ಪಂಜಾಬ್ ನಲ್ಲಿ ಅಕಾಲಿ ದಳ- ಬಿಜೆಪಿ ಸೀಟು ಹಂಚಿಕೆ ಫೈನಲ್
ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿರೋಮಣಿ ಅಕಾಲಿ ದಳ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಿದ್ದವೋ ಅಷ್ಟೇ ಸ್ಥಾನಗಳಲ್ಲಿ ಮಿತ್ರ್ ಪಕ್ಷವಾಗಿ ಪಂಜಾಬ್ ನಲ್ಲಿ ಸ್ಪರ್ಧೆ ಮಾಡುತ್ತವೆ ಎಂದು ಕೇಸರಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುರುವಾರ ಘೋಷಣೆ ಮಾಡಿದ್ದಾರೆ. ಪಂಜಾಬ್ ನಲ್ಲಿ ಶಿರೋಮಣಿ ಅಕಾಲಿ ದಳ ಹತ್ತು ಹಾಗೂ ಬಿಜೆಪಿ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಮುಂಬರುವ ಲೋಕಸಭೆ ಚುನಾವಣೆಯನ್ನು ಅಕಾದಳ- ಬಿಜೆಪಿ ಒಟ್ಟಾಗಿ ಸೆಣೆಸಲಿವೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅವರು ಎಷ್ಟು ಸ್ಥಾನಗಳಿಂದ ಸ್ಪರ್ಧಿಸಿದ್ದರೋ ಅಷ್ಟೇ ಸಂಖ್ಯೆಯನ್ನು ಪಡೆಯಲಿದ್ದಾರೆ. ಶಿರೋಮಣಿ ಅಕಾಲಿದಳ ಹತ್ತು ಹಾಗೂ ಬಿಜೆಪಿ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ ಬೀರ್ ಸಿಂಗ್ ಅವರ ಜತೆಗೆ ಚರ್ಚೆ ನಡೆಸಿದ ನಂತರ ಅಮಿತ್ ಶಾ ಈ ಘೋಷಣೆ ಮಾಡಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಅಕಾಲಿದಳ ಹದಿನೈದು ಸ್ಥಾನಗಳಲ್ಲಿ ಜಯ ಪಡೆದರೆ, ಬಿಜೆಪಿಯು ಮೂರು ಸ್ಥಾನಗಳಲ್ಲಿ ಜಯ ಗಳಿಸಿತ್ತು. ಎಪ್ಪತ್ತೇಳು ಸ್ಥಾನ ಪಡೆದ ಕಾಂಗ್ರೆಸ್ ನಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಆಗಿದ್ದಾರೆ.












Click it and Unblock the Notifications