ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರದಲ್ಲಿ ನಾಯ್ಡು ಯುಗಾಂತ್ಯ! ಮೇ 30 ರಂದು ಜಗನ್ ಗದ್ದುಗೆಗೆ

|
Google Oneindia Kannada News

ಅಮರಾವತಿ, ಮೇ 24: ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ತೆಲುಗುದೇಶಂ ಪಕ್ಷಕ್ಕೆ ಮುಖಭಂಗವಾಗುವಂಥ ಫಲಿತಾಂಶ ಹೊರಬಿದ್ದಿದ್ದು, ವೈಎಸ್ ಆರ್ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಲಿದೆ.

ಮೇ 30 ರಂದು ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ್ ರೆಡ್ಡಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಅದಕ್ಕೂ ಮುನ್ನ ಮೇ 25 ರಂದು ಪಕ್ಷದ ನಾಯಕರು ಸಭೆ ಸೇರಲಿದ್ದಾರೆ.

ಆಂಧ್ರದಲ್ಲಿ ಚಂದ್ರಬಾಬು ನಾಯ್ಡುಗೆ ಇದು ಅಂತಿಂಥ ಮುಖಭಂಗವಲ್ಲ! ಆಂಧ್ರದಲ್ಲಿ ಚಂದ್ರಬಾಬು ನಾಯ್ಡುಗೆ ಇದು ಅಂತಿಂಥ ಮುಖಭಂಗವಲ್ಲ!

ಒಟ್ಟು 175 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದ ಆಂಧ್ರಪ್ರದೇಶದಲ್ಲಿ 149 ಕ್ಷೇತ್ರಗಳಲ್ಲಿ ವೈಎಸ್ ಆರ್ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಆಡಳಿತಾರೂಢ ಟಿಡಿಪಿ ಕೇವಲ 25 ಕ್ಷೇತ್ರಗಳಲ್ಲಿ ಗೆದ್ದು ಭಾರೀ ಮುಖಭಂಗ ಅನುಭವಿಸಿತು.

Jagan Reddy to take oath as CM of Andhra on May 30

ಈಗಾಗಲೇ ಮುಖ್ಯಮಂತ್ರಿ ಚಂದ್ರಬಾಭು ನಾಯ್ಡು ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ 2019: ಗೆದ್ದವರು, ಸೋತವರುಲೋಕಸಭೆ ಚುನಾವಣೆ ಫಲಿತಾಂಶ 2019: ಗೆದ್ದವರು, ಸೋತವರು

ಲೋಕಸಭೆ ಚುನಾವಣೆಯಲ್ಲೂ ವೈಎಸ್ ಆರ್ ಕಾಂಗ್ರೆಸ್ ಅಭೂತಪೂರ್ವ ಸಾಧನೆ ಮೆರೆದಿದ್ದು, 25 ಕ್ಕೆ 25 ಸ್ಥಾನಗಳಲ್ಲೂ ಗೆದ್ದು ಕ್ಲೀನ್ ಸ್ವೀಪ್ ಮಾಡಿದೆ.

English summary
Andhra Pradesh Assembly elections 2019: Jaganmohan Reddy of Congress to take oath as chief minister of the state on May 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X