ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೀವ ತೆಗೆದ ಕೊರೊನಾವೈರಸ್: 175 ಕೆ.ಜಿ ಮೃತದೇಹ ರವಾನೆಗೆ ಜೆಸಿಬಿ ಬಳಕೆ!

|
Google Oneindia Kannada News

ಅಮರಾವತಿ, ಜುಲೈ,06: ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಅಂತ್ಯಸಂಸ್ಕಾರ ನಡೆಸುವುದರಲ್ಲಿ ಸಂಸ್ಕಾರವನ್ನೇ ಮರೆತು ನಡೆದುಕೊಳ್ಳುತ್ತಿರುವ ಪ್ರಕರಣಗಳು ದೇಶಾದ್ಯಂತ ಮೇಲಿಂದ ಮೇಲೆ ವರದಿಯಾಗುತ್ತಿವೆ.

Recommended Video

ಚಿತ್ರದುರ್ಗ ರೈತನ ಬದುಕನ್ನು ನಾಶ ಮಾಡಿದ ಕೊರೊನ | Chitradurga | Oneindia Kannada

ಆಂಧ್ರ ಪ್ರದೇಶದ ತಿರುಪತಿಯಲ್ಲಿ ಕೊರೊನಾವೈರಸ್ ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಜೆಸಿಬಿ ಬಳಸಿಕೊಂಡ ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜೆಸಿಬಿಯಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಮನ ಕಲಕುವ ದೃಶ್ಯ: ಜೆಸಿಬಿಯಲ್ಲಿ ಕೊರೊನಾ ರೋಗಿಯ ಶವ ಸಾಗಣೆಮನ ಕಲಕುವ ದೃಶ್ಯ: ಜೆಸಿಬಿಯಲ್ಲಿ ಕೊರೊನಾ ರೋಗಿಯ ಶವ ಸಾಗಣೆ

ತಿರುಪತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತಿರುಪತಿ ಮಹಾನಗರ ಪಾಲಿಕೆ ಆಯುಕ್ತರಾದ ಪಿ.ಎಸ್. ಗಿರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಕೊವಿಡ್-19ನಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಮೃತದೇಹದ ತೂಕವು ಬರೋಬ್ಬರಿ 175 ಕೆ.ಜಿ ಆಗಿತ್ತು ಎಂದು ಪಾಲಿಕೆ ಆಯುಕ್ತರಾದ ಪಿ.ಎಸ್. ಗಿರೀಶ್ ಸ್ಪಷ್ಟನೆ ನೀಡಿದ್ದಾರೆ.

JCB Use For Transmission Of Dead Body Of Coronavirus: Tirupati Commissioner Clarification

ಈ ರೀತಿಯ ಘಟನೆ ಮರುಕಳಿಸದಂತೆ ಶಿಸ್ತುಕ್ರಮ:

ಕೊರೊನಾವೈರಸ್ ನಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಮೃತದೇಹವನ್ನು ಪಡೆದು ಅಂತ್ಯಕ್ರಿಯೆ ನೆರವೇರಿಸಲು ನಿರಾಕರಿಸಿದರು. ಈ ಹಿನ್ನೆಲೆ ಸಂಬಂಧಿಕರ ಅನುಮತಿ ಪಡೆದುಕೊಂಡೇ ಮೃತದೇಹವನ್ನು ರವಾನಿಸಲು ಜೆಸಿಬಿ ಬಳಸಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಪಿ.ಎಸ್. ಗಿರೀಶ್ ಸ್ಪಷ್ಟನೆ ನೀಡಿದ್ದಾರೆ.

ತಿರುಪತಿಯಲ್ಲಿ ನಡೆದ ಘಟನೆಯು ರೀತಿ ಮತ್ತೊಂದು ಘಟನೆ ನಡೆಯುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಮತ್ತೊಮ್ಮೆ ಇಂಥ ಘಟನೆಗಳು ನಡೆದಯಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಗಿರೀಶ್ ಭರವಸೆ ನೀಡಿದ್ದಾರೆ.

ಇನ್ನು, ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಕೂಡಾ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ 20,019ಕ್ಕೂ ಹೆಚ್ಚು ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿದ್ದು, ಈ ಪೈಕಿ 10860 ಮಂದಿ ಗುಣಮುಖರಾಗಿದ್ದಾರೆ. ಇನ್ನು, ಬಾಕಿ ಉಳಿದಿರುವ 8920 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಮಹಾಮಾರಿಗೆ ರಾಜ್ಯದಲ್ಲಿ ಇದುವರೆಗೂ 239 ಜನರು ಪ್ರಾಣ ಬಿಟ್ಟಿದ್ದಾರೆ.

English summary
JCB Use For Transmission Of Dead Body Of Coronavirus: Tirupati Commissioner Clarification.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X