ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿರುಪತಿ ಬೆಟ್ಟದ ರಸ್ತೆಯಲ್ಲಿ ಭೂಕುಸಿತ: ಸಂಚಾರ ಸ್ಥಗಿತ

|
Google Oneindia Kannada News

ತಿರುಪತಿ, ಡಿಸೆಂಬರ್ 2: ಸಂಕಟ ಬಂದಾಗ ವೆಂಕಟರಮಣ ಅನ್ನುತ್ತೇವೆ. ಆದರೆ ತಿರುಪತಿ ವೆಂಕಟೇಶನ ದರ್ಶನ ಪಡೆಯಲು ಭಕ್ತರಿಗೆ ಸಂಕಷ್ಟ ಎದುರಾಗಿದೆ. ಕೆಲದಿನಗಳ ಹಿಂದೆ ಭಾರೀ ಮಳೆಯ ಆರ್ಭಟಕ್ಕೆ ತಿಮ್ಮಪ್ಪನ ಕ್ಷೇತ್ರ ತಿರುಪತಿ ನಲುಗಿ ಹೋಗಿತ್ತು. ಇದೀಗ ಮಳೆ ನಿಂತಿದೆ. ಆದರೆ ಮಳೆಯಿಂದ ಆದ ಅವಾಂತರಗಳು ಮುಂದುವರೆಯುತ್ತಲೇ ಇದೆ.

ತಿರುಪತಿ ಬೆಟ್ಟದಲ್ಲಿ ಅಲ್ಲಲ್ಲಿ ಭೂಕುಸಿತ ಆಗುತ್ತಿದೆ. ಮಂಗಳವಾರ, ಬುಧವಾರ ಕೂಡ ಭಾರೀ ಮಳೆಯಾದ ಪರಿಣಾಮ ತಿರುಪತಿ ಬೆಟ್ಟದಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದ್ದು, ಬಸ್‌ನಲ್ಲಿದ್ದ 20 ಪ್ರಯಾಣಿಕರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಬುಧವಾರ ನಡೆದಿದೆ.

ಬುಧವಾರ ಬೆಳಗ್ಗೆ ಬಸ್ಸೊಂದು ಬೆಟ್ಟ ಏರುತ್ತಿದ್ದ ವೇಳೆ, ಏಕಾಏಕಿ ಬಂಡೆಯೊಂದು ಬೆಟ್ಟದಿಂದ ಕೆಳಗೆ ಉರುಳಿದೆ. ಇದನ್ನು ಬಸ್ ಚಾಲಕ ತಕ್ಷಣವೇ ಗಮನಿಸಿ ಬಸ್‌ನ್ನು ನಿಲ್ಲಿಸಿದ ಕಾರಣ, ಬಸ್‌ನಲ್ಲಿದ್ದ 20 ಜನರು ಪ್ರಾಣಾಪಾಯದಿಂದ ಪಾರಾಗಿದ್ದರೆ.

Landslide On Tirupati Hill Road Due To Heavy Rain: Traffic Restriction

ತಿರುಪತಿ ಬೆಟ್ಟದ 2ನೇ ಘಾಟ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಸಂಚಾರವನ್ನು ಬಂದ್‌ ಮಾಡಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ. ಈ ಘಟನೆ ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ತೆರಳುವ ಭಕ್ತರಲ್ಲಿ ಆತಂಕ ಹೆಚ್ಚಿಸಿದೆ.

ಸುಮಾರು ಅಡಿ ಎತ್ತರದಿಂದ ಬಂಡೆಗಳು ಉರುಳಿ ಬಿದ್ದ ಪರಿಣಾಮ ಹಲವು ಕಾರುಗಳು ಸೇರಿ ರಸ್ತೆಗಳು ಹಾನಿಗೊಳಗಾಗಿವೆ. ಐಐಟಿ ದೆಹಲಿಯ ತಜ್ಞರು ಅವಘಡ ಘಟಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವಾರ ಕೂಡಾ ದಾಖಲೆ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ತಿರುಪತಿಯಲ್ಲಿ ಭಾರೀ ಅನಾಹುತ ಸಂಭವಿಸಿತ್ತು.

Landslide On Tirupati Hill Road Due To Heavy Rain: Traffic Restriction

ತಿರುಮಲ ತಿರುಪತಿ ದೇವಸ್ಥಾನದ ವಿಜಿಲೆನ್ಸ್, ಎಂಜಿನಿಯರಿಂಗ್ ಮತ್ತು ಅರಣ್ಯ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಸ್ತೆಯಿಂದ ಬಂಡೆಗಳನ್ನು ತೆಗೆಯುವ ಮೇಲ್ವಿಚಾರಣೆ ನಡೆಸಿದರು. ಅಲಿಪಿರಿ ಸಮೀಪದ ಎರಡನೇ ಘಾಟ್ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದರಿಂದ ಹಲವು ವಾಹನಗಳು ತಿರುಪತಿ ಘಾಟ್ ರಸ್ತೆಯಲ್ಲಿ ಜಖಂಗೊಂಡಿವೆ.

ತಿರುಮಲ ಬೆಟ್ಟವು ಇತ್ತೀಚೆಗೆ ನವೆಂಬರ್ 18ರಂದು ಇತಿಹಾಸದ ದಾಖಲೆಯ ಮಳೆಗೆ ಸಾಕ್ಷಿಯಾಯಿತು. ಇದರ ಪರಿಣಾಮವಾಗಿ ಘಾಟ್ ರಸ್ತೆಯ ಅನೇಕ ಕಡೆ ಭೂಕುಸಿತ ಸಂಭವಿಸಿದೆ. ಮಳೆಯ ಮುನ್ಸೂಚನೆಯಿಂದಾಗಿ ಎರಡು ದಿನಗಳ ಕಾಲ ಘಾಟ್ ರಸ್ತೆಗಳನ್ನು ಮುಚ್ಚುವುದಾಗಿ ಟಿಟಿಡಿ ಈಗಾಗಲೇ ಘೋಷಿಸಿತ್ತು. ದುರಸ್ತಿ ಕಾರ್ಯದ ನಂತರ ಕೆಲವು ದಿನಗಳ ನಂತರ ಘಾಟ್ ರಸ್ತೆಗಳನ್ನು ವಾಹನ ಸಂಚಾರಕ್ಕೆ ತೆರೆಯಲಾಯಿತು. ಮೊದಲ ಘಾಟ್ ರಸ್ತೆಯಲ್ಲಿ ಅಕ್ಕಗರ್ಲ ದೇವಸ್ಥಾನದ ಬಳಿ ತಡೆಗೋಡೆಗೆ ಹಾನಿಯಾಗಿದ್ದು, ನಾಲ್ಕು ಕಡೆ ಬಂಡೆಗಳು ರಸ್ತೆಗೆ ಬಿದ್ದಿವೆ ಎಂದು ಟಿಟಿಡಿ ತಿಳಿಸಿದೆ.

Landslide On Tirupati Hill Road Due To Heavy Rain: Traffic Restriction

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಶ್ರೀಮಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ. ವಾಯುಭಾರ ಕುಸಿತದ ಪರಿಣಾಮ ತಿರುಮಲ, ತಿರುಪತಿ ಸೇರಿದಂತೆ ಚಿತ್ತೂರು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿತ್ತು. ಎಲ್ಲೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ ದೇಗುಲ ನಗರದಲ್ಲಿ ಇಂಥ ಮಳೆ ಅನಾಹುತ ಘಟಿಸಿದ್ದು 1996 ಭೀಕರ ಪ್ರವಾಹದ ಬಳಿಕ ಇದೇ ಮೊದಲು ಎನ್ನಲಾಗುತ್ತಿದೆ.

ತಿರುಪತಿಯ ಹಲವು ತಗ್ಗು ಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. 20ಕ್ಕೂ ಹೆಚ್ಚು ಮಂದಿ ರಣ ಮಳೆಗೆ ಪ್ರಾಣ ಬಿಟ್ಟಿದ್ದರು. ಇನ್ನೂ ಅದೆಷ್ಟೋ ಮೂಕಪ್ರಾಣಿಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.

Recommended Video

Nandi Hills ರಸ್ತೆಗಳ ಮರುನಿರ್ಮಾಣ , ಪ್ರವಾಸಿಗರು ಫುಲ್ ಖುಷ್ | Oneindia Kannada

English summary
Another landslide has occurred in the Tirupati Hills and now the second ghat road is temporarily closed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X