ಗುರುದಾಸ್ ಪುರ್ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ; 17 ಮಂದಿ ಸಾವು
ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಬಟಾಲದಲ್ಲಿ ಬುಧವಾರ ಪಟಾಕಿ ಕಾರ್ಖಾನೆ ಸ್ಫೋಟವಾಗಿ ಹದಿನೇಳು ಮಂದಿ ಸಾವನ್ನಪ್ಪಿದ್ದಾರೆ. ಈ ಸ್ಪೋಟದಿಂದ ಕಟ್ಟಡವೇ ಕುಸಿದು ಬಿದ್ದಿದೆ. ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದವರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು (ಎಸ್ ಡಿಆರ್ ಎಫ್) ಪರಿಹಾರ ಕಾರ್ಯಾಚರಣೆಗೆ ನೇಮಿಸಲಾಗಿದೆ.
ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಟಾಲದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ, ಹಲವರ ಪ್ರಾಣ ಹಾನಿಯಾಗಿರುವುದು ತೀರಾ ದುಃಖ ಉಂಟು ಮಾಡಿದೆ. ಜಿಲ್ಲಾಧಿಕಾರಿ ಹಾಗೂ ಎಸ್ ಎಸ್ ಪಿ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಮರೀಂದರ್ ಸಿಂಗ್ ಅವರು ಟ್ವೀಟ್ ಮಾಡಿದ್ದಾರೆ.

ವಸತಿ ಪ್ರದೇಶದಲ್ಲಿ ಇರುವ ಪಟಾಕಿ ಕಾರ್ಖಾನೆಯಲ್ಲಿ ಸಂಜೆ ನಾಲ್ಕು ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು ಮಾಹಿತಿ ನೀಡಲಾಗಿದೆ.












Click it and Unblock the Notifications