ವಿಶಾಖಪಟ್ಟಣಂ ವಿಷಾನಿಲ: ಚಂದ್ರಬಾಬು ನಾಯ್ಡು ಮೇಲೆ ಜಗನ್ ಆರೋಪ

ವಿಶಾಖಪಟ್ಟಣಂ, ಮೇ 18: ''ಆಂಧ್ರಪ್ರದೇಶದ ವಿಶಾಖಪಟ್ಟಣಂ ವಿಷಾನಿಲ ದುರಂತಕ್ಕೆ ಕಾರಣವಾದ ಎಲ್‌ ಜಿ ಪಾಲಿಮರ್‌ ಮರು ಆರಂಭಿಸಲು ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ'' ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

Recommended Video

      ವಿರೋಧದ ನಡುವೆ ಮಹತ್ವದ ನಿರ್ಣಯ ತೆಗೆದುಕೊಂಡ ಜಗನ್ | Jagan | 3 Capital | Andhra Pradesh | oneindia kannada

      ಸೋಮವಾರ ವಿಷಾನಿಲ ದುರಂತದ ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ರೆಡ್ಡಿ ಅವರು ವಿಡಿಯೋ ಸಂವಾದ ನಡೆಸಿದರು. ಘಟನೆ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತನಿಖೆ ನಡೆಸಲು ವಿವಿಧ ಸಮಿತಿಗಳನ್ನು ರಚಿಸಿದೆ. ಈ ಸಮಿತಿಗಳು ನೀಡಿದ ವರದಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.

      ಅಲ್ಲದೇ ವಿಷಾನಿಲ ಸೂಸಿದ ಎಲ್‌ಜಿ ಪಾಲಿಮರ್ ವಿಸ್ತರಣೆಗೆ ಹಿಂದಿನ ಚಂದ್ರಬಾಬು ನಾಯ್ಡು ಸರ್ಕಾರ ಅನುಮತಿ ನೀಡಿತ್ತು ಎಂದು ಆರೋಪಿಸಿದರು.

      Vizag Gas Leak: No Reopen LG Polymers Says CM Jagan Mohan Reddy

      ಈ ದುರಂತಕ್ಕೆ ಕಾರಣದಾವರನ್ನು ಯಾವುದೇ ಕಾರಣಕ್ಕೆ ಕ್ಷಮಿಸುವುದಿಲ್ಲ. ಸಮಿತಿಗಳ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದರು.

      ಮೇ 7 ರಂದು ವಿಶಾಖಪಟ್ಟಣಂ ಹೊರವಲಯದ ಆರ್ ಆರ್ ವೆಂಕಟಾಪುರಂ ಬಳಿಯ ಎಲ್‌ ಜಿ ಪಾಲಿಮರ್ಸ್ ಎಂಬ ಎಂಎನ್‌ಸಿ ಕಂಪೆನಿಯ ಕಾರ್ಖಾನೆಯಲ್ಲಿ ದುರಂತ ಸಂಭವಿಸಿತ್ತು, ಘಟನೆಯಲ್ಲಿ 11 ಜನ ಮೃತಪಟ್ಟಿದ್ದರು. 800 ಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+