ಟಿಡಿಪಿ ಪಟ್ಟಿ ಬಿಡುಗಡೆ, ನಂ.1 ಶ್ರೀಮಂತ ಸಂಸದ ಮತ್ತೊಮ್ಮೆ ಅಭ್ಯರ್ಥಿ

ಅಮರಾವತಿ, ಮಾರ್ಚ್ 19: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಇರುವುದರಿಂದ ತೆಲುಗು ದೇಶಂ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ದೇಶದ ಅತ್ಯಂತ ಶ್ರೀಮಂತ ಸಂಸದ ಗಲ್ಲಾ ಜಯದೇವ್ ಅವರೂ ಸ್ಥಾನ ಪಡೆದಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಗುಂಟೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರ ಒಟ್ಟು ಆಸ್ತಿ ಮೌಲ್ಯ 620 ಕೋಟಿ ರೂ. ಎಂದು ಕಳೆದ ಚುನಾವಣೆಯಲ್ಲಿ ಘೋಷಿಸಿದ್ದರು. ಈ ಬಾರಿಯೂ ಅವರು ಅದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಅಮರ ರಾಜ ಗ್ರೂಪ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಜಯದೇವ್, ಕಳೆದ ಚುನಾವಣೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಿದ್ದರು.

Lok Sabha elections 2019: TDP releases list of 25 candidates

ಕಳೆದ ಶುಕ್ರವಾರವಷ್ಟೇ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆಂಧ್ರಪ್ರದೇಶದಲ್ಲಿ ಒಟ್ಟು 175 ವಿಧಾನಸಭಾ ಕ್ಷೇತ್ರ ಕ್ಷೇತ್ರಗಳು ಮತ್ತು 25 ಲೋಕಸಭಾ ಕ್ಷೇತ್ರಗಳಿವೆ. ಇಲ್ಲಿ ಏಪ್ರಿಲ್ 11 ರಂದೇ ಎರಡೂ ಚುನಾವಣೆಗಳೂ ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+