ಶ್ರೀಕಾಕುಳಂನಲ್ಲಿ ರೈಲು ಅಪಘಾತ; ಐವರು ದಾರುಣ ಸಾವು

ಅಮರಾವತಿ, ಏಪ್ರಿಲ್ 12: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ಸೋಮವಾರ ತಡರಾತ್ರಿ ರೈಲು ಅಪಘಾತ ಸಂಭವಿಸಿದೆ. ಕೊಯಮತ್ತೂರು- ಸಿಲ್ಚಾರ್ ಎಕ್ಸ್‍ಪ್ರೆಸ್ ರೈಲಿನಿಂದ ಸಿಗಡಮ್ -ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಪ್ರಯಾಣಿಕರು ಓಡಲು ಪ್ರಯತ್ನಿಸುತ್ತಿದ್ದರು.

ಈ ವೇಳೆ ಅದೇ ಹಳಿಯಲ್ಲಿ ವೇಗವಾಗಿ ಬಂದ ಭುವನೇಶ್ವರ-ಮುಂಬೈ-ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು, ಹಳಿಯ ಮೇಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಪರಿಣಾಮ 5 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Train Accident in Srikakulam; Five Passangers Death

ಐವರ ಮೃತದೇಹಗಳ ಗುರುತು ಪತ್ತೆ ಮಾಡಲಾಗಿದ್ದು, ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಶ್ರೀಕಾಕುಳಂ ರೈಲ್ವೆ ಅಧಿಕಾರಿ ಜಿ.ಆರ್. ರಾಧಿಕಾ ಮಾಹಿತಿ ನೀಡಿದ್ದಾರೆ.

ಮೃತರಲ್ಲಿ ಇಬ್ಬರು ಅಸ್ಸಾಂ ಮೂಲದವರು ಎಂದು ಗುರುತಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಶ್ರೀಕಾಕುಳಂ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಒಡಿಶಾ ಮೂಲದವರಾಗಿದ್ದಾರೆ ಎಂದು ರೈಲ್ವೆ ಅಧಿಕಾರಿ ರಾಧಿಕಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Train Accident in Srikakulam; Five Passangers Death

Recommended Video

      ಬಂದೇ ಬಿಡ್ತು RCB vs CSK ಪಂದ್ಮ | Oneindia Kannada

      ವಿಶಾಖಪಟ್ಟಣ- ಪಲಾಸ ಮುಖ್ಯ ಮಾರ್ಗದ ಮಧ್ಯಭಾಗದಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+