ಸಂಪುಟ ವಿಸ್ತರಣೆ ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ ಜಗನ್

ಅಮರಾವತಿ, ಏಪ್ರಿಲ್ 14: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂಪುಟ ವಿಸ್ತರಣೆ ಬೆನ್ನಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಪಿಎಸ್‌ಆರ್‌ಟಿಸಿ) ಉಪಾಧ್ಯಕ್ಷ ಮತ್ತು ಎಂಡಿ ಸಿಎಚ್ ದ್ವಾರಕಾ ತಿರುಮಲ ರಾವ್ ಅವರು ಬಸ್ ಟಿಕೆಟ್ ದರವನ್ನು ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ.

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಡೀಸೆಲ್ ಸೆಸ್ ಏರಿಕೆ ಕಾರಣ ಎಂದಿದ್ದಾರೆ. ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಎಪಿಎಸ್‌ಆರ್‌ಟಿಸಿ ಉಪಾಧ್ಯಕ್ಷ ತಿರುಮಲ ರಾವ್, ಕಳೆದ ಒಂದು ತಿಂಗಳಿನಿಂದ ಇಂಧನ ಬೆಲೆ ಏರಿಕೆ, ನಿರ್ವಹಣಾ ವೆಚ್ಚದಲ್ಲಿ ಹೆಚ್ಚಳ, ಸಾಲದ ಹೊರೆ ಮತ್ತು ಸಾಂಕ್ರಾಮಿಕ ರೋಗದಿಂದ ಕಳೆದ ಎರಡು ವರ್ಷಗಳಲ್ಲಿ ಇಲಾಖೆ ತೀವ್ರ ನಷ್ಟ ಅನುಭವಿಸಿದೆ, ಸಮತೋಲನ ಕಾಯ್ದುಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಳೆದ ಎರಡು ವರ್ಷಗಳಲ್ಲಿ APSRTC ಗೆ 5,680 ಕೋಟಿ ರೂ. ನಷ್ಟವಾಗಿದೆ. ಟಿಕೆಟ್ ದರ ಏರಿಕೆ (ಏಪ್ರಿಲ್ 14) ಜಾರಿಗೆ ಬರಲಿದೆ ಎಂದು ಹೇಳಿದರು.

-ಪಲ್ಲೆ ವೆಲುಗು ಸೇವೆಗಳ ಟಿಕೆಟ್ ದರದಲ್ಲಿ 2 ಹೆಚ್ಚಳ.

-ಪಲ್ಲೆ ವೆಲುಗು ಬಸ್‌ಗಳ ಕನಿಷ್ಠ ದರ ಈಗ 10 ರೂ.

-ಎಕ್ಸ್‌ಪ್ರೆಸ್ ಸೇವೆಗಳ ಟಿಕೆಟ್ ದರದಲ್ಲಿ 5 ಹೆಚ್ಚಳ

-ಎಪಿ ಬಸ್ ಟಿಕೆಟ್ ಶುಲ್ಕದಲ್ಲಿ 10 ಹೆಚ್ಚಳ

Jagan govt increases APSRTC Bus Ticket Prices Over Diesel Cess

ಪ್ರಯಾಣಿಕರು ಪರಿಸ್ಥಿತಿಯ ಘೋರತೆಯನ್ನು ಅರ್ಥಮಾಡಿಕೊಂಡು ಸಹಕರಿಸಬೇಕು ಎಂದು ಆಶಿಸಿದರು. "ನಾವು ಡೀಸೆಲ್ ಸೆಸ್ ಅನ್ನು ಮಾತ್ರ ವಿಧಿಸುತ್ತಿದ್ದೇವೆ, ಇದು ವರ್ಷಕ್ಕೆ ಕೇವಲ 720 ಕೋಟಿ ರೂಪಾಯಿಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಎಂಡಿ ಹೇಳಿದರು. ನಿಗಮವು ನಷ್ಟವನ್ನು ಸರಿದೂಗಿಸಲು ನಾವು ಶುಲ್ಕವನ್ನು ಶೇಕಡಾ 32 ರಷ್ಟು ಹೆಚ್ಚಿಸಬೇಕಾಗಿದೆ" ಎಂದು ಹೇಳಿದರು. APSRTC ವಿಲೀನದ ಎರಡು ವರ್ಷಗಳ ನಂತರ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಭಾರೀ ಏರಿಕೆ ಕಂಡು ಬಂದಿದೆ. ಪೆಟ್ರೋಲ್‌, ಡೀಸೆಲ್ ದರ ಕಳೆದ 18 ದಿನಗಳಲ್ಲಿ ನಾಲ್ಕು ದಿನ ಮಾತ್ರ ಸ್ಥಿರವಾಗಿದ್ದು, ಉಳಿದ ದಿನಗಳಲ್ಲಿ ಏರಿಕೆ ಕಂಡಿದೆ.

Jagan govt increases APSRTC Bus Ticket Prices Over Diesel Cess

ವಿಶಾಖಪಟ್ಟಣಂನಲ್ಲಿ ಪೆಟ್ರೋಲ್ ಬೆಲೆ 120.26 ರು ಪ್ರತಿ ಲೀಟರ್; ಡೀಸೆಲ್ 105.89 ರು ಇದೆ. ಚಿತ್ತೂರು ಜಿಲ್ಲೆಯಲ್ಲಿ ಡೀಸೆಲ್ ಅತ್ಯಧಿಕ 108.95 ರು ಇದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ರಷ್ಯಾ- ಉಕ್ರೇನ್ ಯುದ್ಧದಿಂದಾಗಿ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 102.9 ಡಾಲರ್‌ಗೆ ಏರಿಕೆಯಾಗಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 107.2 ಯುಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+