ಕಾಂಗ್ರೆಸ್-ಬಿಜೆಪಿಗೆ ಸ್ಟೆಪ್ನಿಯಂತಾಗಿದೆ ಬಾದಾಮಿ ಕ್ಷೇತ್ರ- ಹೊರಟ್ಟಿ

ಬಾದಾಮಿ (ಬಾಗಲಕೋಟೆ ಜಿಲ್ಲೆ), ಏಪ್ರಿಲ್ 21: "ಬಾದಾಮಿ ವಿಧಾನಸಭೆ ಮತ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಬಿಜೆಪಿಯಿಂದ ಶ್ರೀರಾಮುಲು ಸ್ಪರ್ಧೆ ಮಾಡುತ್ತಿದ್ದಾರೆಂದರೆ ಕೈ-ಕಮಲ ಪಕ್ಷಕ್ಕೆ ಬಾದಾಮಿ ಸ್ಟೆಪ್ನಿ ಆಗಿದೆ" ಎಂದು ವಿಧಾನ ಪರಿಷತ್ ಸದಸ್ಯ- ಜೆಡಿಎಸ್ ನ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಬಾದಾಮಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿಯಿಂದ ಶ್ರೀರಾಮುಲು ಸ್ಪರ್ಧೆ ಮಾಡುತ್ತಾರೆ ಎಂದು ಗೊತ್ತಾಗಿದೆ. ಕಾಂಗ್ರೆಸ್-ಬಿಜೆಪಿಯು ಬಾದಾಮಿ ಕ್ಷೇತ್ರವನ್ನು ಸ್ಟೆಪ್ನಿ ತರಹ ಬಳಸಿಕೊಳ್ಳುತ್ತಿದೆ. ಇಲ್ಲಿ ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಜನರ ಸಮಸ್ಯೆ ಹಾಗೂ ಅಭಿವೃದ್ಧಿ ಕೆಲಸ ಆಗಲು ಸಹಕಾರವಾಗಲಿದೆ ಎಂದರು.

Badami constituency like Stepney for BJP, Congress, said Basavaraja Horatti

ಈ ಹಿನ್ನೆಲೆಯಲ್ಲಿ ಸ್ಥಳೀಯರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋಲಿನ ಭಯ ಇದೆ ಅನ್ನೋದು ಗೊತ್ತಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿಯೂ ಗೆಲ್ಲೋದಿಲ್ಲ, ಇಲ್ಲಿಯೂ ಗೆಲ್ಲೋದಿಲ್ಲ. ಅಭಿವೃದ್ಧಿ ಕಾರಣಕ್ಕೆ ಉತ್ತರ ಕರ್ನಾಟಕದಲ್ಲಿ ನಿಲ್ಲುವುದಾದರೆ, ಈಗ ಅಭಿವೃದ್ಧಿ ನೆನಪಾಗಿದೆ. ಈಗಲಾದರೂ ಈ ಭಾಗದ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕು ಎಂದರು.

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ. ಜೆಡಿಎಸ್ ಧರ್ಮದಲ್ಲಿ ರಾಜಕಾರಣ ಮಾಡುವುದಿಲ್ಲ. ಸ್ವಾಮೀಜಿಗಳು ಚುನಾವಣೆಯಲ್ಲಿ ರಾಜಕಾರಣ ಮಾಡೋದು ಬಿಟ್ಟು ಮಠದಲ್ಲಿರಬೇಕು ಎಂದು ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+