ಪ್ರಿಯಾಂಕಾ ಅಧ್ಯಕ್ಷರಾಗುವುದಾದರೆ ಬೆಂಬಲವಿದೆ ಎಂದ ಅಮರೀಂದರ್

ಅಮೃತಸರ್, ಜುಲೈ 29: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಅಧ್ಯಕ್ಷರಾಗುವುದಾದರೆ ಅದಕ್ಕೆ ಪಕ್ಷದ ಎಲ್ಲರೂ ಬೆಂಬಲ ಸೂಚಿಸುತ್ತೇವೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರೀಂದರ್ ಸಿಂಗ್ ಹೇಳಿದರು.

ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಮರೀಂದರ್, "ಇದನ್ನು ಸ್ಥಾನ ತ್ಯಜಿಸುತ್ತಿರುವ ಅಧ್ಯಕ್ಷರು ನಿರ್ಧರಿಸಬೇಕು. ಪ್ರಿಯಾಂಕಾ ಗಾಂಧಿ ಅವರು ಅಧ್ಯಕ್ಷರಾಗುವುದಾದರೆ ಅದಕ್ಕೆ ನಮ್ಮೆಲ್ಲರ ಬೆಂಬಲವಿದೆ" ಎಂದರು.

ಉತ್ತರ ಪ್ರದೇಶ ಪೂರ್ವ ಭಾಗದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಅವರು, ತಾವು ಈ ಸ್ಥಾನದಲ್ಲೇ ಮುಂದುವರಿಯುವುದಾಗಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನನಗೆ ಪಕ್ಷಾಧ್ಯಕ್ಷಳಾಗುವ ಇಷ್ಟವಿಲ್ಲ ಎಂದು ಅವರು ಹೇಳಿದ್ದಾರೆ.

Amarinder Singh Supports Priyanka Gandhi For Congress President Post

ಆದರೆ ಗಾಂಧಿ ಕುಟುಂಬದ ಹೊರತಾಗಿ ಬೇರೊಬ್ಬರನ್ನು ಆ ಸ್ಥಾನದಲ್ಲಿ ಕೂರಿಸುವುದರಿಂದ ಪಕ್ಷಕ್ಕೇ ನಷ್ಟ ಎಂಬುದನ್ನು ಮನಗಂಡ ಕಾಂಗ್ರೆಸ್ ಮುಖಂಡರು ಪ್ರಿಯಾಂಕಾ ಗಾಂಧಿ ಅವರನ್ನು ಒತ್ತಾಯಿಸುತ್ತಿದ್ದಾರೆ. ಆದರೆ ತನ್ನ ತಂಗಿಯನ್ನು ಈ ವಿಚಾರದಿಂದ ದೂರವಿಡಿ ಎಂದು ತಾವು ಸ್ಥಾನದಿಂದ ಇಳಿಯುವಾಗಲೇ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದರು.. ಜೊತೆಗೆ ಅನಾರೋಗ್ಯದ ಕಾರಣ ಸೋನಿಯಾ ಗಾಂಧಿ ಅವರೂ ಈ ಹುದ್ದೆಗೆ ಒಲ್ಲೆ ಎಂದರು. ಆದ್ದರಿಂದ ಈ ಹುದ್ದೆಗೆ ಪ್ರಿಯಾಂಕಾ ಗಾಂಧಿ ಆವರೇ ಸೂಕ್ತ ಎಂಬುದ ಹಲವು ಕಾಂಗ್ರೆಸ್ ಮುಖಂಡರ ಅಭಿಪ್ರಾಯ.

ಒಟ್ಟಿನಲ್ಲಿ ಪಕ್ಷದ ವರಿಷ್ಟರು, ಕಾರ್ಯಕರ್ತರು, ಅಭಿಮಾನಿಗಳ ನಿರೀಕ್ಷೆಯಂತೆಯೇ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನ ಚುಕ್ಕಾಣಿ ಹಿಡಿಯಲಿದ್ದಾರೆಯೇ ಎಂಬುದನ್ನು ಕಾದು ನೀಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+