ಬಾಗಲಕೋಟೆ: ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ ಇನ್ನಿಲ್ಲ
ಬಾಗಲಕೋಟೆ, ಮೇ 19 : ಇಳಕಲ್ ನ ವಿಜಯ ಮಹಾಂತೇಶ ಪೀಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ (90) ಇಂದು ಶನಿವಾರ ಲಿಂಗೈಕ್ಯರಾದರು. 'ಮಹಾಂತ ಜೋಳಿಗೆಯ ಹರಿಕಾರ' ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿತ್ತರಗಿ, ಇಳಕಲ್ ವಿಜಯಮಹಾಂತೇಶ್ವರ ಮಠದ 19ನೇ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದರು. ಬಸವಶ್ರೀ ಸೇರಿ ಕೆಲವು ಪ್ರಶಸ್ತಿ ಪುರಸ್ಕೃತರಾಗಿದ್ದರು.
ಇವರ ಜನ್ಮದಿನವನ್ನು ರಾಜ್ಯ ಸರ್ಕಾರ ವ್ಯಸನಮುಕ್ತ ದಿನ ಎಂದು ಘೋಷಿಸಿತ್ತು. 48 ವರ್ಷಗಳಿಂದ ಮಠಾಧೀಶರಾಗಿದ್ದ ಅವರು ಜನರ ದುಶ್ಚಟಗಳನ್ನು ದೂರವಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದರು. ಸಾವಿರಾರು ಜನರು ಸ್ವಾಮೀಜಿಯವರಿಂದ ಪ್ರೇರಿತರಾಗಿ ದುಶ್ಚಟ ಬಿಟ್ಟಿದ್ದರು.

ಶ್ರೀಗಳ ಪಾರ್ಥಿವ ಶರೀರ ಇಂದು ಸಂಜೆ 6 ಗಂಟೆಗೆ ಆಸ್ಪತ್ರೆಯಿಂದ ಆಗಮಿಸಲಿದ್ದು, ಶ್ರೀಮಠದಲ್ಲಿ ಇಡಲಾಗುತ್ತದೆ. ಭಾನುವಾರ ಬೆಳಗ್ಗೆ 8ಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಬೆಳಗ್ಗೆ 9ಕ್ಕೆ ವಿಜಯಮಹಾಂತರ ಕರ್ತೃ ಗದ್ದುಗೆಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications