• search
  • Live TV
ಅಮೃತಸರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking news: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ

|
Google Oneindia Kannada News

ಅಮೃತ್ ಸರ್, ಸೆಪ್ಟೆಂಬರ್ 28: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ೋತ್ ಸಿಂಗ್ ಸಿಧು ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಧು,ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಪಂಜಾಬ್ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಿಯಾಗಲು ಸಿದ್ಧನಿಲ್ಲ, ಅಧ್ಯಕ್ಷ ಸ್ಥಾನ ತೊರೆದರೂ ಪಕ್ಷದಲ್ಲಿದ್ದು ದುಡಿಯುವೆ ಎಂದು ನವಜ್ಯೋತ್ ಸಿಂಗ್ ಸಿಧು ಪತ್ರದಲ್ಲಿ ಹೇಳಿದ್ದಾರೆ.

ಪಂಜಾಬ್‌ ಮಾಜಿ ಸಿಎಂ ಅಮರೀಂದರ್‌ ಇಂದು ಶಾ, ನಡ್ಡಾರನ್ನು ಭೇಟಿ ಸಾಧ್ಯತೆ: ಬಿಜೆಪಿ ಸೇರ್ಪಡೆ?ಪಂಜಾಬ್‌ ಮಾಜಿ ಸಿಎಂ ಅಮರೀಂದರ್‌ ಇಂದು ಶಾ, ನಡ್ಡಾರನ್ನು ಭೇಟಿ ಸಾಧ್ಯತೆ: ಬಿಜೆಪಿ ಸೇರ್ಪಡೆ?

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ಹೆಸರು ಕೂಡಾ ಕೇಳಿ ಬಂದಿತ್ತು. ಆದರೆ, ಚರಣ್ಜಿತ್ ಸಿಂಗ್ ಚನ್ನಿ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದು, ಸಂಪುಟ ವಿಸ್ತರಣೆ ಮಾಡಿದ್ದಾರೆ.

ಸಿಧು ರಾಜೀನಾಮೆಗೆ ಏನು ಕಾರಣ?:
ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಿಧು ಪಿತೂರಿ ನಡೆಸಿದ್ದರು ಎಂಬ ಸುದ್ದಿ ಹಬ್ಬಿತ್ತು. ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಅಮರೀಂದರ್ ಅವರು ಸಿಧು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಸಿಎಂ ಸ್ಥಾನಕ್ಕೆ ಸಿಧು ಸೂಕ್ತರಲ್ಲ, ಪಾಕಿಸ್ತಾನಿಗಳ ಜೊತೆ ಮೈತ್ರಿ ಹೊಂದಿದ್ದಾರೆ, ಪಂಜಾಬ್ ರಾಜ್ಯಕ್ಕೆ ಸಿಧು ಸಿಎಂ ಆದರೆ ಅದು ದೊಡ್ಡ ಕಳಂಕ ಎಂದಿದ್ದರು.

ವೈಯಕ್ತಿಕ ನಿಂದನೆ, ತೇಜೋವಧೆಯನ್ನು ಸಹಿಸಲು ಸಾಧ್ಯವಿಲ್ಲ, ಪಂಜಾಬ್ ಅಭಿವೃದ್ಧಿ ಜೊತೆ ರಾಜಿಯಾಗುವುದಿಲ್ಲ ಎಂದು ಸಿಧು ಹೇಳಿದ್ದಾರೆ. ಆದರೆ, ಚರಣ್ ಜೀತ್ ಆಯ್ಕೆಯನ್ನು ಸಿಧು ಸ್ವಾಗತಿಸಿದ್ದರು.

ಮೂರು ಬಾರಿ ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿರುವ ಚರಣ್‌ಜೀತ್ ಅವರು ಪಂಜಾಬ್ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿಯ ಮಂತ್ರಿಯಾಗಿದ್ದಾರೆ. ಪಂಜಾಬ್ ವಿಧಾನಸಭೆಯಲ್ಲಿ 2015 ರಿಂದ 2016 ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು. ಚಾಮ್ಕೌರ್ ಸಾಹೀಬ್ ಕ್ಷೇತ್ರದ ಶಾಸಕರಾಗಿರುವ ಚರಣ್‌ಜೀತ್ ಅವರು ರಾಮ್ ದಾಸಿಯಾ ಸಿಖ್ ಸಮುದಾಯದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಚಮ್ಕೌರ್ ಸಾಹೀಬ್ ಕ್ಷೇತ್ರದ ಮಕ್ರೋನಾ ಕಲನ್ ಎಂಬ ಗ್ರಾಮದವರಾದ ಚರಣ್‌ಜೀತ್ ಅವರು ನಂತರ ಖರಾರ್ ಕಡೆಗೆ ವಲಸೆ ಬಂದರು. ಮುನ್ಸಿಪಲ್ ಕೌನ್ಸಿಲರ್ ಆಗಿ ಮೂರು ಬಾರಿ ಆಯ್ಕೆಯಾಗಿ ರಾಜಕೀಯದಲ್ಲಿ ಗುರುತಿಸಿಕೊಂಡರು.

ಪಂಜಾಬ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಐದು ತಿಂಗಳು ಬಾಕಿ ಇರುವಾಗಲೇ ನಾಯಕತ್ವದ ಪ್ರಶ್ನೆ ಎದುರಾಗಿದೆ.

2017ರ ಚುನಾವಣೆಯಲ್ಲಿ ಅಮರೀಂದರ್ ಸಿಂಗ್ ನೇತೃತ್ವ ವಹಿಸಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಮುಂದಿನ ಚುನಾವಣೆಯನ್ನು ನವಜ್ಯೋತ್ ಸಿಂಗ್ ಸಿಧು ಹಾಗೂ ಚರಣ್‌ಜೀತ್ ನೇತೃತ್ವದಲ್ಲಿ ಎದುರಿಸಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸುವ ಸಾಧ್ಯತೆಯಿತ್ತು. ಆದರೆ, ಸಿಧು ರಾಜ್ಯಾಧ್ಯಕ್ಷ ಸ್ಥಾನ ತೊರೆದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಎನ್ನಬಹುದು.


ಚರಣ್ ಜೀತ್ ಸಿಎಂ ಸ್ಥಾನಕ್ಕೇರಿರುವುದರ ಬಗ್ಗೆ ಬಿಜೆಪಿ ನಾಯಕರು ನೀಡಿದ್ದ ಹೇಳಿಕೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಖಂಡಿಸಿ, "ಮುಂದಿನ ಚುನಾವಣೆಯನ್ನು ನಾವು ಸಿಎಂ ಚರಣ್ ಜಿತ್ ಮತ್ತು ಪಿಪಿಸಿಸಿ ಅಧ್ಯಕ್ಷ ಸಿಧು ಜೊತೆಯಾಗಿ ಎದುರಿಸಲಿದ್ದೇವೆ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ" ಎಂದಿದ್ದರು.

ಇದರ ಬೆನ್ನಲ್ಲೇ, ಸಿಎಂ ಆಯ್ಕೆಯ ಸಂದರ್ಭದಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸೋಣ ಎಂದು ಉಸ್ತುವಾರಿ ಹರೀಶ್ ರಾವತ್ ಹೇಳಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿತ್ತು. ಈಗ ಸಿಧು ಓಲೈಕೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗುವುದೇ ಕಾದು ನೋಡಬೇಕಿದೆ.

''ನಾನು ಮೊದಲೇ ಹೇಳಿದ್ದೆ, ಭಾರತದ ಗಡಿ ಭಾಗದ ರಾಜ್ಯದಲ್ಲಿ ರಾಜಕೀಯ ಮಾಡಲು ಈ ವ್ಯಕ್ತಿ ಸೂಕ್ತನಲ್ಲ, ಸ್ಥಿತ ಮನಸ್ಸು ಆತನಿಗಿಲ್ಲ,'' ಎಂದು ಸಿಧು ಹೆಸರು ಉಲ್ಲೇಖಿಸದೇ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸಿಧು ರಾಜೀನಾಮೆ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಜೊತೆಗೆ ಕಾಂಗ್ರೆಸ್‌ನಲ್ಲಿ ವೈಮನ್ಸಸ್ಸು ಹೊಂದಿರುವ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಬಿಜೆಪಿಯನ್ನು ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

English summary
Navjot Singh Sidhu resigns as Punjab Congress president. Sidhu's move coincides with Amarinder Singh's visit to Delhi today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X