ. |Oneindia kannada

      ಸರ್ಕಾರ ಶುಕ್ರವಾರ 52 ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದೆ. ರಾಜ್ಯದಲ್ಲಿನ ಅತಿ ಹೆಚ್ಚು ಸೋಂಕಿತ ಪ್ರದೇಶಗಳಲ್ಲಿ ಈ ಬಸ್‌ಗಳು ಸಂಚಾರ ನಡೆಸಲಿವೆ. ಬಸ್‌ನಲ್ಲಿಯೇ ಕೋವಿಡ್ ಸೋಂಕಿತರ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹ ಮಾಡಲು ವ್ಯವಸ್ಥೆ ಮಾಡಲಾಗಿದೆ.

      In Andhra Pradesh COVID Samples Collection In Bus

      ಆಂಧ್ರಪ್ರದೇಶ ಸರ್ಕಾರ ಇದುವರೆಗೂ 102 ಬಸ್‌ಗಳನ್ನು ಪರೀಕ್ಷೆಗಾಗಿಯೇ ಬಿಡುಗಡೆ ಮಾಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಬಸ್‌ಗಳು ಸಂಚಾರ ನಡೆಸುತ್ತಿವೆ. 95 ವಿವಿಧ ಸ್ಥಳಗಳಲ್ಲಿ ಬಸ್‌ಗಳು ಕೋವಿಡ್ ಸೋಂಕಿತರ ಮಾದರಿಗಳನ್ನು ಸಂಗ್ರಹ ಮಾಡುತ್ತಿವೆ.

      In Andhra Pradesh COVID Samples Collection In Bus

      ರಾಜ್ಯದಲ್ಲಿನ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 40,646ಕ್ಕೆ ಏರಿಕೆಯಾಗಿದೆ. ಗುರುವಾರ ರಾಜ್ಯದಲ್ಲಿ 2,602 ಹೊಸ ಪ್ರಕರಣಗಳು ದಾಖಲಾಗಿವೆ. ಅತಿ ಹೆಚ್ಚು ಸೋಂಕು ಇರುವ ಪ್ರದೇಶದಲ್ಲಿ ಪರೀಕ್ಷೆಗಳನ್ನು ಹೆಚ್ಚಳ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.

      ಆಂಧ್ರಪ್ರದೇಶ ಸೋಮವಾರ ಕ್ವಾರಂಟೈನ್ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಬೇರೆ ರಾಜ್ಯದಿಂದ ಪಾಸು ಇಲ್ಲದೇ ಯಾರೂ ಸಹ ಸಂಚಾರ ನಡೆಸುವಂತಿಲ್ಲ ಎಂದು ಹೇಳಿದೆ. ರಾಜ್ಯದ ಗಡಿಯಲ್ಲಿ ಪ್ರತಿಯೊಬ್ಬರಿಗೂ ಸ್ಕ್ಯಾನಿಂಗ್ ಮಾಡಿಯೇ ಒಳಗೆ ಬಿಡಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+