Karnataka Elections: ಸಿದ್ದರಾಮಯ್ಯ ಗೆದ್ದಿದ್ದ ಬಾದಾಮಿಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ- ಇನ್‌ಸೈಡ್ ಸ್ಟೋರಿ
ಬಾದಾಮಿ, ಏಪ್ರಿಲ್ 28: ವಿಶ್ವವಿಖ್ಯಾತ ಬಾದಾಮಿ ಕ್ಷೇತ್ರವು ಕಳೆದ ಬಾರಿಯ ಕರ್ನಾಟಕ ವಿಧಾನಸಭೆ ಚುಣಾವಣೆಯಲ್ಲಿ ರಾಜ್ಯ ಅತ್ಯಂತ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು. ಬಿಜೆಪಿ ನಾಯಕ, ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದರು. ಇದೇ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವುದು ಕಂಡುಬಂದಿದೆ.
ಚಾಲುಕ್ಯರ ನಾಡಾದ ಬಾದಾಮಿಯಲ್ಲಿಯು ಬಾಗಲಕೋಟೆ ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿದೆ. ಇದು ಕ್ಷೇತ್ರವು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಕ್ಷೇತ್ರದಲ್ಲಿ ಸಾಮಾನ್ಯ ಮತದಾರರು, ಅನಿವಾಸಿ ಭಾರತೀಯರು ಮತ್ತು ಸೇವಾ ಮತದಾರರು ಸೇರಿ ಒಟ್ಟು 2,14,834 ಮತದಾರರಿದ್ದಾರೆ. ಸಾಮಾನ್ಯ ಮತದಾರರಲ್ಲಿ 1,08,524 ಪುರುಷರು, 1,06,294 ಮಹಿಳೆಯರು ಮತ್ತು 16 ಇತರರು ಇದ್ದಾರೆ. ಕ್ಷೇತ್ರದಲ್ಲಿ ಮತದಾರರ ಲಿಂಗ ಅನುಪಾತ 97.95 ರಷ್ಟಿದ್ದು, ಅಂದಾಜು ಸಾಕ್ಷರತೆ ಪ್ರಮಾಣ ಶೇ 69 ರಷ್ಟಿದೆ.

2018 ರಲ್ಲಿ ಸಿದ್ದರಾಮಯ್ಯ ಗೆಲುವು
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 67,599 ಮತಗಳನ್ನು ತೆಗೆದುಕೊಂಡಿದ್ದರೆ. ಇವರ ವಿರುದ್ಧ ಕಣಕ್ಕಿಳಿದಿದ್ದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀರಾಮುಲು 65,903 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಹಣಮಂತ ಮಾವಿನಮರದ್ ಕೇವಲ 24484 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.
2013 ರ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ 15,113 ಮತಗಳ (10.87%) ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿಬಿ ಚಿಮ್ಮನಕಟ್ಟಿ ಅವರು ಬಾದಾಮಿ ಕ್ಷೇತ್ರದಲ್ಲಿ ಜಯಗಳಿಸಿದರು. ಒಟ್ಟು ಚಲಾವಣೆಯಾದ ಮತಗಳಲ್ಲಿ ಕಾಂಗ್ರೆಸ್ ಶೇ 41.31 ಮತಗಳನ್ನು ತನ್ನದಾಗಿಸಿಕೊಂಡಿತ್ತು. 2013 ರಲ್ಲಿ ಈ ಕ್ಷೇತ್ರದಲ್ಲಿ ಶೇ 70.71 ರಷ್ಟು ಮತದಾನವಾಗಿತ್ತು.
ಈ ಬಾರಿ ಪ್ರಮುಖ ಅಭ್ಯರ್ಥಿಗಳು
ಬಿಜೆಪಿ ಶಾಂತಗೌಡ ಪಾಟೀಲ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಭೀಮಸೇನ್ ಚಿಮ್ಮಣ್ಣಕಟ್ಟಿ ಅವರಿಗೆ ಟಿಕೆಟ್ ನೀಡಿದೆ. ಹನುಮಂತಪ್ಪ ಮಾವಿನಮರದ ಅವರು ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ. ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಿದೆ. ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ್ ಚಿಮ್ಮನಕಟ್ಟಿ ಅವರು ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿ ಅವರ ಪುತ್ರರಾಗಿದ್ದಾರೆ. ಈ ಇಬ್ಬರಿಗೂ ಪೈಪೋಟಿ ನೀಡಲಿರುವ ಹನುಮಂತಪ್ಪ ಮಾವಿನಮರದ ಅವರು ಕಳೆದ ಬಾರಿಯೂ ಜೆಡಿಎಸ್‌ನಿಂದಲೇ ಕಣಕ್ಕಿಳಿದಿದ್ದರು.
ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಿರುವುದರಿಂದ ಬಂಡಾಯವನ್ನು ಎದುರಿಸುತ್ತಿದೆ. ಬಿಜೆಪಿ ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಸಿದ್ದ ಮಾಜಿ ಶಾಸಕ ಎಂಎಂ ಪಟ್ಟಣಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಇದು ಅಸಾಮಾಧಾನಕ್ಕೆ ಕಾರಣವಾಗಿದೆ.
ಜೆಡಿಎಸ್‌ನಿಂದ ಸ್ಪರ್ಧಿಸಿರುವ ಹನುಮಂತಪ್ಪ ಮಾವಿನಮರದ ಅವರು ಕಳೆದ ಬಾರಿ ಸೋತರೂ ಸಹಿತ ಐದು ವರ್ಷಗಳ ಕಾಲ ಕ್ಷೇತ್ರದ ಜನತೆಯೊಂದಿಗೆ ಒಡನಾಟ ಇಟ್ಟುಕೊಂಡಿದ್ದಾರೆ. ಹಳ್ಳಿಗಳಿಗೆ ಹೋಗಿ ತಲುಪುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ, ಮತದಾರರು ಅವರನ್ನು ಪ್ರಬಲ ಅಭ್ಯರ್ಥಿ ಎಂದು ನಂಬಿದ್ದಾರೆ.
ಬಿಬಿ ಚಿಮ್ಮನಕಟ್ಟಿ ಅವರ ಮಗ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಸಮುದಾಯದ ಬೆಂಬಲವಿದೆ. ಬಾದಾಮಿ ಕ್ಷೇತ್ರದಲ್ಲಿ ಕುರುಬ ಸಮುದಾಯದ ವೋಟುಗಳು ಅಧಿಕವಾಗಿದೆ. ಮೇಲಾಗಿ, ಅವರ ತಂದೆ ಮಾಜಿ ಸಚಿವರಾಗಿ ಹೆಸರು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಭೀಮಸೇನ ಚಿಮ್ಮನಕಟ್ಟಿ ಪ್ರಬಲ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.
ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬರಲಿದೆ. ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದ್ದರೆ, ಕೇಸರಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಯತ್ನಿಸುತ್ತಿವೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications