ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಲಿತಾಂಶ ಬಳಿಕ,ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ರಾಜೀನಾಮೆ

|
Google Oneindia Kannada News

ಚಂಡೀಗಢ, ಮೇ 27: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನೀಲ್ ಜಖಾರ್ ಅವರು ರಾಜೀನಾಮೆ ಸಾಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ 2019: ಗೆದ್ದವರು, ಸೋತವರುಲೋಕಸಭೆ ಚುನಾವಣೆ ಫಲಿತಾಂಶ 2019: ಗೆದ್ದವರು, ಸೋತವರು

ಗುರ್ ದಾಸ್ ಪುರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುನೀಲ್ ಅವರನ್ನು ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್ ಅವರು ಭಾರಿ ಅಂತರದಿಂದ ಸೋಲಿಸಿದ್ದರು. ತಮ್ಮ ಸೋಲು ಹಾಗೂ ಪಕ್ಷದ ಕಳಪೆ ಸಾಧನೆಯ ಹೊಣೆ ಹೊತ್ತುಕೊಂಡು ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಫಲಿತಾಂಶ ಬಳಿಕ, ಕಾಂಗ್ರೆಸ್ ಶಾಸಕರಿಂದ ಬಿಜೆಪಿಗೆ ವಲಸೆಫಲಿತಾಂಶ ಬಳಿಕ, ಕಾಂಗ್ರೆಸ್ ಶಾಸಕರಿಂದ ಬಿಜೆಪಿಗೆ ವಲಸೆ

ಇದಕ್ಕೂ ಮುನ್ನ ಉತ್ತರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜ್ ಬಬ್ಬರ್ ಅವರು ಕೂಡಾ ಪಕ್ಷದ ಕಳಪೆ ಪ್ರದರ್ಶನದ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. 542 ಸ್ಥಾನಗಳ ಪೈಕಿ ಕಾಂಗ್ರೆಸ್ 52 ಸ್ಥಾನ ಮಾತ್ರ ಪಡೆದಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜೀನಾಮೆ ಸಲ್ಲಿಸಲು ಮುಂದಾಗಿದ್ದರು ಎಂಬ ವರದಿಗಳಿವೆ.

Days after his defeat, Punjab Cong chief Sunil Jakhar resigns

ಆದರೆ, ರಾಹುಲ್ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ. ಮಿಕ್ಕಂತೆ ಕರ್ನಾಟಕದಲ್ಲಿ 28 ಸ್ಥಾನಗಳ ಪಕಿ 1 ಸ್ಥಾನವನ್ನು ಮಾತ್ರ ಕಾಂಗ್ರೆಸ್ ಗೆದ್ದುಕೊಂಡಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

English summary
Punjab Congress Chief Sunil Jakhar offers to resign from his post after he lost elections from Gurdaspur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X