ತಿರುಪತಿಯಲ್ಲಿ ಆಗಸ್ಟ್ 14ರ ತನಕ ಲಾಕ್ ಡೌನ್

ಅಮರಾವತಿ, ಆಗಸ್ಟ್ 06 : ಆಂಧ್ರ ಪ್ರದೇಶದ ತಿರುಪತಿಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಆಗಸ್ಟ್ 14ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ತಿರುಪತಿ ನಗರ ಸಭೆ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ತರಕಾರಿ ಅಂಗಡಿ, ದಿನಸಿ ಅಂಗಡಿಗಳು ಬೆಳಗ್ಗೆ 6 ರಿಂದ 2 ಗಂಟೆಯ ತನಕ ಮಾತ್ರ ಖರೀದಿ ಮಾಡಲು ಅವಕಾಶ ನೀಡಲಾಗಿದೆ.

ತಿರುಪತಿಯಲ್ಲಿ ಪ್ರತಿದಿನ ಸುಮಾರು 400 ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಈ ಪ್ರತಿದಿನ 200 ಪ್ರಕರಣಗಳು ವರದಿಯಾಗುತ್ತಿದೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.

Lockdown In Tirupati Extended Till August 14

ತಿರುಪತಿಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ದೇವಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ರೀತಿಯಲ್ಲಿ ತೊಂದರೆ ಉಂಟು ಮಾಡುವುದಿಲ್ಲ ಎಂದು ನಗರ ಸಭೆ ಹೇಳಿದೆ. ಭಕ್ತರು ಎಂದಿನಂತೆ ಬಂದು ದೇವರ ದರ್ಶನವನ್ನು ಪಡೆಯಬಹುದಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಜೂನ್ 20ರಿಂದ ಆಗಸ್ಟ್ 5ರ ತನಕ ತಿರುಪತಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಇದನ್ನು ಈಗ ಆಗಸ್ಟ್ 15ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ದೇಶದಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವ ರಾಜ್ಯಗಳಲ್ಲಿ ಆಂಧ್ರ ಪ್ರದೇಶವೂ ಸೇರಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,86,461ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+