ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲಕೋಟೆ : ಮುಧೋಳದಲ್ಲಿ ಬಾಯ್ಲರ್ ಸ್ಫೋಟ, 6 ಸಾವು

|
Google Oneindia Kannada News

ಬಾಗಲಕೋಟೆ, ಡಿಸೆಂಬರ್ 16 : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. 6 ಕಾರ್ಮಿಕರು ದುರ್ಘಟನೆಯಲ್ಲಿ ಮೃತಪಟ್ಟಿದ್ದು, 5ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನದ ವೇಳೆಗೆ ಡಿಸ್ಟಿಲರಿ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದೆ. ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ.

ಐಐಎಸ್‌ಸಿ ಸ್ಫೋಟ : ಲ್ಯಾಬ್ ಸುರಕ್ಷತೆಗೆ ಏನೇನು ಕ್ರಮ?ಐಐಎಸ್‌ಸಿ ಸ್ಫೋಟ : ಲ್ಯಾಬ್ ಸುರಕ್ಷತೆಗೆ ಏನೇನು ಕ್ರಮ?

ಈ ಡಿಸ್ಟಿಲರಿ ಘಟಕದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಕಾರ್ಖನೆ ಮಾಜಿ ಸಚಿವ, ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಅವರಿಗೆ ಸೇರಿದ್ದಾಗಿದೆ. ಇದುವರೆಗೂ 6 ಕಾರ್ಮಿಕರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಂದೆ ಎದುರೇ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ: ಕಾರಣ ನಿಗೂಢತಂದೆ ಎದುರೇ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ: ಕಾರಣ ನಿಗೂಢ

Boiler Blast in Bagalkot

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘಟನೆ ಬಗ್ಗೆ ದಿಗ್ಘ್ರಮೆ ವ್ಯಕ್ತಪಡಿಸಿದ್ದಾರೆ. ಕೂಡಲೇ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಸಂಪುಟ ವಿಸ್ತರಣೆ : ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನವಿಲ್ಲ?ಸಂಪುಟ ವಿಸ್ತರಣೆ : ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನವಿಲ್ಲ?

ದುರಂತದಲ್ಲಿ ಮೃತಪಟ್ಟವರ ವಿವರಗಳು ಇನ್ನೂ ಲಭ್ಯವಾಗಿಲ್ಲ. ಮುಧೋಳ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಅಗತ್ಯ ನೆರವು ನೀಡಲು ಸೂಚನೆ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ಸಕ್ಕರೆ ಕಾರ್ಖಾನೆಯಲ್ಲಿನ ಸಂಸ್ಕರಣಾ ಘಟಕದಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 6 ಜನ ಮೃತ ಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಾಗಲಕೋಟೆ, ವಿಜಾಪುರ, ಹುಬ್ಬಳ್ಳಿ ಜಿಲ್ಲೆಗಳಿಂದ ಆಂಬ್ಯುಲೆನ್ಸ್ ಗಳನ್ನು ಕಳುಹಿಸಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ರವಾನಿಸುವಂತೆ ಹಾಗೂ ಘಟನೆಯ ಪೂರ್ಣ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಪರಿಹಾರ ಒದಗಿಸಲು ಸಹ ಅವರು ಸೂಚನೆ ನೀಡಿದ್ದಾರೆ.

English summary
6 laborers were killed and more than 5 were injured after boiler blast in Mudhol taluk of Bagalkot district of Karnataka. Mudhol police reached the place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X