ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲಕೋಟೆಗೆ ಅಮಿತ್ ಶಾ ಭೇಟಿ, ಹಲವು ಯೋಜನೆಗಳಿಗೆ ಚಾಲನೆ

|
Google Oneindia Kannada News

ಬಾಗಲಕೋಟೆ, ಜನವರಿ 17: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಾಗಲಕೋಟೆಗೆ ಭೇಟಿ ನೀಡಿದರು.

ಎಂ.ಅರ್.ಎನ್ (ನಿರಾಣಿ) ಸಮೂಹ ಸಂಸ್ಥೆಗಳ ನೂತನ ಕಾರ್ಖಾನೆಗಳ ಉದ್ಘಾಟನೆ, 75 ಸಾವಿರ ಟಿಸಿಡಿ ಕಬ್ಬು ನುರಿಸುವ 260 ಮೆ.ವ್ಯಾಟ್ ಸಹ ವಿದ್ಯುತ್, 26 ಲಕ್ಷ ಲೀ ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ & CO2 ಉತ್ಪಾದನೆಗಳ ವಿಸ್ತರಣೆ ಯೋಜನೆಗಳ ಭೂಮಿ ಪೂಜೆ ಹಾಗೂ ಅಡಿಗಲ್ಲು ನೆರವೇರಿಸಿದರು.

ಕೇಂದ್ರದಿಂದ ರೈತರ ಆದಾಯವನ್ನು ಹೆಚ್ಚಿಸುವ ಕೆಲಸವಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಹಣ ನೀಡಲಾಗುತ್ತಿದ್ದು, ಫಸಲ್ ಬಿಮಾ ಯೋಜನೆ ಜಾರಿ ಮಾಡಿದ್ದೇವೆ. ಸರ್ಕಾರ ರೈತರಿಗಾಗಿ ಅನೇಕ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.

Amit Shah Inaugurates Sugar Factory Owned By BJP Leader Murugesh Nirani

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ನೂತನ ಸಚಿವರಾದ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಆರ್. ಶಂಕರ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್, ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಸಂಸದ ಸಂಜಯ್ ಪಾಟೀಲ್ ಹಾಜರಿದ್ದರು.

English summary
Amit Shah has inaugurated sugar factory owned by BJP leader Murugesh Nirani who was recently inducted to the cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X