ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಮಖಂಡಿ ಉಪ ಚುನಾವಣೆ : ಬಿಜೆಪಿ, ಕಾಂಗ್ರೆಸ್‌ನಿಂದ ಅನುಕಂಪದ ಅಸ್ತ್ರ!

|
Google Oneindia Kannada News

Recommended Video

Jamakhandi By-elections 2018 : ಜಮಖಂಡಿಯಲ್ಲಿ ಗೆಲ್ಲಲು ಬಿಜೆಪಿ ಕಾಂಗ್ರೆಸ್ ನಿಂದ ಅನುಕಂಪದ ಅಸ್ತ್ರ

ಜಮಖಂಡಿ, ಅಕ್ಟೋಬರ್ 28 : ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಅನುಕಂಪದ ಅಲೆಯಲ್ಲಿ ಗೆಲುವು ಸಾಧಿಸುವ ತಂತ್ರ ರೂಪಿಸಿವೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.

ಜಮಖಂಡಿ ಕ್ಷೇತ್ರಕ್ಕೆ ಇದು 2ನೇ ಉಪ ಚುನಾವಣೆಯಾಗಿದೆ. ಕಾಂಗ್ರೆಸ್‌ನ ಆನಂದ್ ನ್ಯಾಮಗೌಡ, ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಸೇರಿ 7 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ, ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.

ಜಮಖಂಡಿಗೆ ಕೆ.ಸಿ.ವೇಣುಗೋಪಾಲ್ ದಿಢೀರ್ ಭೇಟಿ, ವೀಕ್ಷಕರಿಗೆ ಎಚ್ಚರಿಕೆಜಮಖಂಡಿಗೆ ಕೆ.ಸಿ.ವೇಣುಗೋಪಾಲ್ ದಿಢೀರ್ ಭೇಟಿ, ವೀಕ್ಷಕರಿಗೆ ಎಚ್ಚರಿಕೆ

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿದ್ದು ನ್ಯಾಮಗೌಡ ಅವರು 49,245 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ, ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟಿದ್ದು, ಉಪ ಚುನಾವಣೆ ಎದುರಾಗಿದೆ.

ಜಮಖಂಡಿ ಚುನಾವಣಾ ಚಿತ್ರಣ ಅಂತಿಮ, ಪ್ರಚಾರಕ್ಕೆ ಘಟಾನುಘಟಿ ನಾಯಕರುಜಮಖಂಡಿ ಚುನಾವಣಾ ಚಿತ್ರಣ ಅಂತಿಮ, ಪ್ರಚಾರಕ್ಕೆ ಘಟಾನುಘಟಿ ನಾಯಕರು

ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅನುಕಂಪದ ಅಲೆಯಲ್ಲಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದೆ. ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಅವರು ಸತತ 2 ಚುನಾವಣೆಯಲ್ಲಿ ಸೋತಿದ್ದು, ಆ ಅನುಕಂಪದ ಆಧಾರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದಾರೆ.....

ಜಮಖಂಡಿ ಕ್ಷೇತ್ರದ ಕೈ ಅಭ್ಯರ್ಥಿ ಆಸ್ತಿ, ಆದಾಯ, ಶಿಕ್ಷಣ, ಪ್ರಕರಣಗಳ ಮಾಹಿತಿಜಮಖಂಡಿ ಕ್ಷೇತ್ರದ ಕೈ ಅಭ್ಯರ್ಥಿ ಆಸ್ತಿ, ಆದಾಯ, ಶಿಕ್ಷಣ, ಪ್ರಕರಣಗಳ ಮಾಹಿತಿ

ಅನುಕಂಪದ ಅಸ್ತ್ರ

ಅನುಕಂಪದ ಅಸ್ತ್ರ

ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿರುವ ಕಾಂಗ್ರೆಸ್ ಅನುಕಂಪದ ಅಸ್ತ್ರ ಪ್ರಯೋಗ ಮಾಡುತ್ತಿದೆ. ಅಪ್ಪನನ್ನು ಕಳೆದುಕೊಂಡ ಮಗ ಎಂದು ಪ್ರಚಾರದಲ್ಲಿ ಪದೇ ಪದೇ ಹೇಳುತ್ತಿದ್ದು, ಉಪ ಚುನಾವಣೆಯಲ್ಲಿ ಗೆಲ್ಲಲು ಅನುಕಂಪದ ಅಸ್ತ್ರವನ್ನು ಪ್ರಯೋಗ ಮಾಡುತ್ತಿದೆ.

ಸೋಲಿನ ಅನುಕಂಪ

ಸೋಲಿನ ಅನುಕಂಪ

ಮತ್ತೊಂದು ಕಡೆ ಬಿಜೆಪಿಯೂ ಅನುಕಂಪದ ಅಸ್ತ್ರ ಪ್ರಯೋಗ ಮಾಡುತ್ತಿದೆ. ಶ್ರೀಕಾಂತ್ ಕುಲಕರ್ಣಿ ಅವರು 2008ರಲ್ಲಿ ಮೊದಲ ಬಾರಿಗೆ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದರು. ಆದರೆ, 2013, 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆದ್ದರಿಂದ, ಬಿಜೆಪಿ ಈ ಬಾರಿ ಅಭ್ಯರ್ಥಿ ಗೆಲ್ಲಿಸಿ ಎಂದು ಅನುಕಂಪ ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದೆ.

ಬಂಡಾಯದಿಂದಾಗಿ ಸೋಲು

ಬಂಡಾಯದಿಂದಾಗಿ ಸೋಲು

ಕಾಂಗ್ರೆಸ್ ಮತ್ತು ಬಿಜೆಪಿಗೆ ಆಂತರಿಕ ಭಿನ್ನಮತ ಆಂತಕ ತಂದಿತ್ತು. 2018ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಸಂಗಮೇಶ್ ನಿರಾಣಿ, ಕಾಂಗ್ರೆಸ್‌ನ ಶ್ರೀಶೈಲ ದಳವಾಯಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಎರಡೂ ಪಕ್ಷಗಳಿಗೆ ತಲೆನೋವು ತಂದಿದ್ದರು. ಆದರೆ, ಈ ಬಾರಿ ಇಬ್ಬರ ಜೊತೆಗೂ ಮಾತುಕತೆ ನಡೆಸಿದ್ದು, ಬಂಡಾಯದ ಬಿಸಿ ತಟ್ಟುವುದಿಲ್ಲ ಎಂಬ ನಿರೀಕ್ಷೆ ಇದೆ.

ಒಟ್ಟು ಮತದಾರರು

ಒಟ್ಟು ಮತದಾರರು

ಜಮಖಂಡಿ ಕ್ಷೇತ್ರದಲ್ಲಿ ಗಾಣಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪಂಚಮಸಾಲಿ ಲಿಂಗಾಯತರು, ಕುರುಬರು, ಮುಸ್ಲಿಂಮರು ನಿರ್ಣಾಯಕರಾಗಿದ್ದಾರೆ.

ಕ್ಷೇತ್ರದಲ್ಲಿ 198957 ಮತದಾರರು ಇದ್ದಾರೆ. ಪುರುಷರು 99883, ಮಹಿಳೆಯರು 98,883, ಇತರೆ 05.

English summary
BJP and Congress will play sympathy card in Jamakhandi by election scheduled on November 3, 2018. Anand Nyamagouda Congress and Shrikant Kulkarni BJP candidate for by election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X