ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಗನ್ ಪಕ್ಷಕ್ಕೆ ಅದ್ಭುತ ಮುನ್ನಡೆ

|
Google Oneindia Kannada News

ಅಮರಾವತಿ (ಆಂಧ್ರಪ್ರದೇಶ), ಮೇ 23: ಆಂಧ್ರಪ್ರದೇಶ ವಿಧಾನಸಭೆಯ ಚುನಾವಣೆ ಫಲಿತಾಂಶದಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಅದ್ಭುತವಾದ ಮುನ್ನಡೆ ಸಾಧಿಸಿದೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಮುನ್ನಡೆಯ ಪ್ರಮಾಣವನ್ನು ಗಮನಿಸಿದರೆ ಹಾಗೂ ಹೀಗೇ ಮುಂದುವರಿದರೆ ವೈಎಸ್ ಆರ್ ಕಾಂಗ್ರೆಸ್ ಸುಲಭವಾದ ಜಯ ದಾಖಲಿಸಿದೆ.

ಚುನಾವಣೆ ಫಲಿತಾಂಶ 2019: ರಾಜ್ಯವಾರು ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಚುನಾವಣೆ ಫಲಿತಾಂಶ 2019: ರಾಜ್ಯವಾರು ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

175 ಸದಸ್ಯ ಬಲದ ಆಂಧ್ರ ವಿಧಾನಸಭೆಯಲ್ಲಿ ಈಗಾಗಲೇ 121 ಸ್ಥಾನಗಳಲ್ಲಿ ವೈಎಸ್ ಆರ್ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೆ, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ 29 ಸ್ಥಾನಗಳಲ್ಲಿ ಮುಂದಿದೆ. ಇತರರು 1 ಸ್ಥಾನದಲ್ಲಿ ಮುಂದಿದ್ದಾರೆ. ಕುಪ್ಪಂ ಜಿಲ್ಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಹಿನ್ನಡೆ ಆಗಿದೆ. ವೈಎಸ್ ಆರ್ ಕಾಂಗ್ರೆಸ್ ನ ಚಂದ್ರಮೌಳಿ ವಿರುದ್ಧ ಅವರು ಹಿನ್ನಡೆಯಲ್ಲಿದ್ದಾರೆ.

YSR Congress lead with huge margin in Andhra Pradesh assembly election

ಒಂಬತ್ತನೇ ಬಾರಿಗೆ ಚಂದ್ರಬಾಬು ನಾಯ್ಡು ಪುನರಾಯ್ಕೆ ಬಯಸಿದ್ದಾರೆ. ಇನ್ನು ಚಂದ್ರಬಾಬು ನಾಯ್ಡು ಅವರ ಮಗ ನಾರಾ ಲೋಕೇಶ್ ಮೊದಲ ಬಾರಿಗೆ ಸ್ಪರ್ಧೆ ಮಾಡುತ್ತಿದ್ದು, ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಮಂಗಳಗಿರಿ ಕ್ಷೇತ್ರದಿಂದ ಸ್ಪರ್ಧೆಯಲ್ಲಿ ಇದ್ದು, ಆರಂಭಿಕವಾಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

English summary
YSR Congress party in lead in Andhra Pradesh assembly election. CM Chandrababu Naidu trailing in Kuppam constituency. His son Nara Lokesh contesting first time in early lead.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X