ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬ್ಬಂದಿಗೆ ಕೊರೊನಾ ಸೋಂಕು: ತಿರುಪತಿ ಗೋವಿಂದರಾಜ ಸ್ವಾಮಿ ದೇವಸ್ಥಾನ ಬಂದ್

|
Google Oneindia Kannada News

ತಿರುಪತಿ, ಜೂನ್ 12: ಟಿಟಿಡಿ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಿರುಪತಿ ಶ್ರೀ ಗೋವಿಂದರಾಜಸ್ವಾಮಿ ದೇವಾಲಯವನ್ನು ಬಂದ್ ಮಾಡಲಾಗಿದೆ.

Recommended Video

Bengaluru corona cases are getting scarier everyday | Bengaluru | Oneindia Kannada

ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಅವರೊಂದಿಗೆ ಸಂಪರ್ಕದಲ್ಲಿದ್ದ ಇಬ್ಬರು ಕುಟುಂಬ ಸದಸ್ಯರು, ಟಿಟಿಡಿ ಸಿಬ್ಬಂದಿಗಳೂ ಸೇರಿ ಒಟ್ಟು 8 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಜೂನ್ 8 ರಿಂದ ಚಾಮುಂಡಿ ಬೆಟ್ಟ ರೀ ಓಪನ್: ಗಮನಿಸಬೇಕಾದ ಅಂಶಗಳುಜೂನ್ 8 ರಿಂದ ಚಾಮುಂಡಿ ಬೆಟ್ಟ ರೀ ಓಪನ್: ಗಮನಿಸಬೇಕಾದ ಅಂಶಗಳು

ಕೊರೊನಾ ಲಾಕ್‌ಡೌನ್‌ನಿಂದಾಗಿ ತಿರುಮಲ ಹಾಗೂ ಗೋವಿಂದರಾಜಸ್ವಾಮಿ ದೇವಸ್ಥಾನ ಎರಡೂ ಬಂದ್ ಆಗಿತ್ತು, ಇದೀಗ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮತ್ತೆ ಬಂದ್ ಮಾಡಲಾಗಿದೆ.

ಸಿಬ್ಬಂದಿಯಲ್ಲಿ ವೈರಸ್ ದೃಢಪಡುತ್ತಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಟಿಟಿಡಿ ದೇವಾಲಯವನ್ನು ಬಂದ್ ಮಾಡುವಂತೆ ಆದೇಶಿಸಿದೆ. ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಧೀನದಲ್ಲಿ ಬರುವ ದೇವಸ್ಥಾನವಾಗಿದೆ.

Tirupati Sri Govindaraja Swamy Temple Shuts

ಜೂನ್.13 ಮತ್ತು 13 ಎರಡು ದಿನಗಳ ಕಾಲ ದೇವಾಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಜೂನ್.14ರ ಬಳಿಕ ದೇವಾಲಯದ ಬಾಗಿಲನ್ನು ತೆರೆಯುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಯಾನಿಟೈಸ್ ಇನ್ಸ್ ಪೆಕ್ಟರ್ ಒಬ್ಬರು ಅನಾರೋಗ್ಯಕ್ಕೀಡಾಗಿದ್ದರು. ಬಳಿಕ ಅವರನ್ನು ಟಿಟಿಡಿ ಕೇಂದ್ರೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರಲ್ಲಿ ವೈರಸ್ ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

English summary
After one of its employees working at the Sri Govindaraja Swamy Temple in Tirupati tested positive for COVID-19, the TTD has ordered the closure of the temple with immediate effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X