• search
 • Live TV
ಅಮರಾವತಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಂಧ್ರಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಯ 'ಉಲ್ಟಾ' ನಡಿಗೆ!

|
   ಆಂಧ್ರಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಯ 'ಉಲ್ಟಾ' ನಡಿಗೆ! | CHANDRABABU NAIDU | ONEINDIA KANNADA

   ಅಮರಾವತಿ, ಡಿಸೆಂಬರ್.16: ಆಂಧ್ರಪ್ರದೇಶದಲ್ಲಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿಯೇ ಪ್ರತಿಭಟನೆಗೆ ಇಳಿದು ಬಿಟ್ಟಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.

   ಅಮರಾವತಿಯಲ್ಲಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ವಿಶಿಷ್ಟ ಹಾಗೂ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಟಿಡಿಪಿ ಪಕ್ಷದ ಶಾಸಕರು, ಸಂಸದರು ಕೂಡಾ ಪಕ್ಷದ ಮುಖ್ಯಸ್ಥರ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

   ಆಂಧ್ರಪ್ರದೇಶದಲ್ಲಿ ಅತ್ಯಾಚಾರಿಗಳಿಗೆ 21 ದಿನಗಳಲ್ಲೇ ಗಲ್ಲುಶಿಕ್ಷೆ

   ಸೋಮವಾರ ಆಂಧ್ರಪ್ರದೇಶ ವಿಧಾನಸಭೆಯ ಆರನೇ ದಿನದ ಅಧಿವೇಶನ ನಡೆಯಲಿದ್ದು, ಈ ವೇಳೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿರೋಧ ಪಕ್ಷದ ನಾಯಕರೂ ಆಗಿರುವ ಚಂದ್ರಬಾಬು ನಾಯ್ಡು, ಹಿನ್ನಡಿಗೆಯ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಹಿಮ್ಮುಖವಾಗುತ್ತಿವೆ. ಇದನ್ನು ಬಿಂಬಿಸುವ ನಿಟ್ಟಿನಲ್ಲಿ ಈ ರೀತಿಯ ವಿಭಿನ್ನ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.

   ಅಮರಾವತಿ ನಿರ್ಮಾಣಕ್ಕೆ ಹೂಡಿಕೆಗಾರರೇ ಇಲ್ಲ:

   ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯ ಪುನರ್ ನಿರ್ಮಾಣ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಕನಸಿನ ಯೋಜನೆಯಾಗಿತ್ತು. ಅದಕ್ಕಾಗಿ ಈ ಹಿಂದೆ ಸರ್ಕಾರ ಬರೋಬ್ಬರಿ 2 ಲಕ್ಷ ಕೋಟಿ ರೂಪಾಯಿ ಹಣವನ್ನು ಮೀಸಲು ಇಡಲಾಗಿತ್ತು. ಈಗ ಯೋಜನೆಗೆ ಹಣ ಹೂಡಿಕೆ ಮಾಡಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ. ಜಗನ್ ಮೋಹನ್ ರೆಡ್ಡಿ ನೇತೃತ್ವದ ನೂತನ ಸರ್ಕಾರ ಈ ಯೋಜನೆಯನ್ನೇ ಕೊಲ್ಲಲು ಹೊರಟಿದೆ ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

   ಸೋಮವಾರ ಆಂಧ್ರಪ್ರದೇಶ ವಿಧಾನಸಭಾ ಅಧಿವೇಶನದಲ್ಲಿ 13 ಮಹತ್ವದ ಮಸೂದೆಗಳ ಬಗ್ಗೆ ಚರ್ಚೆ ನಡೆಯಲಿದೆ. ಎಸ್ ಸಿ ಆಯೋಗ, ಎಸ್ ಟಿ ಆಯೋಗಕ್ಕೆ ಸಂಬಂಧಿಸಿದ ಮಸೂದೆ ಹಾಗೂ ಅಬಕಾರಿಗೆ ಸೇರಿದ ಎರಡು ತಿದ್ದುಪಡಿ ಬಗ್ಗೆ ಚರ್ಚೆ ನಡೆಯಲಿದೆ. ಈ ಅಧಿವೇಶನ ಆರಂಭಕ್ಕೂ ಮೊದಲೇ ಟಿಡಿಪಿ ಮುಖ್ಯಸ್ಥರ ಆದಿಯಾಗಿ ಎಲ್ಲ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.

   English summary
   Amaravati: TDP Chief Chandrababu Naidu Along With Other Party Workers Stages A Protest By Walking Backwards.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X