ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್‌ನಲ್ಲಿ 3 ಹೊಸ ಕೊರೊನಾ ಪ್ರಕರಣ ಪತ್ತೆ

|
Google Oneindia Kannada News

ಅಮೃತಸರ, ಮಾರ್ಚ್ 21: ಪಂಜಾಬ್‌ನಲ್ಲಿ 3 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 6ಕ್ಕೆ ಏರಿದೆ.

ಶುಕ್ರವಾರ 69 ವರ್ಷದ ವೃದ್ಧರಿಗೆ ಕೊರೊನಾ ತಗುಲಿದ್ದು ಈಗ ಅವರ ಸಹೋದರಿಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಂಜಾಬ್‌ನಲ್ಲಿ 69 ವರ್ಷದ ವೃದ್ಧರೊಬ್ಬರು ಎರಡು ದಿನಗಳ ಹಿಂದಷ್ಟೇ ಮೃತಪಟ್ಟಿದ್ದರು.

Breaking: ರಾಜ್ಯದಲ್ಲಿ ಹೊಸ ಕೊರೊನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆBreaking: ರಾಜ್ಯದಲ್ಲಿ ಹೊಸ ಕೊರೊನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ

ಪಂಜಾಬ್ ನಲ್ಲಿ ಸೋಂಕಿತರ ಸಂಖ್ಯೆ6ಕ್ಕೇರಿದೆ. ಗುರುವಾರ ಮೊದಲ ಸಾವು ಸಂಭವಿಸಿದೆ. ಪಂಜಾಬ್ನಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿ ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.

Three More Positive Cases Of Coronavirus In Punjab

ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡೀಗಢದಲ್ಲೂ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಕೆಲ ಗಂಟೆಗಳ ಹಿಂದಷ್ಟೇ ಪಂಜಾಬ್ ಸರ್ಕಾರ ನಿಷೇಧಿಸಿತ್ತು.

ಚಂಡೀಗಢದಲ್ಲಿ ಈಗಾಗಲೇ ಕೊರೊನಾ ಸೋಂಕು ತಗುಲಿರುವ 23 ವರ್ಷದ ವ್ಯಕ್ತಿಯಿಂದ ಪಂಜಾಬ್‌ನಲ್ಲಿರುವ ವ್ಯಕ್ತಿಗೆ ಕೊರೊನಾ ತಗುಲಿದೆ. ಹಾಗೆಯೇ ಹಾಗೂ ಇನ್ನೋರ್ವ ಯುಕೆಯಿಂದ ಬಂದಿದ್ದ 42 ವರ್ಷದ ವ್ಯಕ್ತಿಯಲ್ಲಿ ಕೊರೊನಾ ದೃಢಪಟ್ಟಿದೆ.

ಮನೆಯಲ್ಲೇ ಸ್ವನಿರ್ಬಂಧಕ್ಕೆ ಆದೇಶಿಸಲಾಗಿರುವ ಕೊರೋನಾ ಶಂಕಿತರ ಕೈ ಮೇಲೆ ಕ್ವಾರಂಟೈನ್ ಸ್ಟಾಂಪ್ ಹಾಕಲು ಸರ್ಕಾರ ಆದೇಶ ಹೊರಡಿಸಿದೆ. ಭಾರತದಲ್ಲಿ ಕೊರೊನಾಗೆ ಐದನೇ ಸಾವು ಆಗಿದ್ದು, ದೇಶದ ಜನತೆ ಆತಂಕದಲ್ಲಿದ್ದಾರೆ.

ರಾಜಸ್ಥಾನದ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇಟಲಿ ಪ್ರವಾಸಿಗ ಸಾವನ್ನಪ್ಪಿದ್ದಾನೆ. ಪ್ರವಾಸಿಗನ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ.

ಇಟಲಿ ಪ್ರವಾಸಿಗ ಸೇರಿದಂತೆ ಭಾರತದಲ್ಲಿ ಒಟ್ಟು ಐವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ, ದೆಹಲಿ, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಈ ಹೊತ್ತಿನಲ್ಲೇ ಪಂಜಾಬ್‌ನಲ್ಲಿ ಇನ್ನೂ ಮೂವರಿಗೆ ಹಾಗೂ ಕರ್ನಾಟಕದಲ್ಲೂ ಇನ್ನೂ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಅವರನ್ನು ತೀವ್ರ ನಿಗಾದಲ್ಲಿಡಲಾಗಿದೆ.

English summary
Three more people in Punjab have tested positive for the new coronavirus, taking the total in the state to six, an official said on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X