• search
  • Live TV
ಅಮರಾವತಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟಿಟಿಡಿಯಿಂದ ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

|

ಅಮರಾವತಿ, ಆಗಸ್ಟ್ 28: ತಿರುಪತಿಯಲ್ಲಿ 100 ಹಾಸಿಗೆಗಳ ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಟಿಟಿಡಿ ಘೋಷಣೆ ಮಾಡಿದೆ. ಆಸ್ಪತ್ರೆ ಕಟ್ಟಡ ನಿರ್ಮಾಣವಾಗುವ ತನಕ ತಾತ್ಕಾಲಿಕ ಕಟ್ಟಡದಲ್ಲಿ ಆಸ್ಪತ್ರೆ ನಡೆಯಲಿದೆ.

ನವೆಂಬರ್ 14ರಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಬಾಲಾಜಿ ಇನ್ಸಿಟಿಟ್ಯೂಟ್‌ ಆಫ್ ಸರ್ಜರಿಯ ಹಳೆ ಕಟ್ಟಡದಲ್ಲಿ ಅಲ್ಲಿಯ ತನಕ ತಾತ್ಕಾಲಿಕ ಆಸ್ಪತ್ರೆ ಕಾರ್ಯ ನಿರ್ವಹಣೆ ಮಾಡಲಿದೆ.

ಬೆಂಗಳೂರಿನಲ್ಲೇ ಕೊವಿಡ್-19 ಚಿಕಿತ್ಸೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಕಂಚಿ ಕೋಮಕೋಟಿ ಮಕ್ಕಳ ಟ್ರಸ್ಟ್ ಆಸ್ಪತ್ರೆ ಟಿಟಿಡಿ ನಿರ್ಮಾಣ ಮಾಡುವ ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಸಲಹೆಗಳನ್ನು ನೀಡಲಿದೆ. ತಿರುಪತಿಯಲ್ಲಿಯೇ ಆಸ್ಪತ್ರೆ ನಿರ್ಮಾಣವಾಗಲಿದೆ.

ಭಕ್ತರ ಗೊಂದಲಗಳಿಗೆ ತೆರೆ ಎಳೆದ ತಿರುಪತಿ ದೇವಾಲಯ

ಟಿಟಿಡಿ ಮುಖ್ಯಸ್ಥ ವೈ. ವಿ. ಸುಬ್ಬಾರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ, ಬೋನ್ ನ್ಯಾರೋ ಸೇರಿದಂತೆ ವಿವಿಧ ಶಸ್ತ್ರ ಚಿಕಿತ್ಸೆಗಳು ದೊರೆಯುವಂತೆ ವ್ಯವಸ್ಥೆ ಮಾಡಲಾಗುತ್ತದೆ" ಎಂದರು.

ಆಸ್ತಿ ಮಾರಾಟ ಮಾಡುವ ಟಿಟಿಡಿ ನಿರ್ಧಾರ ತಡೆದ ಆಂಧ್ರ ಸರ್ಕಾರ!

ಬಾಲಾಜಿ ಇನ್ಸಿಟಿಟ್ಯೂಟ್‌ ಆಫ್ ಸರ್ಜರಿಯ ಹಳೆ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಆಸ್ಪತ್ರೆ ಕಾರ್ಯ ನಿರ್ವಹಣೆ ಮಾಡಲಿದೆ. ಈ ಕುರಿತು ಇನ್ಸಿಟಿಟ್ಯೂಟ್ ಅಧಿಕಾರಿಗಳ ಜೊತೆ ಈಗಾಗಲೇ ಚರ್ಚೆ ನಡೆಸಲಾಗಿದೆ.

English summary
Tirumala Tirupati Devasthanams (TTD) announced that 100 bed super specialty hospital will be built at Tirupati for children.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X