ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲಪ್ರಭಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಪ್ರವಾಹ ಭೀತಿ

By Lekhaka
|
Google Oneindia Kannada News

ಬಾಗಲಕೋಟೆ, ಆಗಸ್ಟ್ 23: ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ಪ್ರವಾಹದ ಭೀತಿ ಉಂಟಾಗಿದ್ದು, ಮಲಪ್ರಭಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆಯಾದ ಹಿನ್ನೆಲೆ ಹಲವು ನದಿಗಳ ಸೇತುವೆಗಳು ತುಂಬಿ ಹರಿಯುತ್ತಿವೆ.

ಹೆಚ್ಚುವರಿಯಾಗಿ 10 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಟ್ಟಿದ್ದರಿಂದ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಬಳಿಯ ಸೇತುವೆ ಪುನಃ ಜಲಾವೃತವಾಗಿದೆ.

ಉಕ್ಕಿಹರಿದ ಘಟಪ್ರಭೆ: ಮುಧೋಳ ತಾಲೂಕಿನ ಮಿರ್ಜಿ ಗ್ರಾಮ ಜಲಾವೃತಉಕ್ಕಿಹರಿದ ಘಟಪ್ರಭೆ: ಮುಧೋಳ ತಾಲೂಕಿನ ಮಿರ್ಜಿ ಗ್ರಾಮ ಜಲಾವೃತ

ಕಳೆದ ವಾರವಷ್ಟೇ ಭಾರೀ ಪ್ರವಾಹದಿಂದಾಗಿ ಮುಳುಗಡೆಯಾಗಿದ್ದ ಸೇತುವೆ ಎರಡು ದಿನಗಳ ಹಿಂದಷ್ಟೇ ಸಂಪರ್ಕಕ್ಕೆ ಮುಕ್ತವಾಗಿತ್ತು. ಇದೀಗ ಮತ್ತೆ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

Bagalkot: 10 Thousand Cusecs Of Water Released Into Malaprabha River

ಸೇತುವೆ ಮೇಲೆ ಎರಡು-ಮೂರು ಅಡಿಯಷ್ಟು ನೀರು ಹರಿಯುತ್ತಿದ್ದು, ಸೇತುವೆ ಅಕ್ಕಪಕ್ಕದ ಹೊಲಗಳ ಬೆಳೆಗಳು ಜಲಾವೃತವಾಗಿದೆ. ಇದರಿಂದಾಗಿ ಪುನಃ ಬಾದಾಮಿ ತಾಲೂಕಿನ ಮಲಪ್ರಭಾ ತೀರದಲ್ಲಿ ಪ್ರವಾಹ ಆತಂಕ ಎದುರಾಗಿದೆ.

ಬಾದಾಮಿಯಿಂದ ಗದಗ ಜಿಲ್ಲೆಯ ಮೆಣಸಗಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದವು. ಇದೀಗ ಸೇತುವೆ ಮುಳುಗಡೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.

English summary
Flooding in the Bagalkot district again, many bridges are overflowing with the release of 10 thousand cusecs of water to the Malaprabha River.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X