ಮುಧೋಳ: 10 ವರ್ಷದ ಮಗುವಿಗೆ ಪೂರ್ತಿ ಟಿಕೆಟ್ ಹಣ ಪಡೆದ KSRTC ಕಂಡಕ್ಟರ್-ಮುಂದಾಗಿದ್ದೇನು?
ಮುಧೋಳ, ಜನವರಿ, 11: ಸಾಮಾನ್ಯವಾಗಿ ಕೆಎಸ್‌ಅರ್‌ಟಿಸಿ ಬಸ್ ಸೇರಿದಂತೆ ಇನ್ನಿತರೆ ಬಸ್‌ಗಳಲ್ಲೂ ಸಹ 12 ವರ್ಷ ಮೆಲ್ಪಟ್ಟ ಮಕ್ಕಳಿಗೆ ಅಷ್ಟೇ ಫುಲ್ ಟಿಕೆಟ್ ಹಣ ಪಡೆಯಬಹುದು. ಆದರೆ ಇದೀಗ 12 ವರ್ಷದೊಳಗಿನ ಬಾಲಕನಿಗೆ ಪೂರ್ಣ ಟಿಕೆಟ್ ಪಡೆದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದ್ದು, ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿಯಾಗಿ ಶೇಕಡಾ 9ರಷ್ಟು ಬಡ್ಡಿಯೊಂದಿಗೆ ಎರಡು ತಿಂಗಳಲ್ಲಿ ಪಾವತಿ ಮಾಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಅನಂತಪುರ ಗ್ರಾಮದ ನಿವಾಸಿ ದೀಪಾ ಹಿರೇಮಠ ಅವರು ಪುತ್ರನೊಂದಿಗೆ ಕಳೆದ ವರ್ಷ ಜುಲೈ 1ರಂದು ಮುಧೋಳದಿಂದ ವಿಜಯಪುರಕ್ಕೆ ಹೊರಟಿದ್ದರು. ಪುತ್ರನಿಗೆ 10 ವರ್ಷ 11 ತಿಂಗಳು ಆಗಿದ್ದು, ಅರ್ಧ ಟಿಕೆಟ್ ನೀಡಿ ಎಂದು ದೀಪಾ ಎನ್ನುವವರು ಕಂಡಕ್ಟರ್‌ಗೆ ಕೇಳಿದರು. ಆದರೆ 12 ವರ್ಷ ಮೇಲ್ಪಟ್ಟಿದ್ದಾನೆ, ಪೂರ್ಣ ಟಿಕೆಟ್ ಪಡೆಯಬೇಕು ಎಂದು ಕಂಡಕ್ಟರ್ ಕೇಳಿದ್ದರು.

ಈ ವೇಳೆ ಜನ್ಮ ದಾಖಲೆಯ ಆಧಾರ್ ಕಾರ್ಡ್ ತೋರಿಸಿದರೂ ಒಪ್ಪದ ಅವರು, ಬಸ್‌ನಿಂದ ಕೆಳಗೆ ಇಳಿಯಿರಿ ಎಂದರು. ಆಗ ಅವರು ಯಾವುದೇ ದಾರಿಯಿಲ್ಲದೆ ಪೂರ್ಣ ಟಿಕೆಟ್ ಪಡೆದೇ ಪ್ರಯಾಣ ಮಾಡಿದರು. ಬಳಿಕ ಈ ವಿಚಾರವನ್ನು ಡಿಪೋ ವ್ಯವಸ್ಥಾಪಕರ ಗಮನಕ್ಕೆ ತಂದು, ಕಂಡಕ್ಟರ್ ವಿರುದ್ಧ ಕ್ರಮ ಕೈಗೊಂಡು, ಟಿಕೆಟ್ ಹಣ ವಾಪಸ್ ಕೊಡಬೇಕೆಂದು ಕೋರಿದರು. ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲ. ವಕೀಲರಿಂದ ನೋಟಿಸ್ ಕಳುಹಿಸಿದರೂ ಸ್ಪಂದಿಸದ ಹಿನ್ನೆಲೆ ಆಯೋಗಕ್ಕೆ ದೂರು ಸಲ್ಲಿಸಿದರು.
ಕೆಎಸ್‌ಆರ್‌ಟಿಸಿ ನಿಯಾಮಾವಳಿ ಉಲ್ಲಂಘಿಸಿ ಪೂರ್ಣ ಟಿಕೆಟ್ ಕೊಟ್ಟು ಸೇವಾ ನ್ಯೂನ್ಯತೆ ಮತ್ತು ಅನುಚಿತ ವ್ಯಾಪಾರ ಮಾಡಿದ್ದು ಸಾಬೀತಾಗಿದೆ. ದೂರುದಾರರಿಂದ ಹೆಚ್ಚುವರಿಯಾಗಿ ಪಡೆದ 50 ರೂಪಾಯಿ ಅನ್ನು ಬಡ್ಡಿ ಸಮೇತ ನೀಡಬೇಕು. ಜೊತೆಗೆ ಮಾನಸಿಕ ಹಿಂಸೆ ಅನುಭವಿಸಿರುವುದರಿಂದ ವಿಶೇಷ ಪರಿಹಾರವಾಗಿ 2 ಸಾವಿರ ರೂಪಾಯಿ, ಪ್ರಕರಣದ ವೆಚ್ಚಕ್ಕಾಗಿ 1 ಸಾವಿರ ರೂಪಾಯಿ ನೀಡಬೇಕು ಎಂದು ಆಯೋಗದ ಅಧ್ಯಕ್ಷ ಡಿ.ವೈ.ಬಸಾಪುರ, ಸದಸ್ಯರಾದ ಸಿ.ಎಚ್.ಸಮಿಉನ್ನಿಸಾ ಅಬ್ರಾರ್, ಕಮಲಕಿಶೋರ್ ಅವರನ್ನೊಳಗೊಂಡ ಪೀಠ ಆದೇಶಿಸಿದೆ ಎಂದು ಪ್ರಜಾವಾಣಿಯಲ್ಲಿ ವರದಿಯಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications