ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿರುಪತಿಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಕೊಠಡಿ ಲಭ್ಯ- ಎಸ್‌ಆರ್ ವಿಶ್ವನಾಥ್

|
Google Oneindia Kannada News

ತಿರುಪತಿ, ಜುಲೈ 12: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ಧವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಆದ ತಿರುಪತಿ ತಿರುಮಲ ಮಂಡಳಿ ಸದಸ್ಯ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ.

ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಎಸ್.ಆರ್ ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡಿದರು.

ತಿರುಪತಿ ಅರಣ್ಯದಿಂದ ಮಂಗಳೂರಿಗೆ 4 ಕೋಟಿ ರೂ. ಮೌಲ್ಯದ ರಕ್ತಚಂದನ ಸಾಗಾಟ ತಿರುಪತಿ ಅರಣ್ಯದಿಂದ ಮಂಗಳೂರಿಗೆ 4 ಕೋಟಿ ರೂ. ಮೌಲ್ಯದ ರಕ್ತಚಂದನ ಸಾಗಾಟ

ತಿರುಮಲದಲ್ಲಿ ಕರ್ನಾಟಕದ ಯಾತ್ರಾರ್ಥಿಗಳು ಬಂದು ವಾಸ್ತವೂಡಲು ಸೌಲಭ್ಯಗಳು ಅಷ್ಟಾಗಿ ಇರಲಿಲ್ಲ. ಜೊತೆಗೆ ರಾಜ್ಯಕ್ಕೆ ಸೇರಿದ ಸುಮಾರು ಏಳು ಎಕರೆ ಜಾಗ ಕೂಡ ನ್ಯಾಯಾಲಯದಲ್ಲಿತ್ತು. ಅದೆಲ್ಲವನ್ನು ಈಗ ಸರಿಪಡಿಸಿ ಯಾತ್ರಾರ್ಥಿಗಳಿಗೆ ಅನುಕೂಲ ಆಗುವಂತೆ ಸುಸಜ್ಜಿತ ಕೊಠಡಿಗಳು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

 ₹236 ಕೋಟಿ ವೆಚ್ಚ 346 ಕೊಠಡಿ ನಿರ್ಮಾಣ

₹236 ಕೋಟಿ ವೆಚ್ಚ 346 ಕೊಠಡಿ ನಿರ್ಮಾಣ

ಕರ್ನಾಟಕ ಭವನ ನವೀಕರಣ ವಸತಿಗೃಹಗಳ ನಿರ್ಮಾಣ ಸೇರಿದಂತೆ ಒಟ್ಟಾರೆ ಸುಮಾರು ₹236 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಒಟ್ಟು 346 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವಿಧ ಕಾರಣಗಳಿಂದ ಇಲ್ಲಿ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಆಗುತ್ತಿರಲಿಲ್ಲ. ಯಡಿಯೂರಪ್ಪರವರು ಮುಖ್ಯಮಂತ್ರಿ ಆಗಿದ್ದಾಗ ನೀಡಿದ್ದ ಅನುದಾನ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಮೇಲೆ ನೀಡಿದ ಸಹಕಾರದಿಂದ ಈಗ ಶೀಘ್ರಗತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಿರುಮಲಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದರು. ಹೀಗಾಗಿ ಮುಂದಿನ ಫೆಬ್ರವರಿ ವೇಳೆಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ವಿಶ್ವನಾಥ್ ವಿವರಣೆ ನೀಡಿದರು.

 100 ಕೋಟಿ ರೂ ಬಿಡುಗಡೆ ಅನುದಾನ

100 ಕೋಟಿ ರೂ ಬಿಡುಗಡೆ ಅನುದಾನ

ತಿರುಪತಿಗೆ ನಿತ್ಯ ಲಕ್ಷಾಂತರ ಯಾತ್ರಾರ್ಥಿಗಳು ಬರುತ್ತಿದ್ದು ಇವರ ಪೈಕಿ ರಾಜ್ಯದಿಂದ ಬರುವ ಯಾತ್ರಾರ್ಥಿಗಳಲ್ಲಿ ಸುಮಾರು ಏಕಕಾಲಕ್ಕೆ ಒಂದುವರೆ ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ವಸತಿ ಸೌಲಭ್ಯ ಕಲ್ಪಿಸಬಹುದು. ಹೀಗಾಗಿ ರಾಜ್ಯ ಸರ್ಕಾರ ಈಗ ತಕ್ಷಣಕ್ಕೆ 100 ಕೋಟಿ ರೂ ಬಿಡುಗಡೆ ಮಾಡುತ್ತಿದ್ದು ಉಳಿದ ಅನುದಾನವನ್ನು ಹಂತ ಹಂತವಾಗಿ ಕೊಡಲಿದೆ. ಹೀಗಾಗಿ ತಿರುಮಲದಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.
ತಿರುಪತಿ ಬೆಟ್ಟದ ಕೆಳಗೆ ರಾಜ್ಯ ಸರ್ಕಾರದ ಆಸ್ತಿ ಇದೆ. ಅದನ್ನು ಕೂಡ ಅಭಿವೃದ್ಧಿಪಡಿಸಿ ಅದರಿಂದ ಬರುವ ಆದಾಯವನ್ನು ತಿರುಮಲದಲ್ಲಿರುವ ಕರ್ನಾಟಕ ಭವನ ನಿರ್ವಹಣೆಗೆ ಬಳಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ವಿಶ್ವನಾಥ್ ತಿಳಿಸಿದರು.

 ಹೆಚ್ಚಿನ ಸಹಕಾರಕ್ಕೆ ಜೊಲ್ಲೆಗೆ ಮನವಿ

ಹೆಚ್ಚಿನ ಸಹಕಾರಕ್ಕೆ ಜೊಲ್ಲೆಗೆ ಮನವಿ

ಈ ಎಲ್ಲಾ ಕಾಮಗಾರಿಗಳನ್ನು ಮುಜರಾಯಿ ಇಲಾಖೆ ವತಿಯಿಂದ ನಡೆಸಲಾಗುತ್ತಿದ್ದು ಇಲಾಖೆಯಿಂದ ಈಗಾಗಲೇ ಸಾಕಷ್ಟು ಸಹಕಾರ ಸಿಕ್ಕಿದೆ ಇನ್ನೂ ಹೆಚ್ಚಿನ ಸಹಕಾರ ನೀಡಬೇಕೆಂದು ಸಚಿವೆ ಶಶಿಕಲಾ ಜೊಲ್ಲೆಯವರಿಗೆ ವಿನಂತಿಸಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಸೌಲಭ್ಯಗಳು ಸಿಗಲಿದೆ ಎಂದು ಎಸ್.ಆರ್ ವಿಶ್ವನಾಥ್ ತಿಳಿಸಿದರು.

 ಯಾತ್ರಾರ್ಥಿಗಳ ಸೌಲಭ್ಯಕ್ಕೆ ಬಳಕೆ

ಯಾತ್ರಾರ್ಥಿಗಳ ಸೌಲಭ್ಯಕ್ಕೆ ಬಳಕೆ

ತಿರುಮಲದಲ್ಲಿ ಬೇರೆ ರಾಜ್ಯಗಳು ಹೊಂದಿರುವ ಆಸ್ತಿಗಳಿಗೆ ಹೋಲಿಸಿದರೆ ಕರ್ನಾಟಕ ಅತಿ ಹೆಚ್ಚಿನ ಆಸ್ತಿ ಅಂದರೆ ಸುಮಾರು ಏಳು ಎಕರೆ ಜಾಗ ಹೊಂದಿದೆ. ಇದನ್ನು ಯಾತ್ರಾರ್ಥಿಗಳ ಸೌಲಭ್ಯ ಹಾಗೂ ಅನುಕೂಲಕ್ಕೆ ಬಳಸಿಕೊಳ್ಳಬೇಕೆನ್ನುವ ನಿಟ್ಟಿನಲ್ಲಿ ಇನ್ನೂ ಅನೇಕ ಕ್ರಮ ಕೈಗೊಳ್ಳುವ ಆಲೋಚನೆಗಳಿವೆ ಎಂದು ಬಿಡಿಎ ಅಧ್ಯಕ್ಷರಾದ ಎಸ್.ಆರ್ ವಿಶ್ವನಾಥ್ ಹೇಳಿದರು.

English summary
Tirupati Tirumala Board member S.R. Vishwanath said that 346 well-equipped accommodation rooms will soon be ready for the pilgrims of the state in Tirupati Tirumal,know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X