ಬಾಗಲಕೋಟೆ: ಸಿದ್ದು ನ್ಯಾಮಗೌಡ ನಿಧನ ಹಿನ್ನೆಲೆ ಪ್ರತಿಭಟನೆ ಹಿಂಪಡೆದ ಬಿಜೆಪಿ

Recommended Video

      ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ್ರ ನಿಧನದ ಹಿನ್ನೆಲೆ ಬಿಜೆಪಿ ಪ್ರತಿಭಟನೆ ಹಿಂಪಡೆ

      ಬಾಗಲಕೋಟೆ, ಮೇ 28 : ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ನಿಧನ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ಹಿಂಪಡೆದಿದ್ದಾರೆ.

      'ರೈತ ಸಮುದಾಯಕ್ಕೆ ದ್ರೋಹ ಬಗೆದಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವರ್ತನೆ ಖಂಡಿಸಿ ಸೋಮವಾರ 28ರಂದು ರಾಜ್ಯದ ರೈತ ಸಮುದಾಯ ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಬಂದ್‌ ಆಚರಿಸಬೇಕು' ಎಂದು ಬಿಜೆಪಿ ಕರೆ ನೀಡಿತ್ತು.

      ಬಂದ್‌ಗೆ ಬೆಂಬಲ ಸೂಚಿಸಿ ಬಿಜೆಪಿ ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದರು.

      BJP leaders withdraw protest in Bagalakote after Jakhkhandi MLA Siddu B Nyamagouda dies

      ಬಂದ್‌ಗೆ ಹಲವು ರೈತ ಸಂಘಟನೆಗಳು ಬೆಂಬಲ ನೀಡಿವೆ. ಆದರೆ ಜಮಖಂಡಿ‌ ಮತಕ್ಷೇತ್ರದ ಶಾಸಕ ಸಿದ್ದು ನ್ಯಾಮಗೌಡರು ಇಂದು ಬೆಳಗಿನ ಜಾವ ಕಾರು ಅಪಘಾತದಲ್ಲಿ ಸಾವನ್ನಪ್ಪಿರುವುದರಿಂದ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದು ತೇರದಾಳ ಬಿಜೆಪಿ ಶಾಸಕ, ಜಿಲ್ಲಾಧ್ಯಕ್ಷ ಸಿದ್ದು ಸವದಿ ಸುದ್ದಿಗಾರರಿಗೆ ತಿಳಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+