ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರದಲ್ಲಿ 262 ವಿದ್ಯಾರ್ಥಿಗಳು, 160 ಶಿಕ್ಷಕರಿಗೆ ಕೊರೊನಾ ಸೋಂಕು

|
Google Oneindia Kannada News

ಅಮರಾವತಿ, ನವೆಂಬರ್ 05: ಆಂಧ್ರಪ್ರದೇಶದಲ್ಲಿ ಈಗಾಗಲೇ 262 ವಿದ್ಯಾರ್ಥಿಗಳು, 160 ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿದೆ.

ಈ ಬಗ್ಗೆ ಮಾತನಾಡಿರುವ ಶಾಲಾ ಶಿಕ್ಷಣ ಆಯುಕ್ತ ವಿ ಚಿನ್ನ ವೀರಭದ್ರುಡು ಅವರು, ಶಾಲಾ ವಿದ್ಯಾರ್ಥಿಗಳಿಗ ಕೊರೋನಾ ಸೋಂಕಿನ ಅಂಕಿ ಅಂಶ ಆತಂಕಕಾರಿಯಲ್ಲ.

ಕರ್ನೂಲ್‌ನಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು,4 ಶಾಲೆಗಳು ಬಂದ್ ಕರ್ನೂಲ್‌ನಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು,4 ಶಾಲೆಗಳು ಬಂದ್

ಏಕೆಂದರೆ ಶಾಲೆಗಳು ಆರಂಭವಾದ ಬಳಿಕ ಶಾಲೆಗಳಿಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಸೋಂಕಿಗೆ ತುತ್ತಾದ ವಿದ್ಯಾರ್ಥಿಗಳ ಸಂಖ್ಯೆ ಶೇ.0.1ರಷ್ಟೂ ಇಲ್ಲ. ಶಾಲೆಗಳು ಆರಂಭವಾಗಿದ್ದರಿಂದಲೇ ವಿದ್ಯಾರ್ಥಿಗಳಿಗೆ ಸೋಂಕು ಬಂದಿದೆ ಎಂದು ಹೇಳುವುದು ತಪ್ಪು. ಸೋಂಕು ಶಾಲೆಯಿಂದಲ್ಲದೇ ಬೇರಾವುದೇ ಮಾರ್ಗದಿಂದಲೂ ಅವರಿಗೆ ಸೋಂಕಿರಬಹುದು.

Not Alarming Says Andhra Official After 262 Students Test Covid Positive

ಶಾಲೆಗಳನ್ನು ತೆರೆಯದೇ ಇದ್ದಿದ್ದರೆ, ಆನ್‌ಲೈನ್ ತರಗತಿಗಳನ್ನು ಪಡೆಯಲು ಸಾಧ್ಯವಾಗದ ಬಡ ವಿದ್ಯಾರ್ಥಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಬುಡಕಟ್ಟು ಮತ್ತು ಗ್ರಾಮೀಣ ಪ್ರದೇಶದ ಬಾಲಕಿಯರಿಗೆ ಇದು ತೊಂದರೆಯಾಗಿದೆ, ಏಕೆಂದರೆ ಹದಿಹರೆಯದವರು ಶಾಲೆಗಳಿಗೆ ಹೋಗುವುದನ್ನು ನಿಲ್ಲಿಸಿದರೆ ಪೋಷಕರು ಬಾಲ್ಯ ವಿವಾಹಕ್ಕೆ ಮುಂದಾಗಬಹುದು ಎಂದು ಚಿನ್ನ ವೀರಭದ್ರುಡು ಆತಂಕ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಶಾಲೆಗಳನ್ನು ತೆರೆದು ಮೂರು ದಿನಗಳು ಕೂಡ ಆಗಿಲ್ಲ ಆಗಲೇ 262 ಮಕ್ಕಳಿಗೆ ಸೋಂಕು ತಗುಲಿದೆ.

ನವೆಂಬರ್ 2ರಂದು ಆಂಧ್ರ ಪ್ರದೇಶ ಸರ್ಕಾರ 9 ಮತ್ತು 10 ತರಗತಿ ವಿದ್ಯಾರ್ಥಿಗಳಿಗಾಗಿ ಶಾಲೆಗಳನ್ನು ತೆರೆಯಲಾಗಿತ್ತು ಕೊವಿಡ್ ಮಾರ್ಗಸೂಚಿ ಅನ್ವಯವೇ ನಿಯಮಗಳನ್ನು ಪಾಲಿಸಿ ಶಾಲೆಗಳನ್ನು ಆರಂಭಿಸಲಾಗಿತ್ತು.

ಪ್ರತೀ ಕೊಠಡಿಯಲ್ಲಿ ಗರಿಷ್ಠ 15 ರಿಂದ 16 ಮಕ್ಕಳನ್ನು ಮಾತ್ರ ಕೂರಿಸಲಾಗಿತ್ತು ಎಂದು ಸರ್ಕಾರ ಹೇಳಿದೆ. ಆದಾಗ್ಯೂ 262 ವಿದ್ಯಾರ್ಥಿಗಳು, 160 ಶಿಕ್ಷಕರಿಗೆ ಕೊರೋನಾ ಸೋಂಕು ಒಕ್ಕರಿಸಿದೆ.

ಅಧಿಕಾರಿಗಳು ಒದಗಿಸಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ 9 ಮತ್ತು 10 ನೇ ತರಗತಿಗೆ 9.75 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು, ಅದರಲ್ಲಿ 3.93 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು, 1.11 ಲಕ್ಷ ಶಿಕ್ಷಕರಲ್ಲಿ, 99,000 ಸಾವಿರಕ್ಕೂ ಹೆಚ್ಚು ಮಂದಿ ಶಿಕ್ಷಣ ಸಂಸ್ಥೆಗಳಿಗೆ ಬುಧವಾರ ಹಾಜರಾಗಿದ್ದಾರೆ.

Recommended Video

Arnab Goswami sent to 14 days Judicial Custody : ಯಾರಾದ್ರೂ ಸಹಾಯ ಮಾಡಿ please !!

ಈ 1.11 ಲಕ್ಷ ಶಿಕ್ಷಕರ ಪೈಕಿ 160 ಶಿಕ್ಷಕರಿಗೆ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಆದರೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯವೇ ನಮಗೆ ಮುಖ್ಯ ಎಂದು ಹೇಳಿದ್ದಾರೆ.

English summary
As many as 262 students and about 160 teachers tested positive in Andhra Pradesh during the past three days after schools were reopened on November 2 for class 9 and 10 students, a senior official of the school education said today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X