ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲಕೋಟೆ ಯುವಕನಿಗೆ ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಉತ್ತರ

|
Google Oneindia Kannada News

Recommended Video

ಬಾಗಲಕೋಟೆ ಯುವಕನಿಗೆ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಉತ್ತರ | Oneindia Kannada

ಬಾಗಲಕೋಟೆ, ಜೂನ್ 16 : ಟ್ವಿಟರ್‌ನಲ್ಲಿ ತಮ್ಮ ಕಾಲೆಳೆದಿದ್ದ ಬಾಗಲಕೋಟೆ ಯುವಕನಿಗೆ ಬಾದಾಮಿ ಶಾಸಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಉತ್ತರ ಕೊಟ್ಟಿದ್ದಾರೆ. 'ಶಾಸಕನಾದ ಬಳಿಕ ಕ್ಷೇತ್ರಕ್ಕೆ 50ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದೇನೆ' ಎಂದರು.

ಶನಿವಾರ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ನಾನು ಬಾದಾಮಿಯ ಶಾಸಕನಾಗಿ ಆಯ್ಕೆಯಾದ ನಂತರದಲ್ಲಿ ಕಳೆದ ಒಂದು ವರ್ಷದಿಂದ ಸುಮಾರು 50ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಕುಂದು ಕೊರತೆಗಳನ್ನು ಆಲಿಸಿದ್ದೇನೆ' ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ 65 ಕೋಟಿ ಕೊಟ್ಟ ಸರ್ಕಾರ!ಸಿದ್ದರಾಮಯ್ಯ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ 65 ಕೋಟಿ ಕೊಟ್ಟ ಸರ್ಕಾರ!

ಬಾಗಲಕೋಟೆ ಯುವಕನೊಬ್ಬ ಟ್ವೀಟ್ ಮಾಡಿ, 'ಬಾದಾಮಿ ಶಾಸಕರಾಗಿ ಒಂದು ವರ್ಷ ಕಳೆದರೂ, ಒಂದೇ ಒಂದು ಜಿಲ್ಲಾ ಕೆಡಿಪಿ ಸಭೆಗೆ ಬಂದಿಲ್ಲ. ಜಿಲ್ಲೆಯಲ್ಲಿ ವಿಪಕ್ಷ ನಾಯಕರು, ಆಡಳಿತ ಪಕ್ಷದ ಸಚಿವರು ಹಾಗೂ ಕೇಂದ್ರದ ಬರ ಅಧ್ಯಯನ ತಂಡ ಬಂದರೂ ಒಮ್ಮೆಯೂ ಶಾಸಕರಾಗಿ ಸಿದ್ದರಾಮಯ್ಯ ಉಪಸ್ಥಿತಿ ಇಲ್ಲ. ಈಗಲಾದರೂ ಕ್ಷೇತ್ರಕ್ಕೆ ಬನ್ನಿ' ಎಂದು ಆಹ್ವಾನಿಸಿದ್ದ.

ಬಾದಾಮಿ, ಐಹೊಳೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸೂಚನೆಬಾದಾಮಿ, ಐಹೊಳೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸೂಚನೆ

ತಮ್ಮ ಸರಣಿ ಟ್ವೀಟ್‌ನಲ್ಲಿ ಇದಕ್ಕೆ ಉತ್ತರ ನೀಡಿರುವ ಸಿದ್ದರಾಮಯ್ಯ, 'ಕ್ಷೇತ್ರದ ಜನರ ಜತೆಗಿನ ಸಂಪರ್ಕವನ್ನು ನಿರಂತರವಾಗಿ ಕಾಯ್ದುಕೊಳ್ಳಲು ಬಾದಾಮಿ ಪಟ್ಟಣದಲ್ಲಿ ಗೃಹ ಕಚೇರಿಯನ್ನು ಸಹ ಆರಂಭಿಸಿದ್ದೇನೆ' ಎಂದು ಉತ್ತರ ಕೊಟ್ಟಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೂರು ಮಹತ್ವದ ಬದಲಾವಣೆ!ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೂರು ಮಹತ್ವದ ಬದಲಾವಣೆ!

ಸಿದ್ದರಾಮಯ್ಯ ಟ್ವೀಟ್

ಸಿದ್ದರಾಮಯ್ಯ ಟ್ವೀಟ್

ಟ್ವೀಟರ್ ಮೂಲಕ ಯುವಕನಿಗೆ ಉತ್ತರ ಕೊಟ್ಟಿರುವ ಸಿದ್ದರಾಮಯ್ಯ ಅವರು, 'ಸಾಧನೆಯ ಬಗ್ಗೆ ತುತ್ತೂರಿ ಊದುವುದು ನನ್ನ ಜಾಯಮಾನ ಅಲ್ಲ. ಶಾಸಕನಾಗಿ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ. ಇದು ಕ್ಷೇತ್ರದ ಮತದಾರರಿಗೆ ತಿಳಿದಿದೆ. ಈ ಬಗ್ಗೆ ರಾಜಕೀಯ ವಾಗ್ವಾದದಲ್ಲಿ‌ ಮಾಡುವುರಲ್ಲಿ ನನಗೆ ಆಸಕ್ತಿ ಇಲ್ಲ' ಎಂದು ಹೇಳಿದ್ದಾರೆ.

50ಕ್ಕೂ ಹೆಚ್ಚು ಬಾರಿ ಭೇಟಿ ಕೊಟ್ಟಿದ್ದೇನೆ

50ಕ್ಕೂ ಹೆಚ್ಚು ಬಾರಿ ಭೇಟಿ ಕೊಟ್ಟಿದ್ದೇನೆ

'ನಾನು ಬಾದಾಮಿಯ ಶಾಸಕನಾಗಿ ಆಯ್ಕೆಯಾದ ನಂತರದಲ್ಲಿ ಕಳೆದ ಒಂದು ವರ್ಷದಿಂದ ಸುಮಾರು 50ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಕುಂದು ಕೊರತೆಗಳನ್ನು ಆಲಿಸಿದ್ದೇನೆ. ಕ್ಷೇತ್ರದ ಜನರ ಜತೆಗಿನ ಸಂಪರ್ಕವನ್ನು ನಿರಂತರವಾಗಿ ಕಾಯ್ದುಕೊಳ್ಳಲು ಬಾದಾಮಿ ಪಟ್ಟಣದಲ್ಲಿ ಗೃಹ ಕಚೇರಿಯನ್ನು ಸಹ ಆರಂಭಿಸಿದ್ದೇನೆ' ಎಂದು ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ.

ಅಭಿವೃದ್ಧಿ ಕೆಲಸಗಳ ಪಟ್ಟಿ

ಅಭಿವೃದ್ಧಿ ಕೆಲಸಗಳ ಪಟ್ಟಿ

ಸಿದ್ದರಾಮಯ್ಯ ಅವರು ಒಂದು ವರ್ಷದಲ್ಲಿ ಏನು ಕೆಲಸ ಮಾಡಿದ್ದೇನೆ?' ಎಂದು ಉತ್ತರ ಕೊಟ್ಟಿದ್ದಾರೆ. 'ನೀರಾವರಿ, ರಸ್ತೆ, ಪ್ರವಾಸೋದ್ಯಮ, ಮೂಲ ಸೌಲಭ್ಯ ಅಭಿವೃದ್ಧಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಒಂದೇ ವರ್ಷದ ಅವಧಿಯಲ್ಲಿ ರೂ.1,300 ಕೋಟಿಗೂ ಅಧಿಕ ಮೊತ್ತದ ಕಾಮಗಾರಿ ನಡೆಯುತ್ತಿದೆ' ಎಂದು ಹೇಳಿದ್ದಾರೆ.

ಬನಶಂಕರಿ ಬಾದಾಮಿ ಹೊಂಡ ತುಂಬಿಸಲು ಕ್ರಮ

ಬನಶಂಕರಿ ಬಾದಾಮಿ ಹೊಂಡ ತುಂಬಿಸಲು ಕ್ರಮ

ಉತ್ತರ ಕರ್ನಾಟಕದ ಆರಾಧ್ಯ ದೇವತೆ ಶ್ರೀ ಬನಶಂಕರಿ ದೇವಿಯ ಜಾತ್ರೆ ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ನಡೆಯುತ್ತದೆ. ಮಲಪ್ರಭಾ ನದಿಯಿಂದ ಬನಶಂಕರಿ ಹೊಂಡದ ತನಕ ಪೈಪ್ ಲೈನ್ ಅಳವಡಿಸಿ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

English summary
Former CM and Badami Congress MLA Siddaramaiah reply to Bagalkot youth. I have visited 50 times to Badami Siddaramaiah tweeted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X