ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಜಗನ್ ರೆಡ್ಡಿ ಪ್ರಮಾಣವಚನ ಸ್ವೀಕಾರ

|
Google Oneindia Kannada News

Recommended Video

ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಜಗನ್ ಮೋಹನ್ ರೆಡ್ಡಿ | Oneindia Kannada

ವಿಜಯವಾಡ, ಮೇ 30: ಆಂಧ್ರ ಪ್ರದೇಶ ಎರಡನೇ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ವೈ ಎಸ್ ಜಗನ್ ಮೋಹನ್ ರೆಡ್ಡಿ ಇಂದು(ಮೇ 30) ಪ್ರಮಾಣವಚನ ಸ್ವೀಕರಿಸಿದರು.

ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ರಾಜಭವನದಲ್ಲಿ ಜಗನ್ ಮೋಹನ್ ರೆಡ್ಡಿ ಅವಅರಿಗೆ ರಾಜ್ಯಪಾಲ ಇ ಎಸ್ ಎಲ್ ನರಸಿಂಹನ್ ಪ್ರಮಾಣ ವಚನ ಬೋಧಿಸಿದರು.

Jagan Mohan Reddy takes oath as Chief Minister of Andhra Pradesh

ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಮುಂತಾದ ಗಣ್ಯರು 46 ವರ್ಷ ವಯಸ್ಸಿನ ಜಗನ್ ರೆಡ್ಡಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಆಂಧ್ರಪ್ರದೇಶದ ಒಟ್ಟು 175 ವಿಧಾನಸಭಾ ಕ್ಷೇತ್ರಗಳಲ್ಲಿ 151 ವೈಎಸ್ ಆರ್ ಕಾಂಗ್ರೆಸ್, 22 ಟಿಡಿಪಿ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ 22 ವೈಎಸ್ ಆರ್ ಕಾಂಗ್ರೆಸ್ ಮತ್ತು ಕೇವಲ 2 ಕ್ಷೇತ್ರಗಳಲ್ಲಿ ಟಿಡಿಪಿ ಜಯಗಳಿಸಿತ್ತು. ಇಲ್ಲಿ ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬಿದ್ದಿತ್ತು.

English summary
YS Jagan Mohan Reddy takes oath as Chief Minister of Andhra Pradesh, in Vijayawada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X